ಯರಝರಿ ಗ್ರಾಪಂಗೆ ಗ್ರಾಮಸ್ಥರ ಮುತ್ತಿಗ

Team Udayavani, Dec 2, 2018, 2:21 PM IST

vij-1.jpg

ಮುದ್ದೇಬಿಹಾಳ: ತಾಲೂಕಿನ ಯರಝರಿ ಗ್ರಾಮದಲ್ಲಿ ರಸ್ತೆ ದುರಸ್ತಿ ಸೇರಿದಂತೆ ಕೆಲ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ಮತ್ತು ರೈತ ಸಂಘದ ಪದಾಧಿಕಾರಿಗಳು, ಸದಸ್ಯರು ಶನಿವಾರ ಅಲ್ಲಿನ ಗ್ರಾಪಂ ಕಚೇರಿಗೆ ಬೀಗ ಜಡಿದು, ಮುತ್ತಿಗೆ ಹಾಕಿ ದಿಢೀರ್‌ ಪ್ರತಿಭಟನೆ ನಡೆಸಿದರು. ಪಂಚಾಯತ್‌ ಕಚೇರಿ ಎದುರು ಟೈರ್‌ ಸುಟ್ಟು ನ್ಯಾಯಕ್ಕೆ ಆಗ್ರಹಿಸಿದರು.

ಈ ಸಂದರ್ಭ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ ಸುದ್ದಿಗಾರರೊಂದಿಗೆ ಮಾತನಾಡಿ, ಮಕ್ಕಳು ಸಂಚರಿಸುವ ರಸ್ತೆ ದುರಸ್ತಿಗೆ ಮುಂದಾಗದ ಪಿಡಿಒ ಮತ್ತು ಅಧ್ಯಕ್ಷರ ವರ್ತನೆ ಬೇಸರ ಮೂಡಿಸಿದೆ. ಗ್ರಾಮದಲ್ಲಿ ಶೌಚಾಲಯ ಕಟ್ಟಿಸಿದ್ದು ಎಲ್ಲವೂ ಬೇಕಾಬಿಟ್ಟಿಯಾಗಿ ಕಟ್ಟಿದಂತಿವೆ. ಕಳಪೆ ಕಾಮಗಾರಿಗೆ ಉದಾಹರಣೆಯಾಗಿವೆ. ಅಲ್ಲದೆ ಪಂಚಾಯತ್‌ಗೆ ಮಂಜೂರಾದ ವಸತಿ ಯೋಜನೆ ಅಡಿ ಮನೆಗಳನ್ನು ಹಾಕಲು ಲಂಚ ಕೇಳುತ್ತಿದ್ದಾರೆ ಎನ್ನುವ ಆರೋಪ ವ್ಯಾಪಕವಾಗಿದೆ. ಇವೆಲ್ಲ ಅವ್ಯವಸ್ಥೆ ವಿರೋಧಿಸಿ ಪಂಚಾಯಿತಿಗೆ ಬೀಗ ಜಡಿಯಬೇಕಾಯಿತು ಎಂದು ತಿಳಿಸಿದರು.

8 ತಿಂಗಳ ಹಿಂದೆ 14ನೇ ಹಣಕಾಸಿನಲ್ಲಿ ಕನ್ನಡ ಶಾಲೆಗೆ ಹೋಗುವ ರಸ್ತೆಗೆ 1.5 ಲಕ್ಷ ರೂ.ದಲ್ಲಿ ದುರಸ್ತಿಪಡಿಸಲು ಕ್ರಿಯಾಯೋಜನೆ ಸಿದ್ದಪಡಿಸಿದ್ದರೂ ಇದುವರೆಗೂ ದುರಸ್ತಿ ಆಗಿಲ್ಲ. ಇದರಿಂದ ಇಲ್ಲಿ ಸಂಚರಿಸುವ ಮಕ್ಕಳು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಆಗಿದೆ. 8 ತಿಂಗಳಿಂದ ಈ ಪಂಚಾಯತ್‌ನಲ್ಲಿ ಒಂದೂ ಸಾಮಾನ್ಯ ಸಭೆ ನಡೆದಿಲ್ಲ. ಅಧ್ಯಕ್ಷೆ ಶಾಂತಮ್ಮ ಬಿರಾದಾರ ಪಂಚಾಯತ್‌ ಕಡೆ ಸುಳಿಯುವುದೇ ಇಲ್ಲ. ಪಿಡಿಒ ನಿರ್ಮಲಾ ತೋಟದ ಅಭಿವೃದ್ಧಿ ಕೆಲಸ ಮಾಡಿಸುವಲ್ಲಿ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಹೀಗಾಗಿ ಊರಲ್ಲಿ ಅಭಿವೃದ್ಧಿಪರ ಕೆಲಸಗಳು ನಿಂತೆ ಹೋಗಿವೆ. ಇದಲ್ಲದೆ ಸ್ವತಃ ಪಂಚಾಯತ್‌ ಉಪಾಧ್ಯಕ್ಷರೇ ಇಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆ ನಡೆಸುವಂತೆ ಕೋರಿ ಜಿಪಂ ಸಿಇಒಗೆ ದಾಖಲೆ ಸಮೇತ ಮನವಿ ಸಲ್ಲಿಸಿರುವುದು ಇಲ್ಲಿ ಆಡಳಿತ ಎಷ್ಟೊಂದು ಹದಗೆಟ್ಟಿದೆ ಎನ್ನುವುದಕ್ಕೆ ಉದಾಹರಣೆಯಂತಿದೆ ಎಂದು ಗ್ರಾಮಸ್ಥರು ಆಪಾದಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಾಪಂ ಪ್ರಭಾರ ಇಒ ಪಿ.ಕೆ. ದೇಸಾಯಿ ಅವರು ಅಹವಾಲು ಆಲಿಸಿ ಸಮಸ್ಯೆಗಳ
ಪರಿಹಾರಕ್ಕೆ ಕ್ರಮ ಜರುಗಿಸುವಂತೆ ಪಿಡಿಒ ನಿರ್ಮಲಾ ತೋಟದ ಅವರಿಗೆ ಸೂಚಿಸಿದರು. ಇದಕ್ಕೂ ಮುನ್ನ ಪಂಚಾಯತ್‌ ಕಚೇರಿ ಎದುರು ಪಿಡಿಒ ತೋಟದ ಅವರನ್ನು ರೈತ ಮುಖಂಡರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಬಿರಾದಾರ ಅವರೂ ಸ್ಥಳಕ್ಕೆ ಆಗಮಿಸಿ ಧರಣಿ ನಡೆಸುತ್ತಿದ್ದವರನ್ನು ಸಮಾಧಾನಪಡಿಸಲು ಯತ್ನಿಸಿದರು.

ಪ್ರತಿಭಟನೆ, ಇಒ ಸೂಚನೆಗೆ ಮಣಿದ ಪಿಡಿಒ ಅವರು ರವಿವಾರದಿಂದಲೇ ರಸ್ತೆ ದುರಸ್ತಿ ಮಾಡಿಸಿ ಮಕ್ಕಳಿಗೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಭರವಸೆ ನೀಡಿದರು. 

ಬಸವರಾಜ ಬಾಗೇವಾಡಿ, ಮಲ್ಲಪ್ಪ ಈಳಗೇರ, ಮಂಜುನಾಥ ಗುರಿಕಾರ, ಬೀರಪ್ಪ ಗುರಿಕಾರ, ಹನುಮಂತ ಅಪರಾ , ಹನುಮಂತ ಮೇಟಿ, ಶಿವಪ್ಪ ಗಣ್ಣೂರ, ಸುರೇಶ ನರಸಲಗಿ, ಪ್ರಕಾಶ ಉಕ್ಕಲಿ, ಯಲ್ಲಾಲಿಂಗ ಈಳಗೇರ, ಬಸಪ್ಪ ಈಳಗೇರ, ಅಂಬರೀಷ ಗಣ್ಣೂರ, ಮುತ್ತಣ್ಣ ಯಾಳಗಿ, ಶಿವು ಗುರಿಕಾರ, ಸುರೇಶ ನಾಗಾವಿ, ಭೀಮರಾಯ ಹುಲ್ಲೂರು, ನಿಂಗಪ್ಪ ಹುಲ್ಲೂರ, ರೈತ ಸಂಘದ ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

incident held at sagara

ಹೃದಯಾಘಾತದಿಂದ ದಿನಗೂಲಿ ನೌಕರ ಸಾವು: ಪ್ರತಿಭಟನೆ

ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

16women

ಮಹಿಳೆಯರ ಸುರಕ್ಷತೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನಾ ರ್ಯಾಲಿ

c-c-patil

ಡಿಸೆಂಬರ್ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭ: ಸಚಿವ ಸಿ.ಸಿ.ಪಾಟೀಲ

ಶಶಿಕಲಾ ಜೊಲ್ಲೆ

ಚುನಾವಣೆಯಲ್ಲಿ ಸಚಿವರಿಗೆ ಎರಡು ಜಿ.ಪಂ. ಉಸ್ತುವಾರಿ ಸಮರ್ಥ ನಿಭಾವಣೆ: ಶಶಿಕಲಾ ಜೊಲ್ಲೆ

MUST WATCH

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

udayavani youtube

ಮೊಸಳೆ ಬಾಯಿಯಿಂದ ಬಾಲಕನ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಿತು ನೋಡಿ

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

ಹೊಸ ಸೇರ್ಪಡೆ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.