ವೈದ್ಯರ ಸಲಹೆವಿಲ್ಲದೇ ಎಂಟಿಪಿ ಮಾರಾಟವಿಲ್ಲ

ತಪ್ಪೆಸಗುವ ಮಾರಾಟ ಮಳಿಗೆ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮದ ಎಚ್ಚರಿಕೆ

Team Udayavani, Feb 14, 2020, 3:04 PM IST

14-February-15

ವಿಜಯಪುರ: ತಜ್ಞ ವೈದ್ಯರ ಸಲಹೆವಿಲ್ಲದೇ ಎಂಟಿಪಿ (ಮೆಡಿಕಲ್‌ ಟರ್ಮಿನೆಷನ್‌ ಆಫ್‌ ಪ್ರೆಗ್ನೆನ್ಸಿ) ಗೆ ಸಂಬಂಧಪಟ್ಟಂತೆ ಔಷಧಗಳನ್ನು ಮಾರಾಟ ಮಾಡದಂತೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು ಕೂಡಾ ಕೆಲವು ಔಷಧ ಮಳಿಗೆಗಳಲ್ಲಿ ಇಂತಹ ಔಷಧ ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಟಿಸಿ ಪಿಎನ್‌ಡಿಪಿ ಜಿಲ್ಲಾ ಸಲಹಾ ಸಮಿತಿ ಹಾಗೂ ತಪಾಸಣಾ ಮತ್ತು ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಎಂಟಿಪಿ (ಗರ್ಭಪಾತ) ಕೈಗೊಳ್ಳುವ ಕುರಿತಂತೆ ಕಾನೂನಿನ ಅಡಿಯಲ್ಲಿ ಅವಕಾಶ ಇರುವುದರಿಂದ ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇಲ್ಲ. ಆದರೂ ಕೂಡಾ ಗರ್ಭಪಾತಕ್ಕೆ ಇಚ್ಚಿತ ಮಹಿಳೆಯರು ತಜ್ಞವೈದ್ಯರ ಸಲಹಾ ಚೀಟಿಗಾಗಿ ಸಂಪರ್ಕಿಸಬಹುದೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲೆಯಲ್ಲಿ ತಜ್ಞವೈದ್ಯರ ಸಲಹೆವಿಲ್ಲದೆ ವಿವಿಧ ಔಷಧಿ ಅಂಗಡಿಗಳ ಮೂಲಕ ಗರ್ಭಪಾತಕ್ಕೆ ಸಂಬಂಧಪಟ್ಟ ಔಷಧಗಳನ್ನು ಕೌಂಟರ್‌ಸೇಲ್‌ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇನ್ನೂ ಮುಂದೆ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕಾನೂನಿನ ಅಡಿಯಲ್ಲಿ ಸಂಬಂಧಪಟ್ಟ ಮಾರಾಟಗಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು. ತಜ್ಞ ವೈದ್ಯರ ಸಲಹಾ ಚೀಟಿ ಆಧಾರದ ಮೇಲೆ ಗರ್ಭಪಾತಕ್ಕೆ ಔಷಧ ಮಾರಾಟಕ್ಕೆ ಸಂಬಂ ಧಿಸಿದಂತೆ ಆಯಾ ಔಷಧ ಮಳಿಗೆ ಮಾಲೀಕರು ಕಡ್ಡಾಯವಾಗಿ ಸಂಬಂಧಿಸಿದ ವೈದ್ಯರ ಹೆಸರಿನೊಂದಿಗೆ ಪ್ರತ್ಯೇಕ ರಜಿಸ್ಟರ್‌ ನಿರ್ವಹಣೆ ಮಾಡಬೇಕು. ಅದರಂತೆ ಸ್ಟಾಕ್‌ (ಸಂಗ್ರಹಣಾ) ರಜಿಸ್ಟರ್‌ದಲ್ಲಿ ಓಪನಿಂಗ್‌ ಹಾಗೂ ಕ್ಲೋಸಿಂಗ್‌ ಬ್ಯಾಲೆನ್ಸ್‌ಅನ್ನು ಸಹ ತಪ್ಪದೇ ನಮೂದಿಸುವಂತೆ ಸೂಚನೆ ನೀಡಿದರು.

ಪ್ರಸವ ಪೂರ್ವ ಭ್ರೂಣಲಿಂಗ ಪತ್ಯೆ ನಿಷೇಧ ಕಾನೂನಿನ ಕುರಿತಂತೆ ಗಡಿ ಭಾಗದ ವೈದ್ಯರನ್ನು ಸೇರಿದಂತೆ ಸಂಬಂಧಪಟ್ಟವರಿಗೆ ಫೆ.25ರಂದು ಕಾರ್ಯಾಗಾರವೊಂದನ್ನು ಸಹ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸ್ಕ್ಯಾನಿಂಗ್‌ ಮಷಿನ್‌ ಬಳಕೆಗೆ ಸಂಬಂಧಿ ಸಿದಂತೆ ಒಂದು ಆಸ್ಪತ್ರೆಯಿಂದ ಬಂದಿರುವ ಹೊಸ ಅರ್ಜಿಯನ್ನು ಹಾಗೂ ಆಸ್ಪತ್ರೆ ವರ್ಗಾವಣೆ ಕೋರಿ ಬಂದಿರುವ ಒಂದು ಅರ್ಜಿಯನ್ನು ಪರಿಶೀಲಿಸಿ ಆಯಾ ಆಸ್ಪತ್ರೆಗಳು ಕಾನೂನಿನ ಪ್ರಕಾರ ಎಲ್ಲಾ ಮಾರ್ಗಸೂಚಿಗಳನ್ನು ಮತ್ತು ನಿಯಮಾವಳಿಗಳನ್ನು ಪಾಲಿಸಬೇಕು. ಚೆಕ್‌ಲಿಸ್ಟ್‌ ದೃಢೀಕರಣ ಆಧಾರದ ಮೇಲೆ ಸ್ಕ್ಯಾನಿಂಗ್‌ ಮಷಿನ್‌ ಬಳಕೆ ಅನುಮತಿಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಂದ್ರ ಕಾಪ್ಸೆ, ಮಕ್ಕಳ ತಜ್ಞ ಎಲ್‌.ಎಚ್‌. ಬಿದರಿ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.