ಹತ್ಯಾಚಾರಿಗಳಿಗೆ ಗಲ್ಲು ವಿಧಿಸಿ

Team Udayavani, Feb 3, 2018, 3:19 PM IST

vij-4.jpg

ಮುದ್ದೇಬಿಹಾಳ: ಇತ್ತೀಚೆಗೆ ಬೀದರ ಜಿಲ್ಲೆ ಭಾಲ್ಕಿ ತಾಲೂಕು ಕೋಸಮ್‌ ಗ್ರಾಮದಲ್ಲಿ, ಎರಡು ವರ್ಷದ ಹಿಂದೆ ಮುದ್ದೇಬಿಹಾಳ ತಾಲೂಕು ಬಿಜೂರು ಗ್ರಾಮದಲ್ಲಿ ನಡೆದ ಹಡಪದ ಸಮಾಜಕ್ಕೆ ಸೇರಿದ ಇಬ್ಬರು ಯುವತಿಯರ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಹಡಪದ ಅಪ್ಪಣ್ಣ ಸಮಾಜ ಕ್ಷೇಮಾಭಿವೃದ್ಧಿ ಸಂಘ, ಸವಿತಾ ಸಮಾಜ ಸೇವಾ ಸಂಘ ಹಾಗೂ ವಿವಿಧ ಸಂಘಟನೆ ಸದಸ್ಯರು ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಮಿನಿ ವಿಧಾನಸೌಧಕ್ಕೆ ಆಗಮಿಸಿದ ಪ್ರತಿಭಟನಾಕಾರರು ಕೋಸಮ್‌ ಗ್ರಾಮದ ಯುವತಿಯ ಹತ್ಯೆ ಆರೋಪಿ ಶಮಸುದ್ದೀನ್‌ ಎಂಬಾತ ತಪ್ಪು ಒಪ್ಪಿಕೊಂಡಿದ್ದಾನೆ. ಆತನಿಗೆ ಗಲ್ಲು ಶಿಕ್ಷೆ ದೊರಕುವಂತೆ ನೋಡಿಕೊಳ್ಳಬೇಕು. ಬಿಜೂರು ಗ್ರಾಮದ ಯುವತಿ ಪ್ರಕರಣದಲ್ಲಿ ಆರೋಪಿಗಳು ರಾಜಾರೋಷವಾಗಿ ಹೊರಗಡೆ ತಿರುಗಾಡಿಕೊಂಡಿದ್ದಾರೆ.

ಈ ಪ್ರಕರಣ ಮತ್ತೂಮ್ಮೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಇವರಿಗೂ ಗಲ್ಲು ಶಿಕ್ಷೆ ದೊರಕುವಂತೆ ನೋಡಿಕೊಳ್ಳಬೇಕು. ಅಂದಾಗ ಮಾತ್ರ ರಾಜ್ಯದಲ್ಲಿ ಹೆಚ್ಚುತ್ತಿರುವ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವುದು ಸಾಧ್ಯವಾಗುತ್ತದೆ ಎಂದರು. 

ತಂಗಡಗಿಯ ಹಡಪದ ಅಪ್ಪಣ್ಣ ಸಂಸ್ಥಾನಮಠದ ಅನ್ನದಾನಭಾರತಿ ಅಪ್ಪಣ್ಣ ಶ್ರೀ, ಹೇಮರಡ್ಡಿ ಮಲ್ಲಮ್ಮ ಸೇವಾ ಸಂಘದ ಅಧ್ಯಕ್ಷ ಶೃಂಗಾರಗೌಡ ಪಾಟೀಲ, ಬಿಜೆಪಿ ಮುಖಂಡರಾದ ಆರ್‌.ಎಸ್‌. ಪಾಟೀಲ ಕೂಚಬಾಳ, ಮಂಗಳಾದೇವಿ ಬಿರಾದಾರ, ಪರಶುರಾಮ ಪವಾರ, ಸಿದ್ದರಾಜ ಹೊಳಿ, ದಲಿತ ಮುಖಂಡ ಡಿ.ಬಿ. ಮುದೂರ, ವಕೀಲರ ಸಂಘದ ಮುಖಂಡ ವಿಜಯಮಹಾಂತೇಶ ಸಾಲಿಮಠ ಸಂತ್ರಸ್ತ ಕುಟುಂಬಗಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.

ಕೊಲೆಗೀಡಾದ ಯುವತಿಯರ ಕುಟುಂಬಕ್ಕೆ ಸೂಕ್ತ ಪರಿಹಾರ, ಭದ್ರತೆ ಒದಗಿಸಬೇಕು. ಇಂಥ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಪ್ರತಿಭಟನೆ ಹಿನ್ನೆಲೆ ಪಟ್ಟಣದ ಕಟಿಂಗ್‌ ಶಾಪ್‌ಗ್ಳನ್ನು ಸ್ವಯಂಪ್ರೇರಿತವಾಗಿ ಬಂದ್‌ ಮಾಡಲಾಗಿತ್ತು. ಮನವಿ ಸಲ್ಲಿಕೆಗೂ ಮುನ್ನ ಬನಶಂಕರಿ ದೇವಸ್ಥಾನದಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.