ಕೋವಿಡ್ : ಬಸವನಾಡಲ್ಲಿ ಮಹಾ ಸ್ಪೋಟ

ಹೊಸದಾಗಿ 26 ಕೋವಿಡ್‌ ಸೋಂಕಿತರು ಅಜೇಯ ಶತಕ ಬಾರಿಸಿದ ವಿಜಯಪುರ

Team Udayavani, Jun 1, 2020, 11:57 AM IST

01-June-04

ವಿಜಯಪುರ: ವಿಜಯಪುರ ಜಿಲ್ಲೆಯ ಮಟ್ಟಿಗೆ ಮೇ ತಿಂಗಳ ಕೊನೆ ದಿನ ರವಿವಾರ ಕರಾಳ ದಿನವಾಗಿ ಮಾರ್ಪಟ್ಟಿದೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿರುವ ವಲಸೆ ಕಾರ್ಮಿಕರಲ್ಲಿ ಮೇ 31ರಂದು ಒಂದೇ ದಿನ 26 ಜನರಲ್ಲಿ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

ಅಲ್ಲದೇ ಮೊದಲ ಹಂತದ ಸೋಂಕಿತರು ಗುಣಮುಖರಾಗಿ ಮನೆಗೆ ಮರಳುವ ಹಂತದಲ್ಲಿ ಒಂದೇ ದಿನ ಬೃಹತ್‌ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುವ ಮೂಲಕ ಅಜೇಯ ಶತಕದೊಂದಿಗೆ 122ಕ್ಕೆ ಏರಿದ್ದು ಜಿಲ್ಲೆ ಜನರಲ್ಲಿ ಆತಂಕ ಸೃಷ್ಟಿಸಿದೆ. ರವಿವಾರ ಸೋಂಕು ದೃಢಪಟ್ಟವರೆಲ್ಲ ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿ, ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರದಲ್ಲಿ ಇದ್ದವರೇ. ಹೊಸದಾಗಿ ಸೋಂಕು ದೃಢಪಟ್ಟವರಲ್ಲಿ ಓರ್ವ ವೃದ್ಧ, 10 ಪುರುಷರು, ಒಂಬತ್ತು ಮಹಿಳೆಯರು, ಮೂರು ಬಾಲಕರು ಹಾಗೂ ಇಬ್ಬರು ಬಾಲಕಿಯರೂ ಇದ್ದಾರೆ.

ಹೊಸ ಸೋಂಕಿತರನ್ನು 70 ವರ್ಷದ ಪಿ 2923, 55 ವರ್ಷದ ವ್ಯಕ್ತಿ ಪಿ 2924, 55 ವರ್ಷದ ಮಹಿಳೆ ಪಿ 2925, 38 ವರ್ಷದ ವ್ಯಕ್ತಿ ಪಿ 2926, 28 ವರ್ಷದ ಮಹಿಳೆ ಪಿ 2927, 38 ವರ್ಷದ ವ್ಯಕ್ತಿ ಪಿ 2928, 30 ವರ್ಷದ ವ್ಯಕ್ತಿ ಪಿ 2929, 51 ವರ್ಷದ ಪುರುಷ ಪಿ 3009, 15 ವರ್ಷದ ಬಾಲಕ ಪಿ 3013, 46 ವರ್ಷದ ವ್ಯಕ್ತಿ ಪಿ 3014, 4 ವರ್ಷದ ಬಾಲಕಿ ಪಿ 3151, 45 ವರ್ಷದ ಮಹಿಳೆ ಪಿ 3152, 35 ವರ್ಷದ ಮಹಿಳೆ ಪಿ 3153, 23 ವರ್ಷದ ಮಹಿಳೆ ಪಿ 3154, 22 ವರ್ಷದ ಯುವಕ ಪಿ 3157, 33 ವರ್ಷದ ವ್ಯಕ್ತಿ ಪಿ 3171, 59 ವರ್ಷದ ವ್ಯಕ್ತಿ ಪಿ 3172, 37 ವರ್ಷದ ವ್ಯಕ್ತಿ ಪಿ 3173, 5 ವರ್ಷದ ಬಾಲಕ ಪಿ 3174, 2 ವರ್ಷದ ಬಾಲಕ ಪಿ 31715, 20 ವರ್ಷದ ಪಿ 3176, 54 ವರ್ಷದ ಮಹಿಳೆ ಪಿ 3177, 30 ವರ್ಷದ ಪುರುಷ ಪಿ 3178, 22 ವರ್ಷದ ಮಹಿಳೆ ಪಿ 3179, 25 ವರ್ಷದ ಮಹಿಳೆ ಪಿ 3180, 3 ವರ್ಷದ ಬಾಲಕಿ ಪಿ 3181 ಎಂದು ಗುರುತಿಸಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ 24,511 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದು 17,047 ಜನರ ವರದಿ ನೆಗೆಟಿವ್‌ ಬಂದಿದೆ. 7,342 ಜನರ ವರದಿ ನಿರೀಕ್ಷೆಯಲ್ಲಿದೆ. ರವಿವಾರದ 26 ಸೋಂಕಿತರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 122ಕ್ಕೆ ಏರಿದೆ. ಇದೇ ದಿನ ಓರ್ವ ಸೋಂಕಿತೆ ಪಿ 2136 ಸೋಂಕು ಮುಕ್ತಳಾಗಿ ಮನೆಗೆ ಮರಳಿದ್ದಾಳೆ. ಮಹಾರಾಷ್ಟ್ರದಿಂದ ಹಿಂದಿರುಗಿದ್ದ ಈಕೆಗೆ ಮೇ 25ರಂದು ಸೋಂಕು ದೃಢಪಟ್ಟಿತ್ತು. ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಈಕೆಯೊಂದಿಗೆ ಜಿಲ್ಲೆಯಲ್ಲಿ ಸೋಂಕು ಮುಕ್ತರ ಸಂಖ್ಯೆ 55ಕ್ಕೆ ಏರಿದೆ.

ಸೋಂಕಿತರಲ್ಲಿ ಈಗಾಗಲೇ ಐವರು ಮೃತಪಟ್ಟಿದ್ದು, 62 ಸಕ್ರೀಯ ಸೋಂಕಿತರು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವಿಧ ಕಡೆಗಳಿಂದ ಜಿಲ್ಲೆಗೆ ಮರಳಿದ 27,384 ಜನರು ಒಟ್ಟು ನಿಗಾದಲ್ಲಿ ಇರಿಸಲಾಗಿದ್ದು, 6,838 ಜನರು ಐಸೋಲೇಶನ್‌ ಕ್ವಾರಂಟೈನ್‌ ಪೂರ್ಣ ಮಾಡಿದ್ದಾರೆ. 20, 486 ಜನರು 28 ದಿನಗಳ ರಿಪೋರ್ಟಿಂಗ್‌ ಅವಧಿಯಲ್ಲಿದ್ದಾರೆ.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.