Udayavni Special

ಕುಸಿದು ಬಿತ್ತು ಮೂರಂತಸ್ತಿನ ಕಾಲೇಜು ಕಟ್ಟಡ

Team Udayavani, Aug 11, 2017, 11:14 AM IST

college.jpg

ವಿಜಯಪುರ: ನಗರದ ಕಾಲೇಜು ಕಟ್ಟಡವೊಂದು ಕುಸಿದು ನೆಲಸಮವಾದ ಘಟನೆ ಗುರುವಾರ ಬೆಳಗಿನ ಜಾವ 4 ಗಂಟೆ
ಸುಮಾರಿಗೆ ನಡೆದಿದೆ. ಗಂಗಾಪುರ ಬಡಾವಣೆಯ ರೇಶ್ಮಿ ಪ್ಯಾರಾ ಮೆಡಿಕಲ್‌ ಕಾಲೇಜು ಕಟ್ಟಡ ಸಂಪೂರ್ಣ ನೆಲಸಮಗೊಂಡಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಾಲೇಜಿನ ಪ್ರಯೋಗಾಲಯದ ವಸ್ತುಗಳು, ಪೀಠೊಪಕರಣಗಳು, ದಾಖಲೆಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಜಖಂಗೊಂಡಿದ್ದು, ಸ್ಥಳಕ್ಕಾಗಮಿಸಿದ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಜೆಸಿಬಿ ಯಂತ್ರಗಳ ಮೂಲಕ ಕಟ್ಟಡ ತ್ಯಾಜ್ಯ ತೆರವಿಗೆ ಮುಂದಾಗಿದ್ದಾರೆ.

ಅಕ್ರಮ ಕಟ್ಟಡ: ಈ ಕಾಲೇಜು ಕಟ್ಟಡ ಲೇಔಟ್‌ ಮಾನ್ಯತೆ ಇಲ್ಲದ ಗುಂಟಾ ಪ್ಲಾಟ್‌ ಪ್ರದೇಶದಲ್ಲಿದ್ದು, ಕಟ್ಟಡ ನಿರ್ಮಾಣ ಪರವಾನಗಿ ಪಡೆಯದೆ ನಿರ್ಮಿಸಿದ ಅಕ್ರಮ ಕಟ್ಟಡ ಎಂದು ಪಾಲಿಕೆ ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ವಿವರಿಸಿದ್ದಾರೆ. ಅಲ್ಲದೇ ನಿಯಮ ಬಾಹಿರವಾಗಿ ಮೂರು ಅಂತಸ್ತಿನ ಕಟ್ಟಡ ನಿರ್ಮಿಸಿದ್ದು, ಕಳಪೆ ಗುಣಮಟ್ಟದಿಂದ ಕಟ್ಟಡ ಕುಸಿದಿರುವ ಸಾಧ್ಯತೆ ಇದೆ. ಕಟ್ಟಡ ಮಾಲೀಕರಿಗೆ ನೋಟಿಸ್‌ ನೀಡಲಾಗುವುದು ಎಂದು ಆಯುಕ್ತ ಹರ್ಷ ಶೆಟ್ಟಿ ತಿಳಿಸಿದ್ದಾರೆ.

ದೇವರು ದೊಡ್ಡವನು, ಯಾರಿಗೂ ಹಾನಿಯಾಗಿಲ್ಲ..
ಬುಧವಾರ ಮಧ್ಯಾಹ್ನವಷ್ಟೇ ನಗರದ ಹಲವೆಡೆ ಭೂಕಂಪನದ ಅನುಭವ ಆಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ನಸುಕಿನಲ್ಲಿ ಏಕಾಏಕಿ ಕಟ್ಟಡ ಕುಸಿದ ಶಬ್ದದಿಂದ ಭಯಭೀತರಾಗಿ ನಾವೆಲ್ಲ ಮನೆಯಿಂದ ಓಡಿ ಬಂದೆವು. ಆದರೆ ನೋಡುವಷ್ಟರಲ್ಲೇ ಮಹಾವಿದ್ಯಾಲಯದ ಮೂರಂತಸ್ತಿನ ಕಟ್ಟಡ ಸಂಪೂರ್ಣ ನೆಲಕ್ಕುರುಳಿತ್ತು. ದೇವರು ದೊಡ್ಡವನು, ಯಾರಿಗೂ ಹಾನಿಯಾಗಿಲ್ಲ ಎಂದು ಸ್ಥಳೀಯರು ವಿವರಿಸಿದರು.

ಟಾಪ್ ನ್ಯೂಸ್

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

gvhfghft

ಚಿಂತಾಮಣಿ : ಅಪರಿಚಿತ ವಾಹನ ಡಿಕ್ಕಿ | ಪಾದಚಾರಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura news

ಗಮನ ಸೆಳೆದ ವಿಶಿಷ್ಟ ವಿನ್ಯಾಸದ ಬಸ್‌ ಶೆಲ್ಟರ್‌

21

ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

14

ಜನ ನನ್ನ ಕೈ ಬಿಡಲ್ಲ: ರಮೇಶ ಭೂಸನೂರ

11

ಭೂಸನೂರ ಪರ ಸಚಿವ ಸಿ.ಸಿ. ಪಾಟೀಲ ಪ್ರಚಾರ

10

ಬಿಜೆಪಿ-ಕಾಂಗ್ರೆಸ್‌ ರಾಜ್ಯದ ಅಭಿವೃದ್ಧಿಗೆ ಮಾರಕ: ನಾಜಿಯಾ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಟಿ20 ವಿಶ್ವಕಪ್‌ ಅರ್ಹತಾ ಸುತ್ತಿನ ಮೊದಲ ಪಂದ್ಯ: ಒಮಾನ್‌ಗೆ 10 ವಿಕೆಟ್‌ ಭರ್ಜರಿ ಗೆಲುವು

ಟಿ20 ವಿಶ್ವಕಪ್‌ ಅರ್ಹತಾ ಸುತ್ತಿನ ಮೊದಲ ಪಂದ್ಯ: ಒಮಾನ್‌ಗೆ 10 ವಿಕೆಟ್‌ ಭರ್ಜರಿ ಗೆಲುವು

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಚೆನ್ನೈಯಲ್ಲೇ ಉಳಿಯಲಿದ್ದಾರೆ ಮಹೇಂದ್ರ ಸಿಂಗ್‌ ಧೋನಿ

ಚೆನ್ನೈಯಲ್ಲೇ ಉಳಿಯಲಿದ್ದಾರೆ ಮಹೇಂದ್ರ ಸಿಂಗ್‌ ಧೋನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.