ಹಂತ ಹಂತವಾಗಿ ಸಮಸ್ಯೆಗಳ ಪರಿಹಾರ


Team Udayavani, Apr 21, 2022, 5:21 PM IST

22problem

ಸಿಂದಗಿ: ಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ವಾರ್ಡ್‌ಗಳಲ್ಲಿನ ಸಮಸ್ಯೆಗಳನ್ನು ಅರಿತು ಹಂತ ಹಂತವಾಗಿ ಪರಿಹರಿಸುವ ಕಾರ್ಯ ಮಾಡುತ್ತಿದ್ದೇನೆ. ಸಾರ್ವಜನಿಕರ ಸಹಕಾರ ಅಗತ್ಯ ಎಂದು ಪುರಸಭೆ ಅಧ್ಯಕ್ಷ ಡಾ| ಶಾಂತವೀರ ಮನಗೂಳಿ ಹೇಳಿದರು.

ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಪುರಸಭೆ ಕಾರ್ಯಾಲಯ ಹಮ್ಮಿಕೊಂಡ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಸಿಸಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿನ ಸಿಸಿ ರಸ್ತೆ, ಚರಂಡಿ, ಒಳಚರಂಡಿ, ಉದ್ಯಾನವನ ಅಭಿವೃದ್ಧಿ ಮಾಡಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಬಾರದ ರೀತಿಯಲ್ಲಿ ಕೆರೆಯಲ್ಲಿ ನೀರು ಸಂಗ್ರಹವಾಗಿದೆ. ಪಟ್ಟಣದ ಪ್ರತಿ ವಾರ್ಡ್‌ ಅಭಿವೃದ್ಧಿಯಾಗಬೇಕು. ಪ್ರತಿ ವಾರ್ಡ್‌ನಲ್ಲಿ ಕುಡಿಯುವ ನೀರು ಸರಬರಾಜು ಆಗಬೇಕು. ಒಳಚರಂಡಿ ವ್ಯವಸ್ಥೆಯಾಗಬೇಕು. ರಸ್ತೆಗಳು ಅಭಿವೃದ್ಧಿಯಾಗಬೇಕು ಎಂದು ಗುರಿಯನ್ನಾಗಿಟ್ಟುಕೊಂಡು ಯೋಜನೆ ಮಾಡಲಾಗುತ್ತಿದೆ ಎಂದರು.

2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಪಟ್ಟಣದ ವಾರ್ಡ್‌ ನಂ. 14ರಲ್ಲಿ 5 ಲಕ್ಷ; ವಾರ್ಡ್‌ ನಂ.13ರಲ್ಲಿ 9 ಲಕ್ಷ ಮತ್ತು ವಾರ್ಡ್‌ ನಂ. 10ರಲ್ಲಿ 5.5 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ವಾರ್ಡ್‌ ನಿವಾಸಿಗಳು ಕಾಮಗಾರಿಗೆ ಸಹಕರಿಸಬೇಕು. ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚನೆ ನೀಡಿದರು.

ಪಟ್ಟಣದಲ್ಲಿನ ಉದ್ಯಾನವನಗಳ ಅಭಿವೃದ್ಧಿಯಿಂದ ವಾರ್ಡ್‌ಗಳ ಸೌಂದರ್ಯ ಹೆಚ್ಚಾಗುವ ಜೊತೆಗೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ. ಆದ್ದರಿಂದ ಪಟ್ಟಣದಲ್ಲಿರುವ ಉದ್ಯಾನವನಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಅಮೃತ ನಿರ್ಮಲ ಯೋಜನೆಯಡಿ ಬಸವೇಶ್ವರ ವೃತ್ತದ ಬಳಿ ಹಾಗೂ ಕಾಗಿ ದವಾಖಾನೆ ಹತ್ತಿರ ಹೈಟೆಕ್‌ ಶೌಚಾಲಯ, ವಿವೇಕಾನಂದ ವೃತ್ತ ದಿಂದ ಬಸವೇಶ್ವರ ವೃತ್ತ ದವರೆಗೆ ಡಿವೈಡರ್‌ಗಳಿಗೆ ಗ್ರಿಲ್‌ ಅಳವಡಿಸುವುದು. ಸಸಿ ನೆಡುವುದು, ಘನತ್ಯಾಜ್ಯ ವಸ್ತು ವಿಲೆವಾರಿ ಘಟಕದಲ್ಲಿ ಕಾಂಪೌಂಡ್‌ ನಿರ್ಮಿಸುವುದು ಮುಂತಾದ ಅಭಿವೃದ್ಧಿ ಜೊತೆಗೆ ನಗರಕ್ಕೆ ಅವಶ್ಯಕವಿರುವ ಯಂತ್ರೋ ಪಕರಣಗಳನ್ನು ಖರೀದಿ ಸಲಾಗುವುದು ಎಂದು ತಿಳಿಸಿದರು.

ಪುರಸಭೆ ಉಪಾಧ್ಯಕ್ಷ ಹಾಸಿಂಪೀರ ಆಳಂದ, ಮುಖ್ಯಾಧಿಕಾರಿ ಪ್ರಕಾಶ ಮದುಗೋಳಕರ, ವಾರ್ಡ್‌ ಸದಸ್ಯ ಶಾಂತವೀರ ಬಿರಾದಾರ, ಅಭಿಯಂತ ಅಜರುದ್ಧಿನ ನಾಟಿಕಾರ, ಶಿವು ಬಡಿಗೇರ ಇನ್ನಿತರರಿದ್ದರು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.