ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ
Team Udayavani, Jul 6, 2021, 12:20 PM IST
ವಿಜಯಪುರ : ಹೆರಿಗೆ ನೋವು ಕಾಣಿಸಿಕೊಂಡಿದ್ದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಅಂಬ್ಯುಲೆನ್ಸ್ ನಲ್ಲಿ ಹೆರಿಗೆಯಾಗಿ, ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಜರುಗಿದೆ.
ಮುದ್ದೇಬಿಹಾಳ ತಾಲೂಕಿನ ಬೈಲಕೂರು ಗ್ರಾಮದ 23 ವರ್ಷದ ಭುವನೇಶ್ವರಿ ಬಸವರಾಜ ಛಲವಾದಿ ಅಂಬ್ಯಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ.
2ನೇ ಹೆರಿಗೆಯ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಭುವನೇಶ್ವರಿ, ನೋವಿನಿಂದ ಬಳಲುತ್ತಿದ್ದಾಗ ನಾಲತವಾಡದ 108 ಸಿಬ್ಬಂದಿ ಆಂಬುಲೆನ್ಸ್ ನಲ್ಲಿ ಸುಲಭ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ಬಳಿಕ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ.
ಹೆರಿಗೆ ಬಳಿಕ ತಂಗಡಗಿ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಬಾಣಂತಿಯನ್ನು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಆರೋಗ್ಯ ಕವಚ ಸ್ಟಾಫ್ ನರ್ಸ್ ಸಿಬ್ಬಂದಿ ಶರಣು ನಾವಿ, ಚಾಲಕ ಅನ್ವರ್ ಹುಸೇನ್ ಸಮಯ ಪ್ರಜ್ಞೆಗೆ ಭುವನೇಶ್ವರಿ ಕುಟುಂಬ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ