Udayavni Special

ರೈತರ ಧರಣಿಗೆ ಜನಪ್ರತಿನಿಧಿಗಳ ಬೆಂಬಲ


Team Udayavani, Dec 9, 2018, 11:38 AM IST

vij-1.jpg

ಚಡಚಣ: ಇಂಡಿ, ನಾಗಠಾಣ ಹಾಗೂ ಬಬಲೇಶ್ವರ ಮತಕ್ಷೇತ್ರದ ಹಳ್ಳಿಗಳಿಗೆ ಅನುಕೂಲವಾಗುವ ನಿಯೋಜಿತ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಝಳಕಿ ಗ್ರಾಮದ ಆರ್‌ಟಿಒ ಕಚೇರಿ ಪಕ್ಕದಲ್ಲಿ ಭಾರತೀಯ ಕಿಸಾನ್‌ ಸಂಘದ ನೇತೃತ್ವದಲ್ಲಿ ರೈತರು ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಶನಿವಾರ 4ನೇ ದಿನಕ್ಕೆ ಕಾಲಿಟ್ಟಿದ್ದು ವಿರೋಧ ಪಕ್ಷದ ಉಪ ನಾಯಕ ಹಾಗೂ ಮುಧೋಳ ಶಾಸಕ ಗೋವಿಂದ ಕಾರಜೋಳ ಭೇಟಿ ನೀಡಿ ಬೆಂಬಲ ಸೂಚಿಸಿದರು.

ಈ ವೇಳೆ ಮಾತನಾಡಿದ ಅವರು, ಕೃಷ್ಣಾ ಬಿಸ್ಕೀಂ ಯೋಜನೆ ಸಂಪೂರ್ಣ ಜಾರಿ ಹೋರಾಟಕ್ಕೆ ಬಿಜೆಪಿ ಬೆಂಬಲವಿದೆ. ಕೃಷ್ಣಾ ನ್ಯಾಯ ಮಂಡಳಿ ನ್ಯಾ| ಬ್ರಿಜೇಶಕುಮಾರ ಅವರು 2012ನೇ ಸಾಲಿನಲ್ಲಿ ತೀರ್ಪನ್ನು ಪ್ರಕಟಣೆ ಮಾಡಿ ಕೃಷ್ಣಾ ಬಿ ಸ್ಕೀಂನಲ್ಲಿ 177 ಟಿಎಂಸಿ ನೀರನ್ನು ನಮಗೆ ಹಂಚಿಕೆ ಮಾಡಿದ್ದಾರೆ. ಈ ನೀರನ್ನು ಬರದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಹಂಚಿಕೆ ಮಾಡಿ ಈ ಜಿಲ್ಲೆಗಳಲ್ಲಿ ಬಾಕಿ ಉಳಿದಿರುವ ಎಲ್ಲ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್‌ ಸಂಘದ ಉತ್ತರ ಪ್ರಾಂತ ಅಧ್ಯಕ್ಷ ಗುರುನಾಥ ಬಗಲಿ, ರೈತ ಮುಖಂಡರಾದ ಶ್ರೀಮಂತ ಕಾಪ್ಸೆ, ಮುದ್ದಣ್ಣಗೌಡ ಪಾಟೀಲ, ಅಶೋಕ ಬೋರಗಿ, ಎಸ್‌.ಎಂ. ಬಿರಾದಾರ, ಶಂಕರ ತೆಲಸಂಗಿ, ರಾಮಚಂದ್ರ ಮಹೇಂದ್ರಕರ, ಚಂದ್ರಶೇಖರ ಖಾನಾಪುರ, ಶಿವಗೊಂಡ ಕಾಡೆ, ಕಲ್ಲಪ್ಪ ಬಳಗಾನೂರ, ಸಿದ್ದಣ್ಣ ಬಿರಾದಾರ, ಬಿ.ಎಂ. ಬಿರಾದಾರ, ಈರಣ್ಣ ವಾಲಿ, ದುಂಡಪ್ಪ ಖಾನಾಪುರ, ಶಶಿಗೌಡ ಪಾಟೀಲ, ಅಶೋಕ ಕಾಪ್ಸೆ ಸೇರಿಂದತೆ ಸಾವಿರಾರು ರೈತರು ಪಾಲ್ಗೊಂಡಿದ್ದರು. 

ಶಾಸಕ ಯಶವಂತರಾಯಗೌಡ ಭೇಟಿ: ಭಾರತೀಯ ಕಿಸಾನ್‌ ಸಂಘದ ನೇತೃತ್ವದಲ್ಲಿ ರೈತರು ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಭೇಟಿ ನೀಡಿ ರೈತರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಲಿಲ್ಲ. ಈ ವೇಳೆ ಶಾಸಕರು ಮಾತನಾಡಿ, ಈ ನೀರಾವರಿ ಯೋಜನೆ ಕುರಿತಂತೆ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಮಂತ್ರಿಗಳೊಂದಿಗೆ ಚರ್ಚಿಸಿ ತಮ್ಮ ಬೇಡಿಕೆಯನ್ನು ಪ್ರಾಮಾಣಿಕವಾಗಿ ಈಡೇರಿಸುವುದಾಗಿ ಹೇಳಿದರು. 

ರೈತರ ನಿಯೋಗವನ್ನು ಕೂಡ ಮುಖ್ಯಮಂತ್ರಿ ಹಾಗೂ ನೀರಾವರಿ ಮಂತ್ರಿಗಳಿಗೆ ಭೇಟಿ ಮಾಡಿಸಿ ಮನವರಿಕೆ ಮಾಡಿಕೊಟ್ಟು ಯೋಜನೆ ಜಾರಿಗೊಳಿಸಲು ಸರಕಾರದ ಮೇಲೆ ಒತ್ತಡ ಹೇರುವುದಾಗಿ ಹೇಳಿದ ಅವರು, ಕೂಡಲೇ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಡಿ. 9ರಂದು ಬೆಳಗ್ಗೆ 10ಕ್ಕೆ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ನಾಗಠಾಣ ಶಾಸಕ ದೇವಾನಂದ
ಚವ್ಹಾಣ ಹಾಗೂ ನಾನೂ ಕೂಡ ರೈತರೊಂದಿಗೆ ಸಮಾಲೋಚಿಸಲು ಬರುವುದಾಗಿ ಹೇಳಿದರು.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿಕೋಟಾ ತಾಲೂಕಿನಲ್ಲಿ ಮತ್ತೆ ಭೂಕಂಪ : ಭಯದಿಂದ‌ ಮನೆಯಿಂದ ಹೊರ ಓಡಿದ ಜನ

ತಿಕೋಟಾ ತಾಲೂಕಿನಲ್ಲಿ ಮತ್ತೆ ಭೂಕಂಪನ : ಭಯಗೊಂಡು ಮನೆಯಿಂದ ಹೊರ ಓಡಿದ ಜನ

ಚುನಾವಣಾ ಕರ್ತವ್ಯ ಲೋಪ : ಮೂವರು ಶಿಕ್ಷಕರ ಅಮಾನತು

ಚುನಾವಣಾ ಕರ್ತವ್ಯ ಲೋಪ : ಮೂವರು ಶಿಕ್ಷಕರ ಅಮಾನತು

23

ಸದನದಲ್ಲಿ ರೈತರ ಜಮೀನು ದಾರಿ ಸಮಸ್ಯೆ ಚರ್ಚಿಸಲು ಡಿ.ಕೆ. ಶಿವಕುಮಾರಗೆ ಆಗ್ರಹ

22

ಡಾ|ಅಬ್ದುಲ್‌ಕಲಾಂ ಕನಸು ನನಸಾಗಿಸಿ

21

ಇಂದಿನಿಂದ ಚುನಾವಣಾ ಪ್ರಚಾರ: ದೇವೇಗೌಡ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.