ಪ್ರತಿ ರೋಗಿ ಮೇಲೆ ನಿಗಾಕ್ಕೆ ವಿಶೇಷ ಆ್ಯಪ್‌ ಬಿಡುಗಡೆ


Team Udayavani, Apr 18, 2020, 3:39 PM IST

18-April-25

ವಿಜಯಪುರ: ಜಿಲ್ಲೆಯ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ಸೋಂಕಿತರ ಆರೋಗ್ಯದ ಮೇಲೆ ನಿಗಾ ಇಡಲು ಜಿಲ್ಲೆಯಲ್ಲಿ ವಿಶೇಷ ಆ್ಯಪ್‌ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲೇ ಇಂಥ ವಿಶೇಷ ಆ್ಯಪ್‌ ಬಿಡುಗಡೆ ಮಾಡುತ್ತಿರುವ ಮೊದಲ ಜಿಲ್ಲೆ ಎಂಬ ಹಿರಿಮೆ ವಿಜಯಪುರ ಜಿಲ್ಲಾಡಳಿತಕ್ಕೆ ಸಲ್ಲುತ್ತಿದೆ.

ಬೆಳಗಾವಿ ಪ್ರಾದೇಶಿಕ ಆಯುಕ್ತ ಎ.ಎ. ಬಿಸ್ವಾಸ್‌ ಅವರ ಸಲಹೆ ಮೇರೆಗೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ನೇತೃತ್ವದಲ್ಲಿ ಎಸ್ಪಿ ಅನುಪಮ್‌ ಅಗರವಾಲ್‌, ಜಿಪಂ ಸಿಇಒ ಗೋವಿಂದರಡ್ಡಿ ಇವರ ಮುತುವರ್ಜಿಯಲ್ಲಿ ಈ ಆ್ಯಪ್‌ ರೂಪಿಸಲಾಗಿದೆ.

ಜಿಲ್ಲೆಯ ಪ್ರವಾಸೋದ್ಯಮಕ್ಕೆ ಆಧುನಿಕ ತಂತ್ರಜ್ಞಾನದ ವರ್ಚ್ಯೂವಲ್‌ ವಿಡಿಯೋ, ಆಡಿಯೋ ಗೈಡ್‌ನ‌ಂಥ ತಾಂತ್ರಿಕತೆಯನ್ನು ರೂಪಿಸಿರುವ ಟೆಕ್ಕಿ ಕಿರಣ ಕುಲಕರ್ಣಿ ಅವರ ತಂಡವೇ ಕೋವಿಡ್‌-19 ರೋಗಿಗಳ ಮೇಲೆ ನಿಗಾ ಇಡುವ ವಿಶೇಷ ಆ್ಯಪ್‌ ರೂಪಿಸಿರುವುದು ವಿಶೇಷ. ಜಿಲ್ಲಾ ಧಿಕಾರಿಗಳ ಸೂಚನೆ ಬರುತ್ತಲೇ ಯಚರಪ್ಪ ಕಮ್ಮಾರ ಹಾಗೂ ವಾದಿರಾಜ್‌ ಜೋಶಿ ಎಂಬ ಇಬ್ಬರ ಸಹಾಯಕರೊಂದಿಗೆ ಕೇವಲ 24 ಗಂಟೆಯಲ್ಲಿ ಈ ಆ್ಯಪ್‌ ರೂಪಿಸಿರುವುದು ವಿಶೇಷ.

ಸದರಿ ಆ್ಯಪ್‌ ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿ ಪ್ರತಿ ರೋಗಿಯ ಪ್ರತಿ ಕ್ಷಣದ ವರ್ತನೆ ಹಾಗೂ ಆರೋಗ್ಯದಲ್ಲಿನ ಬದಲಾವಣೆ ಕುರಿತು ನಿಗಾ ವಹಿಸಲು ನೆರವಾಗಲಿದೆ. ರೋಗಿಗಳಲ್ಲಿ ಕಾಣಿಸುವ ಆರೋಗ್ಯದ ಬದಲಾವಣೆ ಕುರಿತು ಜಿಲ್ಲೆಯಲ್ಲಿ ರಚಿಸಿರುವ ವಿವಿಧ ವಿಷಯ ತಜ್ಞತೆ ಹೊಂದಿರುವ 10 ವೈದ್ಯರು ಈ ಆ್ಯಪ್‌ ಕಾಣಿಸುವ ರೋಗಿಯ ಬೆಳವಣಿಗೆಗಳನ್ನು ಅವಲೋಕಿಸಲಿದ್ದಾರೆ.

ಅಲ್ಲದೇ ರಾಜ್ಯಮಟ್ಟದ ತಜ್ಞ ವೈದ್ಯರೊಂದಿಗೆ ಚರ್ಚೆ ನಡೆಸಲು ಈ ಆ್ಯಪ್‌ ನೆರವಾಗಲಿದೆ ಎಂದು ಆ್ಯಪ್‌ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಸದರಿ ಆ್ಯಪ್‌ಗೆ ಇನ್ನೂ ಯಾವುದೇ ಹೆಸರು ನಾಮಕರಣ ಮಾಡಿಲ್ಲ ಎಂದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.