ಕಾಲಜ್ಞಾನಿಯಾಗಿದ್ದ ಸಂತ ಸೇವಾಲಾಲ್‌: ನಾಡಗೌಡ


Team Udayavani, Feb 16, 2018, 4:33 PM IST

vij-2.jpg

ಮುದ್ದೇಬಿಹಾಳ: ಸಂತ ಸೇವಾಲಾಲರು ಕಾಲಜ್ಞಾನಿಯಾಗಿದ್ದರು ಎಂದು ಇತಿಹಾಸದಲ್ಲಿ ಉಲ್ಲೇಖವಿದೆ. ಇಂತಹ ಮಹಾನ್‌ ಸಂತನನ್ನು ದೈವವಾಗಿ ಪೂಜಿಸುತ್ತಿರುವ ಬಂಜಾರ ಸಮಾಜದವರು ಎಲ್ಲ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಬೇಕು ಎಂದು ಸ್ಥಳೀಯ ಶಾಸಕ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಸಿ.ಎಸ್‌. ನಾಡಗೌಡ ಹೇಳಿದರು.

ಇಲ್ಲಿನ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಂತ ಶ್ರೀ ಸೇವಾಲಾಲರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಬಂಜಾರ ನಿಗಮ ಸ್ಥಾಪನೆಯಾದ ನಂತರ ತಾಲೂಕಿನ ಬಂಜಾರ ಸಮಾಜಕ್ಕೆ ಸರ್ಕಾರ ನೀಡಿದ ಅಭಿವೃದ್ಧಿ ಕೊಡುಗೆಗಳ ಕುರಿತು ಶಾಸಕರು ಮಾಹಿತಿ ನೀಡಿದರು.

ವಿಜಯಪುರದ ನಿವೃತ್ತ ಪ್ರಾಚಾರ್ಯ ಕೆ.ಎಲ್‌. ನಾಯಕ ಸೇವಾಲಾಲ್‌ ಮತ್ತು ಬಂಜಾರ ಸಮಾಜದ ಕುರಿತು ವಿಶೇಷ
ಉಪನ್ಯಾಸ ನೀಡಿದರು. ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ತಾಲೂಕು ಬಂಜಾರ ಸೇವಾ ಸಂಘದ ಅಧ್ಯಕ್ಷ ನಾನಪ್ಪ ಲಮಾಣಿ ಬಂಜಾರ ಸಮಾಜ ಕುರಿತು ಮಾತನಾಡಿದರು.

ಜಿಪಂ ಸದಸ್ಯೆ ಪ್ರೇಮಬಾಯಿ ಚವ್ಹಾಣ, ತಾಪಂ ಸದಸ್ಯ ಪ್ರೇಮಸಿಂಗ್‌ ಚವ್ಹಾಣ, ತಹಶೀಲ್ದಾರ್‌ ಎಂಎಎಸ್‌ ಬಾಗವಾನ, ತಾಪಂ ಇಒ ಡಾ| ಸುರೇಶ ಭಜಂತ್ರಿ, ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ, ಸಮಾಜ ಕಲ್ಯಾಣಾಧಿಕಾರಿ ಎನ್‌.ಆರ್‌. ಉಂಡಿಗೇರಿ, ಪುರಸಭೆ ಸದಸ್ಯ ಕೃಷ್ಣಾಜಿ ಪವಾರ, ಗೋವಾ ವಿಮೋಚನಾ ಹೋರಾಟಗಾರ ಬಿ.ಎಚ್‌. ಮಾಗಿ, ತಾಲೂಕು ಕಸಾಪ ಅಧ್ಯಕ್ಷ ಎಂ.ಬಿ. ನಾವದಗಿ, ಕರ್ನಾಟಕ ಕೋ ಆಪ್‌ ಬ್ಯಾಂಕ್‌ ನಿರ್ದೇಶಕ ವಕೀಲ ಶಶಿಕಾಂತ ಮಾಲಗತ್ತಿ, ದೈಹಿಕ ಶಿಕ್ಷಣಾಧಿಕಾರಿ ಎಸ್‌.ಬಿ. ಚಲವಾದಿ, ಲಕ್ಷ್ಮೀಬಾಯಿ ರಾಠೊಡ, ರಾಮಚಂದ್ರ ಲಮಾಣಿ, ಬಿ.ಎಸ್‌. ಜಾಧವ, ಬಿ.ಎಸ್‌. ಲಮಾಣಿ, ಲಕ್ಷ್ಮಣ ಲಮಾಣಿ ಮತ್ತಿತರರು ವೇದಿಕೆಯಲ್ಲಿದ್ದರು.

ಬಂಜಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪುಂಡಲಿಕ ನಾಯಕ ಸ್ವಾಗತಿಸಿದರು. ಟಿ.ಡಿ. ಲಮಾಣಿ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಆಲಮಟ್ಟಿ ರಸ್ತೆಯಲ್ಲಿರುವ ಸಂತ ಸೇವಾಲಾಲರ ವೃತ್ತಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಲಂಬಾಣಿ ವೇಷಧಾರಿಗಳಾದ ಬಂಜಾರ ಮಹಿಳೆಯರ ನೃತ್ಯ, ಪೂರ್ಣಕುಂಭ ಸಮೇತ ಸೇವಾಲಾಲರ ಭಾವಚಿತ್ರ ಮೆರವಣಿಗೆ ಮಿನಿ ವಿಧಾನಸೌಧದವರೆಗೂ ಸಾಗಿತು. ಶಾಸಕ ನಾಡಗೌಡ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಬಂಜಾರ ಸಮಾಜದ ಮುಖಂಡರು, ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.