ಕೋವಿಡ್ ನಿಯಂತ್ರಣ ವೈಫಲ್ಯ: ವಿಜಯಪುರ ಡಿಎಚ್ಒ ಡಾ.ಯರಗಲ ಕಡ್ಡಾಯ ರಜೆ
Team Udayavani, Apr 30, 2021, 1:27 PM IST
ವಿಜಯಪುರ: ಕೋವಿಡ್ ಎರಡನೇ ಅಲೆಯ ವೇಗ ಹೆಚ್ಚಿದ್ದು, ಸೋಂಕು ನಿಯಂತ್ರಣ ವಿಷಯದಲ್ಲಿ ವಿಫಲವಾಗಿದ್ದಾರೆ ಎಂಬ ಆರೋಪದಲ್ಲಿ ವಿಜಯಪುರ ಡಿಎಚ್ಒ ಡಾ.ರಾಜಕುಮಾರ ಯರಗಲ ಅವರನ್ನು ಕಡ್ಡಾಯ ರಜೆ ಮೇಲೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಯ. ಶಿವಶಂಕರ ಅವರು, ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಡಾ.ರಾಜಕುಮಾರ ಅವರನ್ನು ಕಡ್ಡಾಯ ರಜೆ ಮೇಲೆ ಕಳಿಸಲು ಆದೇಶದಲ್ಲಿ ತಿಳಿಸಿದ್ದಾರೆ.
ಡಾ.ರಾಜಕುಮಾರ ಅವರ ಕಡ್ಡಾಯ ರಜೆಯಿಂದ ತೆರವಾಗುವ ವಿಜಯಪುರ ಡಿಎಚ್ಒ ಹುದ್ದೆಗೆ ಈ ಹಿಂದೆ ಇದೇ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವ ಸದ್ಯ ಕಲಬುರಗಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಫಿಜೀಶಿಯನ್ ಆಗಿರುವ ಡಾ.ಮಹೇಂದ್ರ ಕಾಪಸೆ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡುವಂತೆ ಏಪ್ರಿಲ್ 28 ರಂದು ಹೊರಡಿಸಿರುವ ಅಧಿಸೂಚನೆಯ ಆದೇಶದಲ್ಲಿ ತಿಳಿಸಲಾಗಿದೆ.
ಮೂಲಗಳ ಪ್ರಕಾರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಡಾ.ರಾಜಕುಮಾರ ಯರಗಲ ಅವರು ಡಾ.ಮಹೇಂದ್ರ ಕಾಪ್ಸೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24 ಗಂಟೆಯಲ್ಲಿ 9,062 ಕೋವಿಡ್ ಪ್ರಕರಣ ಪತ್ತೆ, 36 ಮಂದಿ ಸಾವು
ಭಾರತದಲ್ಲಿ 24 ಗಂಟೆಯಲ್ಲಿ 8,813 ಕೋವಿಡ್ ಸೋಂಕು ಪ್ರಕರಣ ಪತ್ತೆ, 29 ಮಂದಿ ಸಾವು
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,815 ಕೋವಿಡ್ ಪ್ರಕರಣ ಪತ್ತೆ, 68 ಸಾವು
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,299 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
MUST WATCH
ಹೊಸ ಸೇರ್ಪಡೆ
ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು
ಫಾಝಿಲ್ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ
ವಿವೋ ವಿ25 ಪ್ರೋ ಫೋನ್ ಬಿಡುಗಡೆ; ಕಲರ್ ಚೇಂಜ್ ಮಾಡಿಕೊಳ್ಳುವ ಫೋನ್