ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Team Udayavani, Nov 26, 2019, 1:21 PM IST

vp-tdy-1

ಆಲಮಟ್ಟಿ: ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಎಲ್ಲ ಕಾಲುವೆಗಳಿಗೆ ಮಾರ್ಚ್‌ ಅಂತ್ಯದವರೆಗೆ ನೀರು ಹರಿಸಬೇಕು ಹಾಗೂ ಕೆಬಿಜೆಎನ್ನೆಲ್‌ ವ್ಯವಸ್ಥಾಪಕ ನಿರ್ದೇಶಕ ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಮುಖ್ಯ ಅಭಿಯಂತರರ ಮೂಲಕ ಸೋಮವಾರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, 2019-20ನೇ ಸಾಲಿನ ಹಿಂಗಾರು ಹಂಗಾಮಿನ ಕೃ.ಮೇ.ಯೋ. ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಅವರು ಸಭೆಯಲ್ಲಿ ತೀರ್ಮಾನಿಸಿದಂತೆ ಕೃ.ಮೇ.ಯೋ. ಎಲ್ಲ ಕಾಲುವೆಗಳಿಗೆ ಡಿಸೆಂಬರ್‌ 1ರಿಂದ 2020ರ ಮಾರ್ಚ್‌ 20ರವರೆಗೆ 14 ದಿನ 8 ದಿನ ಬಂದ್‌ ಮಾಡಿ ವಾರಾಬಂ ಧಿ ಪದ್ದತಿ ಅನುಸರಿಸಿ ನೀರು ಹರಿಸಲಾಗುವುದು ಎಂದು ತಿಳಿಸಿದ್ದರು.

ಆದರೆ ಆಲಮಟ್ಟಿ ಅಣೆಕಟ್ಟು ವೃತ್ತ ಅಧೀಕ್ಷಕ ಅಭಿಯಂತರು ಹಾಗೂ ಮುಳವಾಡ ಏತ ನೀರಾವರಿ ಯೋಜನೆಯ ವೃತ್ತ ಅಧಿಧೀಕ್ಷಕ ಅಭಿಯಂತರರು ಒಂದೊಂದು ರೀತಿಯಾಗಿ ಒಬ್ಬರು 7 ದಿನ ಚಾಲು 7 ದಿನ ಬಂದ್‌ ಇನ್ನೊಬ್ಬರು 8 ದಿನ ಚಾಲು 7 ದಿನ ಬಂದ್‌ ಮಾಡಿ ವಾರಾಬಂದಿ  ಪದ್ಧತಿಯಲ್ಲಿ ರೈತರ ಜಮೀನಿಗೆ ನೀರು ಹರಿಸಲಾಗುವದು ಎಂದು ಪ್ರಕಟಣೆ ನೀಡಿದ್ದಾರೆ. ಅಧಿಕಾರಿಗಳೇ ನಿರ್ಧಾರ ಕೈಗೊಳ್ಳುವುದಾದರೆ ನೀರಾವರಿ ಸಲಹಾಸಮಿತಿ ಸಭೆ ನಡೆಸುವುದಾದರೂ ಏಕೆ? ಸಭೆ ಅಧ್ಯಕ್ಷರು ಸಭೆ ತೀರ್ಮಾನವನ್ನು ತಿಳಿಸಿದ ನಂತರವೂ ಅಧಿಕಾರಿಗಳು ಈ ರೀತಿ ಮಾಡುವಂತಿದ್ದರೆ ಸಲಹಾ ಸಮಿತಿ ಅವಶ್ಯವಾದರೂ ಏನು ಎಂದು ಪ್ರಶ್ನಿಸಿದರು.

ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿರುವ ಎಲ್ಲ ಕಾಲುವೆಗಳು ಏತ ನೀರಾವರಿ ಯೋಜನೆಗಳಾಗಿವೆ. ಕಳೆದ ಬಾರಿ ಮುಳವಾಡ ಏತ ನೀರಾವರಿ ಯೋಜನೆ ಹಾಗೂ ಆಲಮಟ್ಟಿ ಬಲದಂಡೆ ಕಾಲುವೆ ನೀರೆತ್ತುವ ಪಂಪ್‌ಗ್ಳು ಕೆಟ್ಟಿದ್ದರ ಪರಿಣಾಮ ರೈತರ ಜಮೀನುಗಳಿಗೆ ನೀರು ಹೋಗಲಿಲ್ಲ. ಜಲಾಶಯದ ಇತಿಹಾಸದಲ್ಲಿಯೇ ನವೆಂಬರ್‌ವರೆಗೆ ಜಲಾಶಯಕ್ಕೆ ನೀರು ಹರಿದು ಬಂದಿರಲಿಲ್ಲವಾದರೂ ಈ ಬಾರಿ ನವೆಂಬರ್ ತಿಂಗಳಿನಲ್ಲಿಯೂ ಹರಿದುಬಂದಿದೆ. ಜಲಾಶಯದಲ್ಲಿ ಇಷ್ಟೊಂದು ನೀರಿದ್ದರೂ ಕೂಡ ವಾರಾಬಂ ದಿ ಪದ್ಧತಿ ಈ ಭಾಗಕ್ಕೆ ಅವಶ್ಯವಿರಲಿಲ್ಲವಾದರೂ ಸಭೆಯಲ್ಲಿ ತೀರ್ಮಾನಿಸಿದ ದಿನಗಳ ಬದಲಾಗಿ 7 ದಿನ ಚಾಲು ಹಾಗೂ 4 ದಿನ ಬಂದ್‌ ಮಾಡಿ ವಾರಾಬಂ ದಿ ಪದ್ಧತಿ ಅನುಸರಿಸಿ ರೈತರ ಜಮೀನಿಗೆ ನೀರು ಕೊಡಬೇಕು ಎಂದರು.

ಕೃ.ಮೇ.ಯೋಜನೆ ಕಾಲಮಿತಿಯಲ್ಲಿಪೂರ್ಣಗೊಳಿಸಲು 1994ರಲ್ಲಿ ಕೃಷ್ಣಾಭಾಗ್ಯ ಜಲನಿಗಮ ಸ್ಥಾಪಿಸಿ ಆಲಮಟ್ಟಿಯಲ್ಲಿಯೇ ಕಚೇರಿ ಆರಂಭಿಸಲಾಗಿತ್ತು. ನಂತರ ಬಂದ ಅಧಿಕಾರಿಯೊಬ್ಬರು ಆಲಮಟ್ಟಿಯಲ್ಲಿದ್ದ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಿದ್ದರು. ಆದರೆ ಸರ್ಕಾರ ಎರಡೆರಡು ಬಾರಿ ಬೆಂಗಳೂರಿನಲ್ಲಿರುವ ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಿಸುವಂತೆ ಆದೇಶ ನೀಡಿದರೂ ಕೂಡ ಅಧಿಕಾರಿಗಳು ಮಾತ್ರ ಬೆಂಗಳೂರಿನಲ್ಲಿಯೇ ಕಚೇರಿಯಿರಿಸಿದ್ದಾರೆ. ಇದರ ವಿರುದ್ಧ ಸಂಘಟನೆವತಿಯಿಂದ ಅನಿರ್ದಿಷ್ಟ ಹೋರಾಟ ನಡೆಸಿ ಆಲಮಟ್ಟಿಗೆ ಕಚೇರಿ ಬರುವವರೆಗೂ ಸತ್ಯಾಗ್ರಹ ಕೈ ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಕಚೇರಿಯನ್ನು ಬೆಂಗಳೂರಿನಲ್ಲಿಟ್ಟು ಕೃ.ಮೇ. ಯೋಜನೆ ಸಾಕಾರಗೊಳ್ಳುವುದಾದರೂ ಯಾವಾಗ? ಇನ್ನು ಸ್ಕೀಂ ಗಳ ಹೆಸರಿನಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನತೆಯನ್ನು ವಂಚಿಸಲಾಗುತ್ತಿದೆ ಎಂದರು. ಇದಕ್ಕೂ ಮೊದಲು ಮುಖ್ಯ ಅಭಿಯಂತರರ ಕಚೇರಿ ಎದುರು ಧರಣಿನಡೆಸಿ ಸರ್ಕಾರದ ರೈತ ವಿರೋಧಿ  ನೀತಿ ಖಂಡಿಸಿ ಘೋಷಣೆಗಳನ್ನು ಕೂಗಿದರು.

ಮನವಿಯನ್ನು ಮುಖ್ಯ ಅಭಿಯಂತರರ ಪರವಾಗಿ ಉಪಮುಖ್ಯ ಅಭಿಯಂತರರಾದ ಎಂ.ಎನ್‌. ಪದ್ಮಜಾ ಸ್ವೀಕರಿಸಿದರು. ಧರಣಿಯಲ್ಲಿ ಸದಾಶಿವ ಬರಟಗಿ, ಸಿದ್ರಾಮ ಅಂಗಡಗೇರಿ, ಹೊನಕೇರಪ್ಪ ತೆಲಗಿ, ಕೃಷ್ಣಪ್ಪ ಬಮ್ಮರಡ್ಡಿ, ದಾವಲಸಾಬ ಪಿಂಜಾರ, ರಾಮಣ್ಣ ವಾಲೀಕಾರ, ಶಾರದಾ ಲಮಾಣಿ, ಚಂದ್ರಾಮ ತೆಗ್ಗಿ, ಮಾಚಪ್ಪ ಹೊರ್ತಿ, ರಾಜೇಸಾಬ ವಾಲೀಕಾರ ಮೊದಲಾದವರಿದ್ದರು

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.