ಜನಗಣತಿಗೆ ಮೊಬೈಲ್‌ ಆ್ಯಪ್‌

ಏ. 15ರಿಂದ ಜೂ. 1ರವರೆಗೆ ವೇಳಾ ಪಟ್ಟಿ ನಿಗದಿಪಡಿಸಿ ಮನೆ ಮನೆಗೆ ಭೇಟಿ: ಡಿಸಿ

Team Udayavani, Jan 19, 2020, 12:50 PM IST

19-January-6

ವಿಜಯಪುರ: ಸರ್ಕಾರದ ಜನ ಕಲ್ಯಾಣ ಯೋಜನೆ ರೂಪಿಸುವಲ್ಲಿ ಜನಸಂಖ್ಯೆಯ ಅಂಕಿ ಅಂಶಗಳು ಮುಖ್ಯಪಾತ್ರ ವಹಿಸಲಿವೆ. ಹೀಗಾಗಿ ದೇಶದ ಯೋಜನೆಗಳಲ್ಲಿ ಪ್ರಮುಖವಾಗಿರುವ ಜನಗಣತಿ ಕಾರ್ಯಕ್ಕೆ ನೂತನ ತಂತ್ರಜ್ಞಾನದ ಮೊಬೈಲ್‌ ಆ್ಯಪ್‌ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಜರುಗಿದ ಜನಗಣತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಅಂಕಿ ಅಂಶ ಸಂಗ್ರಹಣೆಯಲ್ಲಿ ಅತ್ಯಂತ ಪ್ರಮುಖ ಅಂಶವಾಗಿದೆ. ಜನಗಣತಿ ಕಾರ್ಯಕ್ರಮದಲ್ಲಿ ಇದೇ ಪ್ರಪ್ರಥಮ ಬಾರಿಗೆ ಮೊಬೈಲ್‌ ಆ್ಯಪ್‌ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಈ ವಿಶೇಷ ತಾಂತ್ರಿಕತೆ ಅಭಿವೃದ್ಧಿ ಪಡಿಸಿದ ಈ ತಂತ್ರಜ್ಞಾನ ಬಳಕೆಯಲ್ಲಿ ಅಧಿಕಾರಿಗಳು ಸೂಕ್ತ ಮಾಹಿತಿ ಹೊಂದುವುದು ಸೂಕ್ತ ಎಂದರು.

2020-21ನೇ ಸಾಲಿನ ಜನಗಣತಿ ಕಾರ್ಯ ಎರಡು ಹಂತದಲ್ಲಿ ನಡೆಯಲಿದ್ದು, ಒಂದನೇ ಹಂತದಲ್ಲಿ ಮನೆ ಮನೆಗೆ ಭೇಟಿ ನೀಡಿ ಜನಸಂಖ್ಯೆ ಪರಿಶೀಲನೆ ನಡೆಸಲಾಗುವುದು. 15 ಏಪ್ರಿಲ್‌ನಿಂದ ಜೂನ್‌ 1ರವರೆಗೆ ವೇಳಾ ಪಟ್ಟಿ ನಿಗದಿಪಡಿಸಿ ಮನೆ ಮನೆಗೆ ಭೇಟಿ ನೀಡಿ ಜನಸಂಖ್ಯೆ ಪರಿಶೀಲನೆ ಮಾಡಲಾಗುವುದು. ಜನಗಣತಿ ವಿಷಯದ ಕಾರ್ಯನಿರ್ವಹಣೆ ಕುರಿತು ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಾರದರ್ಶಕ ರೀತಿಯಲ್ಲಿ ಹಾಗೂ ವಸ್ತು ನಿಷ್ಠ ಅಂಕಿ-ಅಂಶ ಒದಗಿಸುವ ಜನಗಣತಿ ಕಾರ್ಯ ಕೈಗೊಳ್ಳಬೇಕು. ಅಧಿಕಾರ ಯಂತ್ರದಲ್ಲಿ ಜಿಲ್ಲಾ ಧಿಕಾರಿಗಳು ಜಿಲ್ಲಾ ಪ್ರಧಾನ ಜನಗಣತಿ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದು ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಜನಗಣತಿ ಅಧ್ಯಯನ ಅಧಿಕಾರಿಗಳಾಗಿ ಅಪರ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ಜನಗಣತಿ ಅ ಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಅದರಂತೆ ಈ ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಡಿಐಒ ಹಾಗೂ ಎನ್‌ ಐಸಿ ಅ ಧಿಕಾರಿಗಳು ಜನಗಣತಿ ಕಾರ್ಯಕ್ಕಾಗಿ ಸಿಬ್ಬಂದಿಗಳ ನಿಯೋಜನೆಯ ಜವಾಬ್ದಾರಿಯನ್ನು ವಹಿಸುಕೊಳ್ಳುವಂತೆ ಸೂಚಿಸಿದರು.

ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯುತ ಜನಗಣತಿ ಕಾರ್ಯಕ್ಕೆ ಗಮನ ನೀಡಬೇಕು. ಈಗಾಗಲೇ ಇಬ್ಬರು ಮಾಸ್ಟರ್‌ ಟ್ರೇನರ್‌ಗಳನ್ನೂ ನೇಮಿಸಿದ್ದು, 71 ಕ್ಷೇತ್ರ ಮಟ್ಟದ ತರಬೇತುದಾರರನ್ನು ಫೆಬ್ರುವರಿ 20ರ ಒಳಗೆ ತರಬೇತಿ ಗೊಳಿಸಲಾಗುವುದು. ತಾಂತ್ರಿಕ ಆಪರೇಟರಗಳ ಸಂಬಂಧಿಸಿದ ಪ್ರದೇಶಗಳನ್ನು ನಿಯೋಜಿಸಲಾಗುವುದು. ಈಗಾಗಲೇ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಿದ ಜಿಲ್ಲಾ ಧಿಕಾರಿಗಳು, 3,389 ಗಣತಿದಾರರು ಹಾಗೂ 564 ಗಣತಿದಾರರ ಮೇಲ್ವಿಚಾರಕರನ್ನಾಗಿ ಜನಗಣತಿ ನಿರ್ದೇಶನಾಲಯದ ಸೂಚನೆ ಮೇರೆಗೆ ನೇಮಕ ಮಾಡಿಕೊಳ್ಳಲಾಗುವುದು. ತರಬೇತಿದಾರರನ್ನು ಜನಗಣತಿ ಕಾರ್ಯಕ್ಕೆ ಸಂಬಂಧಪಟ್ಟ ಕ್ಷೇತ್ರಗಳ ಬಗ್ಗೆ ಜನಗಣತಿದಾರರಿಗೆ ಕಳಿಸುವುದಾಗಿ ವಿವರಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.