Udayavni Special

ವಿಜಯಪುರ: ಹಳ್ಳಿಗಳಲ್ಲಿ ಶೇ.75 ಸೋಂಕಿತರು ಪತ್ತೆ

ರೋಗಿಗಳ ಹೆಸರು,ಮೊಬೈಲ್‌ ನಂಬರ್‌ ಮತ್ತು ವಿಳಾಸ ಸಂಗ್ರಹಕ್ಕೂ ಕಾರ್ಯಪಡೆ ಸದಸ್ಯರಿಗೆ ಸೂಚಿಸಿದರು.

Team Udayavani, May 21, 2021, 8:46 PM IST

ವಿಜಯಪುರ: ಹಳ್ಳಿಗಳಲ್ಲಿ ಶೇ.75 ಸೋಂಕಿತರು ಪತ್ತೆ

ವಿಜಯಪುರ: ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್‌-19 ಪ್ರಕರಣಗಳನ್ನು ತಗ್ಗಿಸಲು ಅನುಕೂಲವಾಗುವಂತೆ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ, ಪ್ರತಿ ಕುಟುಂಬ ಸದಸ್ಯರಲ್ಲಿ ಕೋವಿಡ್‌ ಲಕ್ಷಣ ಇರುವುದನ್ನು ಪತ್ತೆ ಹೆಚ್ಚಬೇಕು ಎಂದು ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ಗ್ರಾಪಂ ವ್ಯಾಪ್ತಿಯ ಆರೋಗ್ಯ ಕಾರ್ಯಪಡೆ ಸಮಿತಿಗೆ ಸೂಚಿಸಿದರು.

ಗುರುವಾರ ವಿಜಯಪುರ ತಾಲೂಕಿನ ಗುಣಕಿ ಗ್ರಾಪಂ ಆವರಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಶೇ. 75 ಪ್ರಕರಣಗಳು ಹಳ್ಳಿಗಳಿಗರಲ್ಲೇ ಕಂಡು ಬರುತ್ತಿರುವ ಕಾರಣ ಗ್ರಾಮಾಂತರ ಪ್ರದೇಶದ ಜನರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಪ್ರತಿ ಗ್ರಾಪಂ ವ್ಯಾಪ್ತಿಯ ಮನೆ ಮನೆಗೆ ತೆರಳಿ ಪ್ರತಿ ಕುಟುಂಬದಲ್ಲಿ ಪ್ರತಿಯೊಬ್ಬರಲ್ಲೂ ಯಾವುದೇ ರೀತಿಯ ಜ್ವರ, ನೆಗಡಿ, ಕೆಮ್ಮು, ಉಸಿರಾಟ ತೊಂದರೆ ಹಾಗೂ ಕೋ ಮಾರಬೀಡ್‌ ಸೇರಿದಂತೆ ಬೇರೆ ಬೇರೆ ಅಪಾಯಕಾರಿ ಕಾಯಿಲೆ ಇದ್ದವರನ್ನು ಗುರುತಿಸಬೇಕು. ಅಲ್ಲದೇ ರೋಗ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಆದ್ಯತೆ ಮೇಲೆ ಚಿಕಿತ್ಸೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.

ಜನರ ಜೀವ ರಕ್ಷಣೆಯಲ್ಲಿ ತೊಡಗಿರುವ ತಾವು ಪ್ರತಿ ನಿತ್ಯ ಪ್ರತಿ ಕುಟುಂಬಗಳಲ್ಲಿ ಕೋವಿಡ್‌-19 ರೋಗ ಲಕ್ಷಣ ಉಳ್ಳವರ ಬಗ್ಗೆ ನಿಗಾ ಇಡಬೇಕು. ರೋಗ ಲಕ್ಷಣ ಕಂಡು ಬಂದ ತಕ್ಷಣ 7 ದಿನಗಳ ಅವಧಿಯಲ್ಲಿ ಸೂಕ್ತ ಚಿಕಿತ್ಸೆ ಪಡೆದಲ್ಲಿ ಪ್ರಾಣಾಪಾಯದಿಂದ ಪಾರಾಗಬಹುದು. ಉಸಿರಾಟ ತೊಂದರೆ ಹಾಗೂ ಕೋವಿಡ್‌ ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ಜನರು ಕೂಡ ಸ್ವಯಂಪ್ರೇರಿತವಾಗಿ ಚಿಕಿತ್ಸೆಗೆ ಒಳಪಡುವಂತೆ ಕರೆ ನೀಡಿದರು.

ರಕ್ತದಲ್ಲಿ ಆಮ್ಲಜನಕ ಕೊರತೆಯಿಂದ ಉಸಿರಾಟದ ತೊಂದರೆಯಾಗಲಿದೆ. ಇಂತಹ ಸಮಸ್ಯೆ ಇದ್ದವರು ತಕ್ಷಣ ಚಿಕಿತ್ಸೆಗೆ ಒಳಪಡುವ ಬಗ್ಗೆ ಕಾರ್ಯಪಡೆ ಸದಸ್ಯರು ಮನವರಿಕೆ ಮಾಡಬೇಕು. ಕೋವಿಡ್‌ ನಿಯಂತ್ರಣಕ್ಕಾಗಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರೊಂದಿಗೆ ಗ್ರಾಪಂ ಅಧ್ಯಕ್ಷರು, ಸದಸ್ಯರನ್ನು ಕೂಡ ಇದರಲ್ಲಿ ಸೇರ್ಪಡೆ ಮಾಡಲಾಗಿದ್ದು. ಸಾರ್ವಜನಿಕರಲ್ಲಿ ಪರಿಣಾಮಕಾರಿ ಅರಿವು ಮೂಡಿಸುವಂತೆ ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ರೋಗಿಗಳ ಪ್ರಮಾಣ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು.ಕೋವಿಡ್‌ ಮುಕ್ತಗೊಳಿಸಿದ ಗ್ರಾಪಂಗಳನ್ನು ಗುರುತಿಸಿ ಅವರಿಗೆ ಬಹುಮಾನ ನೀಡುವ ಸದುದ್ದೇಶ ಹೊಂದಲಾಗಿದ್ದು. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕೋವಿಡ್‌ ಮುಕ್ತ ಹಳ್ಳಿಗಳನ್ನಾಗಿ ಮಾಡಲು ಪ್ರಯತ್ನಿಸಬೇಕು. ಇತ್ತೀಚಿಗೆ ಗ್ರಾಮಗಳ ವ್ಯಾಪ್ತಿಯಲ್ಲಿ ಈ ರೋಗ ತೀವ್ರವಾಗಿ ಹರಡುತ್ತಿದ್ದು ಕಾರ್ಯ ಪಡೆಗಳು ಗಂಭೀರವಾಗಿ ಪರಿಗಣಿಸಿ ರೋಗ ಲಕ್ಷಣ ಉಳ್ಳವರನ್ನು ತಕ್ಷಣ ಪತ್ತೆ ಹಚ್ಚುವ ಕಾರ್ಯ ಮಾಡುವಂತೆ ಸಲಹೆ ನೀಡಿದರು.

ಗುಣಕಿ ಗ್ರಾಪಂ ಸೇರಿದಂತೆ ವಿವಿಧ ಗ್ರಾಪಂ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳ ಆರ್‌ಎಂಪಿ ವೈದ್ಯರ ಪಟ್ಟಿ ಪಡೆದು ಡಿಎಚ್‌ಒಗೆ ಸಲ್ಲಿಸಬೇಕು. ನೋಂದಾಯಿತವಲ್ಲದ ಆಸ್ಪತ್ರೆಗಳು ಕೋವಿಡ್‌ ಚಿಕಿತ್ಸೆ ನೀಡುತ್ತಿದ್ದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಳೆದ 15 ದಿನಗಳಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆಗೆ ಒಳಪಡಿಸಿದ ರೋಗಿಗಳ ಹೆಸರು,ಮೊಬೈಲ್‌ ನಂಬರ್‌ ಮತ್ತು ವಿಳಾಸ ಸಂಗ್ರಹಕ್ಕೂ ಕಾರ್ಯಪಡೆ ಸದಸ್ಯರಿಗೆ ಸೂಚಿಸಿದರು.

ಜಿಪಂ ಸಿಇಒ ಗೋವಿಂದರೆಡ್ಡಿ ಮಾತನಾಡಿ, ಕೋವಿಡ್‌ ರೋಗಿಗಳ ಪರಿಣಾಮಕಾರಿ ಪತ್ತೆಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಜೊತೆಯಲ್ಲಿ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರನ್ನು ಕಾರ್ಯಪಡೆಯಲ್ಲಿ ಸೇರಿಸಲಾಗಿದೆ ಎಂದರು. ಪ್ರತಿ ಹಳ್ಳಿಗಳಲ್ಲಿ ಕಳೆದ ಏಪ್ರಿಲ್‌ 1ರಿಂದ ಕೋವಿಡ್‌ ಸೋಂಕು ದೃಢಪಟ್ಟ ಹಾಗೂ ಮರಣಗಳ ಕುರಿತು ಕಾರ್ಯಪಡೆ ಸದಸ್ಯರು ಸಭೆಯ ಗಮನಕ್ಕೆ ತಂದರು. ತಾಪಂ ಇಒ ಬಿ.ಎಸ್‌. ರಾಠೊಡ, ಗ್ರಾಪಂ ಅಧ್ಯಕ್ಷೆ ಭಾಗ್ಯಶ್ರೀ ರಾಠೊಡ, ಪಿಡಿಒ ಎಸ್‌.ಐ. ಗದಗಿಮಠ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

08

ಕೋವಿಡ್: 8111 ಸೋಂಕಿತರು ಗುಣಮುಖ, 3709 ಹೊಸ ಪ್ರಕರಣ ಪತ್ತೆ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

06

ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಜಾರಕಿಹೊಲಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ

ಜಾರಕಿಹೊಳಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

Bihala

ಕೂಚಬಾಳ-ದೇಸಾಯಿ ಕಾರ್ಯ ಮಾದರಿ

pura

ಬಸವನಾಡಲ್ಲಿ ಸರ್ವಂ ಯೋಗ ಮಯಂ

ಪ್ರತ್ಯೇಕ ಗ್ರಾಮಗಳ ಪುರುಷ ಮತ್ತು ಮಹಿಳೆ ಒಂದೇ ಕಡೆ ವಿಷ ಸೇವನೆ: ಮಹಿಳೆ ಸಾವು

ಪ್ರತ್ಯೇಕ ಗ್ರಾಮಗಳ ಪುರುಷ ಮತ್ತು ಮಹಿಳೆ ಒಂದೇ ಕಡೆ ವಿಷ ಸೇವನೆ: ಮಹಿಳೆ ಸಾವು

Clean

ಸ್ವಚ್ಛತೆಗೆ ಸಹಕರಿಸಲು ಮುಖ್ಯಾಧಿಕಾರಿ ಮನವಿ

MUST WATCH

udayavani youtube

ಅಬ್ಬಾ Unlock ಆಯ್ತು | ಈಗ ಹೇಗಿದೆ ಬದುಕು ?

udayavani youtube

Chiffon ಸೀರೆಗಳು | ಮೊದಲು ತಿಳಿಯಿರಿ ನಂತ್ರ ಖರೀದಿಸಿ

udayavani youtube

ದಿಲ್ಲಿಯ ಮೆಟ್ರೋ ರೈಲಿನಲ್ಲಿ ಕೋತಿಯ ಜಾಲಿ ರೈಡ್‌

udayavani youtube

ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್‍ನಲ್ಲಿ ಗುಡ್ಡ ಕುಸಿತ

udayavani youtube

ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಹೊಸ ಸೇರ್ಪಡೆ

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

yoga day

ಯೋಗದಿಂದ ರೋಗಗಳು ನಿವಾರಣೆ: ಸಂಸದ

hasana news

ಮೆಗಾಡೇರಿ ನಿರ್ಮಾಣ ಕಾಮಗಾರಿಗೆ ಚಾಲನೆ

covid vaccination

ಕೋವಿಡ್‌ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ

drone-experiment-successful

ಡ್ರೋಣ್‌ ಪ್ರಯೋಗ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.