ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರ ಜಿಲ್ಲೆಯಲ್ಲಿ 144 ಕಲಂರನ್ವಯ ನಿಷೇಧಾಜ್ಞೆ ಜಾರಿ


Team Udayavani, Mar 15, 2022, 4:45 PM IST

ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರ ಜಿಲ್ಲೆಯಲ್ಲಿ 144 ಕಲಂರನ್ವಯ ನಿಷೇಧಾಜ್ಞೆ ಜಾರಿ

Representative Image Used

ವಿಜಯಪುರ: ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ಹೊರಬಿದ್ದಿರವ ಹಿನ್ನಲೆಯಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮುಂಜಾಗೃತ ಕ್ರಮವಾಗಿ ವಿಜಯಪುರ ಜಿಲ್ಲೆಯಾದ್ಯಂತ ಮಾ. 15 ರಿಂದ 17 ರ ಬೆಳಗ್ಗೆ 6 ಗಂಟೆ ವರೆಗೆ ಷರತ್ತು‌ ಬದ್ಧವಾಗಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುನಿಲಕುಮಾರ ಆದೇಶ ಹೊರಡಿಸಿದ್ದಾರೆ.

ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಪ್ರತಿಬಂಧಕ ಆಜ್ಞೆಯನ್ನು ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಿದೆ. ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ರ್ಯಾಲಿಗಳನ್ನು ನಿಷೇಧಿಸಲಾಗಿದೆ.

ಕಾನೂನು-ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಿದೆ.  ಶವ ಸಂಸ್ಕಾರಕ್ಕೆ, ಹೊಟೇಲ್‍ಗಳಿಗೆ, ಚಲನಚಿತ್ರ ಮಂದಿರಗಳಿಗೆ, ಧಾರ್ಮಿಕ ಮತ್ತು ಮದುವೆ ಮೆರವಣಿಗೆ ನಡೆಸಲು‌ ಈ ಆದೇಶ ಅನ್ವಯಿಸುವುದಿಲ್ಲ.

ಇದನ್ನೂ ಓದಿ:ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗುವುದಿಲ್ಲ; ಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ವಿದ್ಯಾರ್ಥಿನಿಯರು

ಯಾವುದೇ ವ್ಯಕ್ತಿಯ ಜಾತಿ/ಧರ್ಮ/ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕರಿಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗಧೆ, ಬಂದೂಕು, ಚಾಕು, ಕೋಲು ಅಥವಾ ಲಾಠಿ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರೆ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಸಿಡಿಸುವುದು, ಯಾವುದೇ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆ ಉಂಟು ಮಾಡಬಹುದಾದ, ರಾಜ್ಯದ ಭದ್ರತೆ ಕುಗ್ಗಿಸಬಹುದಾದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥ ತಯಾರಿಸುವ, ಪ್ರದರ್ಶಿಸುವ ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

ಇದನ್ನೂ ಓದಿ:ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸದರಿ ಆದೇಶ ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.

ಅಲ್ಲದೇ ಸದರಿ ಆದೇಶ ಉಲ್ಲಂಘಿಸಿದವರ ಮೇಲೆ ಕಾಯ್ದೆ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಪ್ರತಿಬಂಧಕಾಜ್ಞೆ ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆಯ ಪರಿಸ್ಥಿತಿಯ ಅವಲೋಕನೆ ಮಾಡಿ, ಅವಶ್ಯವಿದ್ದಲ್ಲಿ ಮುಂದಿನ ವಿಸ್ತರಿಸುವ ಷರತ್ತಿಗೆ ಒಳಪಟ್ಟಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.