ತೋಟಗಾರಿಕೆ ಮಹಾವಿದ್ಯಾಲಯ ಸ್ಥಳಾಂತರವಾದರೆ ಹೋರಾಟ

Team Udayavani, Jul 16, 2019, 12:00 PM IST

vp-tdy-1..

ಆಲಮೇಲ: ಆಲಮೇಲ ಪಟ್ಟಣದ ಇಂಡಿ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆಯ ಜಮೀನು.

ಆಲಮೇಲ: ಆಲಮೇಲ ಪಟ್ಟಣದಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಮಂಜೂರಾಗಿದ್ದು ಅದನ್ನು ರಾಜಕೀಯ ಕುತಂತ್ರದಿಂದ ಸ್ಥಳಾಂತರವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಭಾಗದ ವಿವಿಧ ಸಂಘ ಸಂಸ್ಥೆಗಳು ಎಚ್ಚರಿಸಿದ್ದಾರೆ.

ರಾಜ್ಯ ಸರಕಾರ ನಡೆಸಿರುವ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಕ್ಕೆ ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪಿಸಲು ಅನುಮೋದನೆ ನೀಡಿರುವ ಸರಕಾರದ ಈ ನಿರ್ಧಾರಕ್ಕೆ ಆಲಮೇಲ ನಾಗರಿಕ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಸ್ವಾಗತಿಸಿದ್ದು. ಅದನ್ನು ಸಹಿಸದ ಕೆಲವರು ಬೇರೆ ಕಡೆ ಸ್ಥಳಾಂತರಕ್ಕೆ ಬೇಡಿಕ್ಕೆ ಈಡೇತ್ತಿರುವದು ಸರಿ ಅಲ್ಲ. ನಾವು ಎಂದು ಬಿಟ್ಟುಕೊಡುವುದಿಲ್ಲ.

ಮಹಾವಿದ್ಯಾಲಯ ಸ್ಥಾಪನೆಗೆ ಎಲ್ಲ ಸೌಲಭ್ಯಗಳು ಇದ್ದು ತೋಟಗಾರಿಕೆ ಮಹಾವಿದ್ಯಾಲಯ ಆಲಮೇಲದಲ್ಲಯೇ ಸ್ಥಾಪಿಸಬೇಕು. ಒಂದು ವೇಳೆ ಬದಲಾವಣೆ ಮಾಡಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆಲಮೇಲ ನಾಗರಿಕ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು ಆಗ್ರಹಿಸಿದ್ದವು.

ನಾಗರಿಕೆ ವೇದಿಕೆ ಅಧ್ಯಕ್ಷ ರಮೇಶ ಭಂಟನೂರ ಮಾತನಾಡಿ, ಆಲಮೇಲ ಪಟ್ಟಣ ಇತ್ತೀಚೆಗೆ ತಾಲೂಕು ಕೇಂದ್ರವಾಗಿದ್ದು ಇಲ್ಲಿನ ಕಡಣಿಯ ರಸ್ತೆಯ ಹತ್ತಿರ ಇರುವ ಕೃಷಿ ಸಂಶೋಧನಾ ಕೇಂದ್ರಕ್ಕೆ ಸುಮಾರು 140 ಎಕರೆ ಜಮೀನಿದೆ. ಇಂಡಿ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ಹೆಸರಿನಲ್ಲಿ 60 ಎಕರೆ ಜಮೀನಿದೆ. ಪಟ್ಟಣದ ಕೃಷ್ಣಾ ಭಾಗ್ಯ ಜಲನಿಗಮದಲ್ಲಿ ಖಾಲಿ ಕಟ್ಟಡಗಳು ಇವೆ. ಹೀಗಾಗಿ ಮಹಾವಿದ್ಯಾಲಯ ಪ್ರಾರಂಭಿಸಲು ಎಲ್ಲ ಸೌಲಭ್ಯಗಳು ಇವೆ. ಅದನ್ನು ಬಿಟ್ಟು ವಿಜಯಪುರ ಸಮೀಪದ ತಿಡಗುಂದಿಗೆ ಸ್ಥಳಾಂತರ ವಾಗಬೇಕು ಎಂದು ಮಾಜಿ ಶಾಸಕರೊಬ್ಬರು ಹೇಳುತ್ತಿರುವದು ಸರಿ ಅಲ್ಲ ಎಂದರು.

ಆಲಮೇಲ ಪಟ್ಟಣಕ್ಕೆ ಹೊರ ರಾಜ್ಯಗಳ ಸಂಪರ್ಕವಿದೆ. ಕಲಬುರಗಿ, ವಿಜಯಪುರ ಮತ್ತು ಮಹಾರಾಷ್ಟ್ರದ ಗಡಿಯವರೆಗೆ ಇರುವ ಎಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಲ್ಲಿ ತೋಟಗಾರಿಕೆ ಅಧ್ಯಯನ ಮಾಡಲು ಅನುಕೂಲವಾಗುತ್ತದೆ. ಇಲ್ಲಿನ ತೋಟಗಾರಿಕೆ ಇಲಾಖೆಯಲ್ಲಿ ಬೆಳೆಯುವ ಮಾವಿನ ಹಣ್ಣಿಗೆ ವಿದೇಶದಲ್ಲೂ ಬೆಲೆ ಇದೆ. ಆಲಮೇಲ ಪಟ್ಟಣ ಎಂದೋ ಅಭಿವೃದ್ಧಿ ಆಗಬೇಕಿತ್ತು. ಆದರೆ ಹಿಂದಿರುವ ರಾಜ್ಯಕಾರಣಿಗಳ ನಿರ್ಲಕ್ಷ್ಯದಿಂದ ಯಾವ ಅಭಿವೃದ್ಧಿಯೂ ಆಗಿಲ್ಲ. ಈಗಿರುವ ಶಾಸಕ ಎಂ.ಸಿ. ಮನಗೂಳಿ ರಾಜ್ಯ ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು ಸಚಿವ ಮನಗೂಳಿ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ತರುತ್ತಿದ್ದು ಅದಕ್ಕೆ ಎಲ್ಲರೂ ಪಕ್ಷಾತೀತವಾಗಿ ಬೆಂಬಲ ನೀಡಬೇಕು.

ತೋಟಗಾರಿಕೆ ಮಹಾವಿದ್ಯಾಲಯ ಸ್ಥಾಪನೆಗೆ ಆಲಮೇಲ ಅತ್ಯಂತ ಸೂಕ್ತ ಪ್ರದೇಶವಾಗಿದ್ದು ಇಲ್ಲಿನ ರೈತರು ಸುಮಾರು 20 ವರ್ಷಗಳಿಂದ ಕಬ್ಬು ತರಕಾರಿ, ನಿಂಬೆ, ದಾಳಿಂಬೆ ಬೆಳೆಯುತ್ತ ಹೊಸ ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ದ್ರಾಕ್ಷಿ ಕ್ಷೇತ್ರದಲ್ಲಿಯೂ ಗಣನೀಯ ವೃದ್ಧಿ ಕಂಡು ಬರುತ್ತಿದ್ದು ಈ ಭಾಗದಿಂದ ಪ್ರತಿ ದಿನ ಸುಮಾರ 250 ಟನ್‌ ಹಸಿಮೆಣಸಿನ ಕಾಯಿ ರಾಜ್ಯ ಹಾಗೂ ಹೊರ ರಾಜ್ಯಕ್ಕೆ ಪೂರೈಕೆ ಮಾಡಲಾಗುತ್ತಿದೆ. ತೋಟಗಾರಿಕೆ ಮಹಾವಿದ್ಯಾಲಯಕ್ಕೆ ಬೇಕಾಗಿರುವ ಮೂಲಭೂತ ಸೌಕರ್ಯಗಳು ಮೊದಲೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಮಹಾವಿದ್ಯಾಲಯ ಕಾರ್ಯರೂಪಕ್ಕೆ ಬಂದರೆ ಈ ಭಾಗದ ರೈತರು ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ಆಲಮೇಲದಲ್ಲಿ ವಿದ್ಯಾಲಯ ನಿರ್ಮಾಣದಲ್ಲಿ ಬದಲಾಣೆಯಾದರೆ ಈ ಭಾಗದ ರೈತರು ಹಾಗೂ ನಾಗರಿಕರು ಸೇರಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕಬ್ಬು ಬೆಳಗಾರ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಜು ಗುಂದಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.