ಕೃಷ್ಣಾ-ಭೀಮಾ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ತಡೆಯಿರಿ

ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲರಿಂದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ

Team Udayavani, May 30, 2020, 2:37 PM IST

30-May-24

ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಜಿಲ್ಲೆಯ ಅಕ್ರಮ ಮರಳುಗಾರಿಕೆ ತಡೆಗಾಗಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ವಿಜಯಪುರ: ಜಿಲ್ಲೆಯ ಕೃಷ್ಣಾ ಹಾಗೂ ಭೀಮಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆ ತೀವ್ರ ನಿಗಾ ಇಡುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಸಂವಾದದಲ್ಲಿ ತಾಲೂಕು ಮಟ್ಟದ ಕಂದಾಯ, ಪೊಲೀಸ್‌, ಗಣಿ ಮತ್ತು ಭೂವಿಜ್ಞಾನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದ ಅವರು, ತಾಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ತಾಲೂಕು ಕಾರ್ಯಪಡೆ ಸಮಿತಿ ಇನ್ನೂ ಚುರುಕಾಗಿ ಕಾರ್ಯನಿರ್ವಹಿಸಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಭೀಮಾ ನದಿ ಪಾತ್ರದ ಇಂಡಿ, ಮೊರಟಗಿ ಚೆಕ್‌ಪೋಸ್ಟ್‌ ವ್ಯಾಪ್ತಿಯಲ್ಲಿ ತೀವ್ರ ನಿಗಾ ಇಡಬೇಕು. ಭೀಮಾ ನದಿ ತೀರದ ಇಂಡಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗಾಗಿ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ವಿಶೇಷವಾದ ಇಬ್ಬರು ಅಧಿಕಾರಿಗಳನ್ನು 24×7 ಕಾಲ ನಿಯೋಜಿಸಿ, ತೀವ್ರ ನಿಗಾ ಇಡುವಂತೆ ಸೂಚಿಸಿದರು.

ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ತಾಲೂಕು ಟಾಸ್ಕ್ಫೋರ್ಸ್‌ ಸಮಿತಿಯಲ್ಲಿರುವ ಪೊಲೀಸ್‌ ಉಪ ಅಧೀಕ್ಷಕರು, ತಹಶೀಲ್ದಾರ್‌, ಲೋಕೋಪಯೋಗಿ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಸಮಿತಿ ಚುರುಕಾಗಿ ಕೆಲಸ ಮಾಡಬೇಕು. ಅಕ್ರಮ ಮರಳು ಗಣಿಗಾರಿಕೆ ಕುರಿತು ಬರುವ ದೂರುಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ತಿಳಿಸಿ, ಅವಶ್ಯಕ ಸಂದರ್ಭದಲ್ಲಿ ಪೊಲೀಸ್‌ ಇಲಾಖೆ ನೆರವು ಪಡೆಯುವಂತೆ ನಿರ್ದೇಶನ ನೀಡಿದರು.

ತಾಲೂಕು ಟಾಸ್ಕ್ಫೋರ್ಸ್‌ ಸಮಿತಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ನೇಮಿಸಬೇಕು. ದೂರುಗಳು ಬಂದ ತಕ್ಷಣ ವಿಳಂಬ ಮಾಡದೇ ತಕ್ಷಣ ಕ್ರಮ ಕೈಗೊಳ್ಳಬೇಕು. ತಾಳಿಕೋಟೆಯಲ್ಲಿ ತಹಶೀಲ್ದಾರರು ಪೊಲೀಸ್‌ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ನಿರ್ಲಕ್ಷ ಮತ್ತು ಸಮನ್ವಯತೆ ಕೊರತೆಯಿಂದ ಲೋಪವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಇದೇ ಸಂದರ್ಭದಲ್ಲಿ ನೂತನ ಮರಳು ನೀತಿ ಅನ್ವಯ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಿ, ವಿಜಯಪುರ ಕೃಷ್ಣಾ ನದಿ ತೀರದ ವ್ಯಾಪ್ತಿಯಲ್ಲಿಯೂ ತೀವ್ರ ನಿಗಾ ಇಡುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ವಿಶೇಷವಾಗಿ ಬಬಲೇಶ್ವರ ತಹಶೀಲ್ದಾರರು ಹಾಗೂ ಆಡಳಿತದ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಲೋಪಕ್ಕೆ ಅವಕಾಶ ನೀಡದಂತೆ ಅವರು ಸೂಚನೆ ನೀಡಿದರು.

ಎಸ್ಪಿ ಅನುಪಮ್‌ ಅಗರವಾಲ್‌ ಅವರು ಅಕ್ರಮ ಗಣಿಗಾರಿಕೆ ತಡೆಗೆ ತಾಲೂಕಾವಾರು ಸಹಾಯವಾಣಿ ಮತ್ತು ವಿಚಕ್ಷಣಾ ತಂಡಗಳ ರಚನೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವ ಕುರಿತಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಜಿಪಂ ಸಿಇಒ ಗೋವಿಂದರೆಡ್ಡಿ ಸೇರಿದಂತೆ ಗಣಿ ಮತ್ತು ಭೂವಿಜ್ಞಾನ, ಪೊಲೀಸ್‌, ಲೋಕೋಪಯೋಗಿ, ಕಂದಾಯ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.