30ರಂದು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಗೋವಿಂದ ಕಾರಜೋಳ
ಚಡಚಣ ತಾಲೂಕು ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ.
Team Udayavani, Jan 12, 2021, 4:38 PM IST
ಚಡಚಣ: ಪಟ್ಟಣದಲ್ಲಿ ನಿರ್ಮಿಸಲಾದ ನೂತನ ಪ್ರವಾಸಿ ಮಂದಿರ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಜ. 30ರಂದು ಚಡಚಣದಲ್ಲಿ ನೆರವೇರಿಸಲಾಗುವದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ನೂತನ ಚಡಚಣ ತಾಲೂಕು ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ. ಪಟ್ಟಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್‌ಗೆ ಸೂಚಿಸಿದ್ದೇನೆ. ಸೂಕ್ತ ನಿವೇಶನ ದೊರೆಯದಿದ್ದರೆ ಪ್ರವಾಶಿ ಮಂದಿರ ಆವರಣದಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲಾಗುವದು ಎಂದರು.
ಝಳಕಿ -ಶಿರಾಡೋಣ ರಾಜ್ಯ ಹೆದ್ದಾರಿ ಪುನರ್ ನಿರ್ಮಾಣ ಹಾಗೂ ಪಟ್ಟಣದಲ್ಲಿ ಅರ್ಧಕ್ಕೆ ನಿಂತಿರುವ ಪ್ರಮುಖ ರಸ್ತೆ ಕಾಮಗಾರಿ ತಕ್ಷಣ ಪುನರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವದು. ಶಾಸಕ ದೇವಾನಂದ ಚವ್ಹಾಣ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ನಾನು ತಡೆಯೊಡ್ಡುತ್ತಿದ್ದೇನೆ ಎಂದು ಆರೋಪಿಸುತ್ತಿರುವದು ಸರಿಯಲ್ಲ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಲ್ಲ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ರಾಮ ಅವಟಿ, ಜಿಪಂ ಸದಸ್ಯ ಭಿಮಾಶಂಕರ ಬಿರಾದಾರ, ಶಿವಸರಣ ಭೈರಗೊಂಡ, ಜಿಪಂ ಮಾಜಿ ಉಪಾಧ್ಯಕ್ಷ ಶ್ರೀಶೈಲಗೌಡ
ಬಿರಾದಾರ, ಮುಖಂಡರಾದ ಅಪ್ಪುಗೌಡ ಪಾಟೀಲ, ಕಲ್ಲು ಉಟಗಿ, ಪ್ರಭಾಕರ ನಿರಾಳೆ, ಪೀರಪ್ಪ ಅಗಸರ, ಎ.ಆರ್. ಕುಲಕರ್ಣಿ, ಮಲ್ಲೇಶಪ್ಪ ಡೊಳ್ಳಿ,
ತಹಶೀಲ್ದಾರ್ ಸುರೇಶ ಚವಲರ, ಕಂದಾಯ ಉಪ ವಿಭಾಗಾಧಿಕಾರಿ ರಾಹುಲ್ ಶಿಂಧೆ, ಪಪಂ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಸಿಪಿಐ ಚಿದಂಬರ
ಮಡಿವಾಳ ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ
ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು
ಶೇ.7.3ರ ದರದಲ್ಲಿ ಭಾರತದ ಅರ್ಥ ವ್ಯವಸ್ಥೆ ಬೆಳವಣಿಗೆ: ವಿಶ್ವಸಂಸ್ಥೆ
ರಫೇಲ್ ವಿರಾಟ ರೂಪ, ವೈವಿಧ್ಯತೆಯ ವೈಭವ : ಗಣರಾಜ್ಯ ಪರೇಡ್ ನಲ್ಲಿ ರಕ್ಷಣಾಪಡೆಗಳ ಬಲಪ್ರದರ್ಶನ
ರೈತರು, ಕಾರ್ಮಿಕರು, ಜನರ ಧ್ವನಿಯಾಗಿ ಕಾಂಗ್ರೇಸ್ ಕೆಲಸ ಮಾಡಲಿದೆ : ಡಿಕೆಶಿ