ರಸ್ತೆ ಅತಿಕ್ರಮಣ ತೆರವಿಗೆ ಆಗ್ರಹಿಸಿ ಮನವಿ

Team Udayavani, Feb 1, 2022, 4:48 PM IST

28alamela

ಆಲಮೇಲ: ಪಟ್ಟಣದ ಬಸವ ನಗರ ಮತ್ತು ಗಣೇಶ ನಗರದ ಮೂಲಕ ರುಕುಂಪುರ ರಸ್ತೆ ಅತಿಕ್ರಮಣಗೊಂಡಿದ್ದು ಅವುಗಳು ತೆರವುಗೊಳಿಸಿ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿ ಸೋಮವಾರ ಸಾರ್ವಜನಿಕರು ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಪಪಂ ಸದಸ್ಯ ಸಂಜುಕುಮಾರ ಎಂಟಮಾನ ಮಾತನಾಡಿ, ಬಸವ ನಗರ ಮತ್ತು ಗಣೇಶ ನಗರಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಅಂಗಡಿಗಳು ಅನ ಧಿಕೃತವಾಗಿ ಇಟ್ಟಿದ್ದು ಇದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಅನಧಿಕೃತವಾಗಿ ನಿರ್ಮಿಸಿರುವ ಅಂಗಡಿಗಳು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಬಸವ ನಗರಕ್ಕೆ ಹೋಗುವ ರಸ್ತೆಯ ಒಂದು ಬದಿ ಅಂಜುಮನ್‌ ಕಾಂಪ್ಲೇಕ್ಸ ಇದ್ದು ಅದರ ಪಕ್ಕದಲ್ಲಿ ಅನಧಿಕೃತವಾಗಿ ಡಬ್ಟಾ ಮತ್ತು ಕಟ್ಟಡದ ಅಂಗಡಿಗಳನ್ನು ಇಟ್ಟಿರುತ್ತಾರೆ. ಅದರಂತೆ ಇದೇ ರಸ್ತೆಗೆ ನಮ್ಮೂರಿನ ಪವಿತ್ರ ಗ್ರಾಮ ದೇವರ ಪೀರ ಗಾಲೀಬಸಾಬ ದರ್ಗಾವಿದು ಜಾತ್ರೆಯ ಸಮಯದಲ್ಲಿ ಬರುವ ಭಕ್ತಾ ದಿಗಳಿಗೆ ದೇವಸ್ಥಾನಕ್ಕೂ ಹೋಗಿ ಬರುವ ರಸ್ತೆಯ ಅನಾನುಕೂಲವಿದೆ. ಇದೆಲ್ಲವನ್ನು ಅರಿತುಕೊಂಡು ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕರಿಗೆ ಸಂಚಾರಕ್ಕೆ ಅನುವು ಮಾಡಿಕೊಬೇಕು ಎಂದು ವಿನಂತಿಸಿದರು.

ರಸ್ತೆ ವಿಷಯದ ಬಗ್ಗೆ 2019ರಲ್ಲೆ ಪಟ್ಟಣ ಪಂಚಾಯಿತಿಗೆ ಮನವಿ ನೀಡಿದ್ದು ಇನ್ನುವರೆಗೂ ಯಾವುದೆ ತೆರವು ಕಾರ್ಯ ಮಾಡಿಲ್ಲ. ಇನ್ನು ಒಂದು ವಾರ ಕಾಲಾವಕಾಶ ನೀಡಲಾಗುವುದು. ಅಲ್ಲಿವರೆಗೂ ಅತಿಕ್ರಮಣ ತೆರವುಗೊಳಿಸದಿದ್ದರೆ ಬಸವ ನಗರ ಮತ್ತು ಗಣೇಶ ನಗರ ಹಾಗೂ ಗ್ರಾಮಸ್ಥರೊಂದಿಗೆ ಪಪಂಗೆ ಬೀಗ ಜಡಿದು ಪ್ರತಿಭಟಿಸಲಾಗುವದು ಎಂದು ಎಚ್ಚರಿಕೆ ನೀಡಿದರು.

ಪಪಂ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ ಮನವಿ ಸ್ವೀಕರಿಸಿ ಮಾತನಾಡಿ, ಈ ವಿಷಯದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಅವರ ಆದೇಶದ ಮೇರೆಗೆ ಕ್ರಮ ಕೈಗೊಳ್ಳಲಾಗುವದು ಎಂದು ಹೇಳಿದರು.

ಪಪಂ ಸದಸ್ಯರಾದ ಚಂದು ಹಳೆಮನಿ, ಗ್ರಾಮಸ್ಥರಾದ ಖಂಡು ಸೊಲಂಕರ, ಪ್ರದೀಪ ವಾವರೆ, ನಿಂಬೋಜಿ ಚೋರಮಲ್ಲೆ, ಅಬ್ದುಲ್‌ ಸೇರಿದಂತೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.