ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್
Team Udayavani, Jun 19, 2020, 11:49 AM IST
ಸಿಂದಗಿ: ಎಚ್‌ಜಿ ಪಪೂ ಕಾಲೇಜಿನಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು.
ಸಿಂದಗಿ: ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಗುರುವಾರ ತಾಲೂಕಿನಲ್ಲಿ ಶಾಂತಿಯುತವಾಗಿ ನಡೆಯಿತು. ಸಿಂದಗಿ ಪಟ್ಟಣದಲ್ಲಿ ಮೂರು, ದೇವಣಂಗಾವ ಹಾಗೂ ಮಲಘಾಣ ಗ್ರಾಮಗಳಲ್ಲಿ ತಲಾ ಒಂದೊಂದು ಪರೀಕ್ಷಾ ಕೇಂದ್ರಗಳಂತೆ ಒಟ್ಟು ಐದು ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು.
ಪರೀಕ್ಷಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಉಚಿತವಾಗಿ ನೀಡಲಾಯಿತು. ಪರೀಕ್ಷಾ ಕೇಂದ್ರಗಳ ಕೋಣೆಗಳಿಗೆ ವಿದ್ಯಾರ್ಥಿಗಳು ಹೋಗುವ ಮುಂಚೆಯೆ ಅವರ ಆರೋಗ್ಯ ಪರಿಶೀಲಿಸಲಾಯಿತು. ಸಾಮಾಜಿಕ ಅಂತರದೊಂದಿಗೆ ವಿದ್ಯಾರ್ಥಿಗಳನ್ನು ಕೇಂದ್ರಗಳಲ್ಲಿ ಕುಳ್ಳಿರಿಸುವ ವ್ಯವಸ್ಥೆ ಮಾಡಲಾಗಿತ್ತು.