ಆರೋಗ್ಯ ಕವಚ ಸಿಬ್ಬಂದಿಗಿಲ್ಲ ಸೇವಾ ಭದ್ರತೆ


Team Udayavani, Mar 16, 2022, 5:39 PM IST

25health

ವಿಜಯಪುರ: ಆರೋಗ್ಯ ಕವಚ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡುತ್ತಿಲ್ಲ. ಅದರಲ್ಲೂ ನಾಲ್ಕು ತಿಂಗಳಿಂದ ವೇತನವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದಾರೆ. ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದ್ದು ಸರ್ಕಾರ ಸಂಕಷ್ಟಕ್ಕೆ ನೆರವಾಗಬೇಕು ಎಂದು ಅಖೀಲ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ವಿಜಯಪುರ ಜಿಲ್ಲಾ ಘಟಕದ ಗೌರವಾಧ್ಯಕ್ಷ, ಮಾಜಿ ಶಾಸಕ ವಿಠ್ಠಲ ಕಟಕದೊಂಡ ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ರಾಜ್ಯ ಸರ್ಕಾರ ಸೇವಾ ಭದ್ರತೆ ನೀಡಿಲ್ಲ. ಕೊರೊನಾದಂತಹ ಕಷ್ಟ ಕಾಲದಲ್ಲಿ ಸಾರ್ವಜನಿಕರ ಜೀವ ರಕ್ಷಣೆಗೆ ಸರ್ಕಾರದ ಜೊತೆ ಕೈ ಜೋಡಿಸಿ ಹಲವಾರು ಜನರ ಪ್ರಾಣ ಉಳಿಸುವ ಕೆಲಸ ಮಾಡಿದ್ದಾರೆ. ಸರ್ಕಾರ ಅವರ ಸೇವೆ ಗಮನಿಸಿ ಕೂಡಲೇ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ 108 ಆಂಬ್ಯುಲೆನ್ಸ್‌ನಲ್ಲಿ ಚಾಲಕರು ಹಾಗೂ ಸ್ಟಾಫ್‌ ನರ್ಸ್‌ ಸೇರಿದಂತೆ 3200 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಜಿವಿಕೆ ಕಂಪನಿಯು ಸಿಬ್ಬಂದಿಗೆ ಆಯಾ ತಿಂಗಳ ವೇತನವನ್ನು ಆಯಾ ತಿಂಗಳು ನೀಡದೇ ನಾಲ್ಕು, ಐದು ತಿಂಗಳಿಗೆ ಒಮ್ಮೆ ನೀಡುತ್ತಿದೆ. ಇದರಿಂದ ಸಿಬ್ಬಂದಿ ಆರ್ಥಿಕವಾಗಿ ಸಮಸ್ಯೆಗೆ ಒಳಗಾಗಿ ಕುಟುಂಬ ನಿರ್ವಹಣೆಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಸಿಬ್ಬಂದಿಗೆ ವೇತನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ವೇತನ ತಾರತಮ್ಯ ಸರಿಪಡಿಸಿ ಎಲ್ಲರಿಗೂ ಸಮಾನ ವೇತನ ನೀಡಬೇಕು ಎಂದು ಸರ್ಕಾರ ಆದೇಶ ಮಾಡಿದ್ದರೂ ಸಹ ತಾರತಮ್ಯ ಇನ್ನೂ ನಿವಾರಣೆಯಾಗಿಲ್ಲ. 108 ಆಂಬ್ಯುಲೆನ್ಸ್‌ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ನೀಡುವ ಬದಲು ಸರ್ಕಾರವೇ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿದರು.

ಜನರ ಜೀವಗಳಿಗೆ ಆರೋಗ್ಯ ಕವಚವಾಗಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಮ್ಮದೇ ಜೀವನ ನಿರ್ವಹಣೆಗೆ ಯಾವುದೇ ಕವಚವಿಲ್ಲದಂತಾಗಿದೆ. ನೌಕರರಿಗೆ ಎರಡು ವರ್ಷದ ಇನ್‌ಕ್ರಿಮೆಂಟ್‌, 2020-21ನೇ ಸಾಲಿನ ಭತ್ಯೆ (ಅರಿಯರ್ಸ್‌) ಕೊಟ್ಟಿಲ್ಲ. ಆದಷ್ಟು ಬೇಗನೆ ನಮ್ಮ ಎಲ್ಲ ಸಿಬ್ಬಂದಿಗೆ ಎರಡು ವರ್ಷದ ಇನ್‌ಕ್ರಿಮೆಂಟ್‌ ನೀಡಬೇಕು. ಸಣ್ಣಪುಟ್ಟ ಕಾರಣಗಳಿಗೆ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುವುದು ನಿಲ್ಲಬೇಕು. ಸಿಬ್ಬಂದಿಗೆ ಸರಿಯಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಆಂಬ್ಯುಲೆನ್ಸ್‌ ವಾಹನವನ್ನು ಸರಿಯಾಗಿ ರಿಪೇರಿ ಮಾಡಿಸಬೇಕು ಹಾಗೂ ಟೈರ್‌ಗಳನ್ನು ಆಗಾಗ ಬದಲಾವಣೆ ಮಾಡಬೇಕು. ಆಂಬ್ಯುಲೆನ್ಸ್‌ನಲ್ಲಿ ಇರಬೇಕಾದ ಔಷಧ, ಚುಚ್ಚುಮದ್ದುಗಳನ್ನು ಸರಿಯಾದ ಸಮಯಕ್ಕೆ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಮುಷ್ಕರ ನಡೆಸಿದ್ದ 634 ಸಿಬ್ಬಂದಿಯನ್ನು ತೆಗೆದು ಹಾಕಿದ್ದು, ಅದರಲ್ಲಿ ಯಾವುದೇ ತಪ್ಪು ಮಾಡದ ಸಿಬ್ಬಂದಿಯನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಜಿವಿಕೆ ಕಂಪನಿಗೆ ಸರ್ಕಾರ ಸೂಚನೆ ನೀಡಿದ್ದರೂ ಇದುವರೆಗೂ ಸಿಬ್ಬಂದಿಯನ್ನು ಮರಳಿ ತೆಗೆದುಕೊಂಡಿಲ್ಲ. 108 ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಯನ್ನು ಮುಖ್ಯಮಂತ್ರಿ, ಆರೋಗ್ಯ ಸಚಿವರು 15 ದಿನಗಳ ಒಳಗಾಗಿ ಬಗೆಹರಿಸದೇ ಇದ್ದರೆ ಆಂಬ್ಯುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಿ ಸಾಮೂಹಿಕವಾಗಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ 108 ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶ್ರೀಶೈಲ ಹಳ್ಳೂರ, ರಾಜ್ಯ ಸಂಚಾಲಕ ದಯಾನಂದ ಸಾಸನೂರ, ಜಿಲ್ಲಾ ಘಟಕದ ಅಧ್ಯಕ್ಷ ರಾವುತಪ್ಪ ಸಾರವಾಡ, ಉಪಾಧ್ಯಕ್ಷ ಅಲ್ಲಾ ಪಟೇಲ್‌ ಗಣಿಯಾರ, ಖಚಾಂಚಿ ಮಲ್ಲಿಕಾರ್ಜುನ ಅರವತ್ತು, ಸಂಘಟನಾ ಕಾರ್ಯದರ್ಶಿ ಸುನೀಲ ಪೋಳ, ಸಲಹೆಗಾರ ವಿಶ್ವನಾಥ ಬನಹಟ್ಟಿ ಇದ್ದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.