80 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಇಲ್ಲ: ಸಿ.ಎಂ.ಇಬ್ರಾಹಿಂ


Team Udayavani, Oct 24, 2022, 1:09 PM IST

cm

ವಿಜಯಪುರ: ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದಾಗ ನಡೆಸಿದ ಸಮೀಕ್ಷೆ ಪ್ರಕಾರ 2023 ರ ಚುನವಣೆ ವೇಳೆಗೆ 80 ವಿಧಾನಸಬೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ. ಸಮೀಕ್ಷೆಯಲ್ಲಿ ಜೆಡಿಎಸ್ ಮುಂಚೂಣಿಯಲ್ಲಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹೀಂ ಕುಟುಕಿದರು.

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಭಾರತ ಜೋಡೋ ಹೆಸರಿನಲ್ಲಿ ಸಮಯ ವ್ಯರ್ಥ ಪ್ರಯತ್ನ ಮಾಡುವ ಬದಲು ಪ್ರಾದೇಶಿಕ ಪಕ್ಷಕ್ಕಿಂತ ಹೀನಾಯ ಸ್ಥಿತಿಯಲ್ಲಿ ಇರುವ ಕಾಂಗ್ರೆಸ್ ಜೋಡೋ ಯಾತ್ರೆ ಮಾಬೇಕಿತ್ತು ಎಂದರು.

ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಜೀವಪಣಕ್ಕಿಟ್ಟು ಹೋರಾಡಿದ ಗುಲಾಂ ನಬಿ ಆಜಾದ್ ಸ್ಥಿತಿ ಈಗೇನಾಗಿದೆ. ಹೀಗಾಗಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನು ನಂಬಬೇಡಿ. ಸಿದ್ಧರಾಮಯ್ಯ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಭವಿಷ್ಯದಲ್ಲಿ ಉತ್ತರ ಪ್ರದೇಶದ ಅಖಿಲೇಶ ಯಾದವ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಅಧಿಕಾರಕ್ಕೆ ಬರಲಿದ್ದೇವೆ. ಪ್ರಾದೇಶಿಕ ಪಕ್ಷಗಳೆಲ್ಲ ಸೇರಿ 2023 ಕ್ಕೆ ದೆಹಲಿ ಕೆಂಪು ಕೋಟೆಯಲ್ಲೂ ರಾಷ್ಟ್ರಧ್ವಜ ಹಾರಿಸಲಿದ್ದೇವೆ ಎಂದರು.

ಇದನ್ನೂ ಓದಿ:ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

ದೇವೇಗೌಡರು ಪ್ರಧಾನಿ ಆಗಿದ್ದಾಗ ಆಲಮಟ್ಟಿ ಶಾಸ್ತ್ರೀ ಜಲಾಶಯದ ಗೇಟ್ ಎತ್ತರಿಸುವ ವಿಷಯದಲ್ಲಿ ಅಂಧ್ರಪ್ರದೇಶ ಮುಖ್ಯಮಂತ್ರಿ ಬೆಂಬಲ ಸರ್ಕಾರಕ್ಕೆ ನೀಡಿದ ವಾಪಸ್ ಪಡೆಯಯವುದಾಗಿ ಹೇಳಿದರೂ ಅಧಿಕಾರ ಬಿಟ್ಟರೆ ಹೊರತು, ರಾಜ್ಯದ ಜನರ ಹಿತ ಬಲಿಕೊಡಲಿಲ್ಲ. ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದಾಗ ರೈತರ ಸಾಲ ಮನ್ನಾ ಮಾಡಿದೆ. ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂದು ಯಾತ್ರೆ ಮಾಡಿದವರು ಮಾಡಿದ್ದೇನು ಎಂಬುದನ್ನು ಜನತೆಯ ಮುಂದಿಡಲಿ ಎಂದು ಆಗ್ರಹಿಸಿದರು.

ಬಿಜೆಪಿ ಪಕ್ಷಕ್ಕೆ ಮೋದಿ ಚಿಂತೆ, ಕಾಂಗ್ರೆಸ್ ಪಕ್ಷಕ್ಕೆಗೆ ರಾಹುಲ್ ಚಿಂತೆ, ಜೆಡಿಎಸ್ ಪಕ್ಷಕ್ಕೆ ಮಾತ್ರ ರಾಜ್ಯದ ಚಿಂತೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಯಾತ್ರೆ, ಕಾರ್ಯಕ್ರಮ ಮಾಡುತ್ತಿವೆ. ಆದರೆ ಜನರಿಗೆ ತಾವು ಏನು ಮಾಡಿದ್ದೇವೆ, ಮಾಡುತ್ತೇವೆ ಎಂದು ಹೇಳುತ್ತಿಲ್ಲ. ಕೇವಲ ಪರ್ಸಂಟೇಜ್ ಗಾಗಿ ಕಿತ್ತಾಡುತ್ತಿವೆ ಎಂದು ದೂರಿದರು.

ನಮ್ಮ ಪಕ್ಷ ರಾಜ್ಯದ ಜನತೆಗಾಗಿ ಧ್ವನಿ ಎತ್ತುತ್ತಿದ್ದು, ನಾವು ಮಾಡುವ ಕಾರ್ಯಕ್ರಮಗಳೇನು ಎಂಬುದನ್ನು ಜನತೆಯ ಮುಂದೆ ಇಡುತ್ತಿದ್ದೇವೆ. ನಮಗೆ ಹೈಕಮಾಂಡ್ ಇಲ್ಲ, ಮೇಲಿನವರಿಗೆ ಹಣ ಕೊಡಬೇಕಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅವರ ಆಶಯದಂತೆ ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಎಂದರು.

ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಂಚರತ್ನ ಯಾತ್ರೆ ಮೂಲಕ ಸಂಕಲ್ಪ ಮಾಡಿದೆ. ನವೆಂಬರ್ 1 ರಿಂದ ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಪಂಚರತ್ನ ಯಾತ್ರೆ ಆರಂಭಗೊಳ್ಳಲಿದೆ. ನಮ್ಮ ಸರ್ಕಾರ ರಾಜ್ಯದ ಜನತೆಯ ಆಶಯ ಈಡೇರಿಸದಿದ್ದಲ್ಲಿ ಮತ್ತೆ ಚುನಾವಣೆಯಲ್ಲಿ ಜನತೆಯ ಮುಂದೆ ಬರುವುದಿಲ್ಲ ಎಂದು ಕುಮಾರಸ್ವಾಮಿ ಶಪಥ ಮಾಡಿದ್ದಾರೆ ಎಂದರು.

ಇಂದಿರಾ ಗಾಂಧಿ ಬಿರುಗಾಳಿಯ ಮಧ್ಯೆಯೂ ಸಂಸ್ಥಾನ ಕಾಂಗ್ರೆಸ್ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಗೆಲುವು ಸಾಧಿಸಿತ್ತು. ವಿಜಯಪುರ ಜಿಲ್ಲೆಯ ಮಟ್ಟಿಗೆ ಜೆಡಿಎಸ್ ಭದ್ರಕೋಟೆ. ಕಳೆದ ಚುನಾವಣೆಯಲ್ಲಿ ರಾಜ್ಯದ ಜನರು 5 ಕ್ಷೇತ್ರದಲ್ಲಿ ಗೆಲ್ಲುವ ಹಂತದಲ್ಲಿ ಇದ್ದು, ಇಬ್ಬರು ಶಾಸಕರನ್ನು ಗೆಲ್ಲಿಸಿದ್ದಾರೆ. 2023 ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯಲ್ಲೂ 8 ಕ್ಷೇತ್ರ ಗೆಲ್ಲುವ ಮಟ್ಟಕ್ಕೆ ಪಕ್ಷದ ಸಂಘಟನೆ ನಡೆದಿದೆ ಎಂದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.