ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕೊಲೆಗೈದ ಪೊಲೀಸ್ ಪೇದೆ ಸೇರಿ 7 ಜನರ ಬಂಧನ


Team Udayavani, Apr 4, 2020, 4:45 PM IST

ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕೊಲಗೈದ ಪೊಲೀಸ್ ಪೇದೆ ಸೇರಿ 7 ಜನರ ಬಂಧನ

ವಿಜಯಪುರ: ವಿಕಲಚೇತನ ಪತ್ನಿಯನ್ನು ಪೊಲೀಸ್ ಪೇದೆ ಪತಿಯೇ ಹತ್ಯೆ ಮಾಡಿರುವ ದುರಂತ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಪತಿ ಪೇದೆ ಸೇರಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ನಗರದ ಆದರ್ಶ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸಾಕ್ಷಿ ನಾಶಕ್ಕಾಗಿ ಶವವನ್ನು ನದಿಗೆ ಎಸೆದಿದ್ದರೂ ಪೊಲೀಸರು ಶವವನ್ನು ಪತ್ತೆ ಮಾಡಿ, ಆರೋಪಗಳನ್ನು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಶ್ವಾನದಳ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಂಗರಾಜ ವಾಲಿಕಾರ ಹಾಗೂ ವಿಕಲಚೇತನೆಯಾಗಿದ್ದ ಸುಮಂಗಲಾ ವಾಲಿಕಾರ ಮಧ್ಯೆ ಫೇಸ್ ಬುಕ್ ನಲ್ಲಿ ಪರಿಚಯವಾಗಿ, ಪರಿಚಯ ಪ್ರೀತಿಗೆ ತಿರುಗಿ, ವಿವಾಹವಾಗಿತ್ತು.

ಆದರೆ ಪತಿ-ಪತ್ನಿಯ ಮಧ್ಯೆ ಕಳೆದ ಕೆಲ ದಿನಗಳಿಂದ ವೈಮನಸ್ಯ ಉಂಟಾಗಿ, ಜಗಳ ಆಡುತ್ತಿದ್ದರು. ಪತ್ನಿಯ ವರ್ತನೆಗೆ ಬೇಸತ್ತುಹೋಗಿದ್ದ ನಿಂಗರಾಜ ಕೊನೆಗೆ ನಾಲ್ವರು ಸ್ನೇಹಿತರ ನೆರವಿನೊಂದಿಗೆ ಮಾರಕಾಸ್ತ್ರದಿಂದ ಎ. 2ರಂದು ಹತ್ಯೆ ‌ಮಾಡಿದ್ದಾನೆ. ನಂತರ ಇನ್ನಿಬ್ಬರು ಸ್ನೇಹಿತರ ಸಹಾಯದಿಂದ ಶವವನ್ನು ಕೊಲ್ಹಾರ ಬಳಿಯ ಕೃಷ್ಣಾ ನದಿಯ ಸೇತುವೆ ಕೆಳಗೆ ಎಸೆದು ಪರಾರಿಯಾಗಿದ್ದ.

ಮಾ.3 ರಂದು ಕೊಲ್ಹಾರ ಬಳಿಯ ಕೃಷ್ಣಾ ನದಿಯಲ್ಲಿ ಶವಪತ್ತೆಯಾಗಿದೆ. ಘಟನೆಯ ಬಳಿಕ ಆರೋಪಿ ಪತಿಯ ವರ್ತನೆ ಬಗ್ಗೆ ಅನುಮಾನ ಮೂಡಿ, ಎಸ್ಪಿ ಅನುಪಮ್ ಅಗರವಾಲ ತೀವ್ರ ವಿಚಾರಣೆ ನಡೆಸಿದಾಗ, ಪೇದೆ ಪತಿ ನಿಂಗರಾಜನೇ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಶನಿವಾರ ಘಟನೆಯ ವಿವರ ನೀಡಿದ ಎಸ್ಪಿ ಅನುಪಮ್ ಅಗರವಾಲ, ಮುಖ್ಯ ಆರೋಪಿ ಪೇದೆ ಪತಿ ನಿಂಗರಾಜ, ಹತ್ಯೆಗೆ ಸಹಕರಿಸಿದ ಬಾಬು, ತೀರ್ಥಪ್ಪ, ಪರಶುರಾಮ, ತಾನಾಜಿ ಹಾಗೂ ಶವವನ್ನು ಸಾಗಿಸುವಾಗ ನೆರವು ನೀಡಿದ ರಮೇಶ ಹಾಗೂ ಪ್ರವೀಣ ಇವರನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.