ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ

ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲು ಜಿಲ್ಲಾಧಿಕಾರಿ ಪಾಟೀಲ ಸೂಚನೆ

Team Udayavani, Apr 11, 2020, 1:02 PM IST

11-April-08

ವಿಜಯಪುರ: ಜಿಲ್ಲಾಧಿ ಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಯಿತು.

ವಿಜಯಪುರ: ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಸಂವಾದ ನಡೆಸಿದ ಅವರು, ಉಪವಿಭಾಗಾಧಿ ಕಾರಿಗಳು, ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಪಂ ಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ಕ್ಷೇತ್ರ ಭೇಟಿ ನೀಡಿ ಪರಿಶೀಲಿಸಬೇಕು. ಯಾವುದೇ ಪರಿಸ್ಥಿತಿಯಲ್ಲಿ ಜನರಿಗೆ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಅವಶ್ಯಕತೆ ಇರುವ ಕಡೆ ಖಾಸಗಿ ಬೋರ್‌ ವೆಲ್‌ ಮಾಲೀಕರ ಸಹಾಯ ಪಡೆಯುವ ಬಗ್ಗೆ ಸೂಕ್ತ ಸಮೀಕ್ಷೆ ನಡೆಸಬೇಕು. ಅವಶ್ಯಕತೆ ಇದ್ದಾಗ ಮಾತ್ರ ಹಣ ಪೋಲಾಗದೆ ಬೋರ್‌ವೆಲ್‌ ಕೊರೆಯಿಸಲು ತಿಳಿಸಿದ ಅವರು, ಖಾಸಗಿ ಬೋರ್‌ವೆಲ್‌ಗ‌ಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಟ್ಯಾಂಕರ್‌ ಮೂಲಕ ನೀರು ಸರಬರಾಜು ಕುರಿತು ತಾಂತ್ರಿಕವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಕೋವಿಡ್‌-19 ಇರುವ ಹಿನ್ನೆಲೆಯಲ್ಲಿ ವಿವಿಧ ಗ್ರಾಮ ಮತ್ತು ತಾಂಡಾಗಳಲ್ಲಿ ವಲಸೆ ಹೋಗಿರುವ ಜನರು ಸಹ ಮರಳಿದ್ದು, ಯಾರಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಎಸ್‌ಡಿಆರ್‌ಎಫ್‌ ಮತ್ತು ರಾಜ್ಯ ಅನುದಾನ ಒದಗಿಸುತ್ತಿದ್ದು, ನೈಜ ಕುಡಿಯುವ ನೀರಿನ ಸಮಸ್ಯೆ ಆಧಾರದ ಮೇಲೆ ಕ್ರಮ ಕೈಗೊಳ್ಳುವಂತೆ ಇಂಡಿ, ಸಿಂದಗಿ, ಮುದ್ದೆಬಿಹಾಳ ಹಾಗೂ ಇತರೆ ತಾಲೂಕು ಅಧಿಕಾರಿಗಳಿಗೆ ಸೂಚಿಸಿದರು. ಈ ಎಲ್ಲ ಜವಾಬ್ದಾರಿಯನ್ನು ವಿಜಯಪುರ ಮತ್ತು ಇಂಡಿ ಉಪವಿಭಾಗಾಧಿ ಕಾರಿಗಳಿಗೆ ನೀಡಿದ್ದು, ಅವಶ್ಯಕತೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕು. ಆಯಾ ತಹಶೀಲ್ದಾರರು, ತಾಲೂಕು ಕಾರ್ಯ ನಿರ್ವಹಣಾ ಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳು ಕ್ಷೇತ್ರಮಟ್ಟದಲ್ಲಿ ಭೇಟಿ ನೀಡಿ ಅವಶ್ಯಕ ಕ್ರಮ ಕೈಗೊಳ್ಳಲು ಸೂಚಿಸಿದರು.

ಜಿಪಂ ಸಿಇಒ ಗೋವಿಂದರೆಡ್ಡಿ ಮಾತನಾಡಿ, ಜಲ ಸಂಪನ್ಮೂಲ ಲಭ್ಯ ಇರುವ ಕಡೆ ಬೋರ್‌ವೆಲ್‌ ಕೊರೆಯಲು, ಖಾಸಗಿ ಬೋರ್‌ವೆಲ್‌ ಸಹಕಾರ ಪಡೆದು ಜನರಿಗೆ ನೀರಿನ ಕೊರತೆಯಾಗದಂತೆ ನಿಗಾ ವಹಿಸಬೇಕು. ಈ ಹಿಂದಿನ ವಾಟರ್‌ಟ್ಯಾಂಕರ್‌ ಮೊಬೈಲ್‌ ಆ್ಯಪ್‌ ಸಾಫ್ಟ್‌ವೇರ್‌ ಶೇ.100 ಪುರ್ಣವಿಲ್ಲದ ಹಿನ್ನೆಲೆ ಕ್ಷೇತ್ರ ಮಟ್ಟದಲ್ಲಿ ಪರಿಶೀಲಿಸಿ ಮ್ಯಾನುವಲ್‌ ಆಧಾರದ ಮೇಲೆ ಟ್ಯಾಂಕರ್‌ ಟ್ರೀಪ್‌ ಅಪ್‌ಡೆಟ್‌ ಮಾಡುವಂತೆ ಸೂಚಿಸಿದರು.  ಸಭೆಯಲ್ಲಿ ಅಪರ ಜಿಲ್ಲಾಧಿ ಕಾರಿ ಡಾ| ಔದ್ರಾಮ್‌, ಎಸಿ ಸೋಮಲಿಂಗ ಗೆಣ್ಣೂರು ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.