ವೀಕೆಂಡ್‌ ಲಾಕ್‌ಡೌನ್‌ ಸಂಪೂರ್ಣ ಯಶಸ್ವಿ

ನಿರ್ಬಂಧ ಮೀರಿ ರಸ್ತೆಗೆ ಬಂದವರಿಗೆ ಬಿತ್ತು ಲಾಠಿ ಏಟು|ಎಲ್ಲೆಡೆ ಪೊಲೀಸ್‌ ಕಾವಲು-ಬಿಕೋ ಎಂದ ಬೀದಿ

Team Udayavani, Jul 6, 2020, 11:51 AM IST

06-July-05

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಜಯಪುರ: ಭಾನುವಾರದ ಲಾಕ್‌ಡೌನ್‌ಗೆ ಜಿಲ್ಲೆಯಲ್ಲಿ ಸೂಕ್ತ ಸ್ಪಂದನೆ ವ್ಯಕ್ತವಾಗಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬೆಳಗ್ಗೆ ವಿವಿಧ ಮಾರ್ಗಗಳಿಂದ ಜಿಲ್ಲೆಯ ನಗರ-ಪಟ್ಟಣ ಪ್ರದೇಶಕ್ಕೆ ಆಗಮಿಸಿದ ಜನರು ತಮ್ಮೂರು ಸೇರಲು ಪರದಾಡಿದರು.

ಜಿಲ್ಲೆಯಲ್ಲಿ ಬಹುತೇಕ ಎಲ್ಲೆಡೆ ವ್ಯಾಪಾರ ವಹಿವಾಟು ಬಂದ್‌ ಆಗಿತ್ತು. ಬಸ್‌ ಸಂಚಾರ, ನಗರ ಸಾರಿಗೆ ಸೇರಿದಂತೆ ಎಲ್ಲ ರೀತಿಯ ಸಾರಿಗೆ ಸಂಪೂರ್ಣ ಇಲ್ಲದಂತಾಗಿತ್ತು. ಜನ-ವಾಹನ ಓಡಾಟ ಇಲ್ಲದೇ ರಸ್ತೆಗಳು ನಿರ್ಜನವಾಗಿದ್ದವು. ಜಿಲ್ಲೆಯ ಎಲ್ಲೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ರಸ್ತೆಗಳಲ್ಲಿ ಬ್ಯಾರಿಕೇಡ್‌ ಹಾಕಿ ಸರ್ಪಗಾವಲು ನಿರ್ಮಿಸಿದ್ದರು. ನಾಗರಿಕ ಪೊಲೀಸ್‌ ಸೇವೆಯ ಜೊತೆಗೆ ವಿವಿಧ ಮೀಸಲು ಪಡೆಯವರು ಅಲ್ಲಲ್ಲಿ ಬೀಡು ಬಿಟ್ಟಿದ್ದರು. ನಿರ್ಬಂಧ ಮೀರಿ ಅನಗತ್ಯವಾಗಿ ರಸ್ತೆಗೆ ಬಂದವರಿಗೆ ಲಾಠಿ ರುಚಿ ತೋರಿಸಿದ್ದೂ ಕಂಡುಬಂತು.

ಇನ್ನು ಲಾಕ್‌ಡೌನ್‌ ಮಾಹಿತಿ ಇದ್ದರೂ ಬೆಳಗ್ಗೆ ಊರು ಸೇರುವ ವಿಶ್ವಾಸದಲ್ಲಿ ಬೆಂಗಳೂರು ಸೇರಿದಂತೆ ಇತರೆ ಪ್ರದೇಶಗಳಿಂದ ಬಸ್‌ ಗಳಲ್ಲಿ ನಗರಕ್ಕೆ ಬಂದಿಳಿದ ಪ್ರಯಾಣಿಕರಿಗೆ ಭಾನುವಾರದ ಲಾಕ್‌ ಡೌನ್‌ ಶಾಕ್‌ ನೀಡಿತ್ತು. ನಗರ ಸೇರಿದಂತೆ ಎಲ್ಲ ಬಸ್‌ ನಿಲ್ದಾಗಳಲ್ಲಿ ಬಸ್‌ ಸಂಚಾರ ಇಲ್ಲದ ಕಾರಣ ಜಿಲ್ಲೆಗೆ ಬಂದವರು ತಮ್ಮ ಊರು ಸೇರಲು ಪರದಾಟ ನಡೆಸಿದರು. ಕದ್ದುಮುಚ್ಚಿ ಕಳ್ಳ ಮಾರ್ಗಗಳಲ್ಲಿ ಸಂಚಾರ ಆರಂಭಿಸಿದ್ದ ಆಟೋ ಚಾಲಕರು ಇಂಥ ಅಸಹಾಯಕ ಜನರಿಗೆ ತಮ್ಮ ಊರು ಸೇರಿಸಲು 2500-3000 ರೂ. ಬೇಡಿಕೆ ಇಟ್ಟ ಕಾರಣ ಪ್ರಯಾಣಿಕರು ಕಂಗಾಲಾಗಿ ಕುಳಿತಿದ್ದರು.

ನಗರದ ಮಹಾತ್ಮಾ ಗಾಂ ಧೀಜಿ ವೃತ್ತ, ಕಿತ್ತೂರ ಚನ್ನಮ್ಮ ಮಾರುಕಟ್ಟೆ, ನೆಹರು ಮಾರುಕಟ್ಟೆ ಸೇರಿದಂತೆ ಎಲ್ಲ ವಾಣಿಜ್ಯ ಸಂಕೀರ್ಣಗಳು ಶನಿವಾರ ಸಂಜೆ ಹಾಕಿದ ಬಾಗಿಲನ್ನು ತೆರೆಯಲಿಲ್ಲ. ಲಾಲ ಬಹಾದ್ದೂರ ಶಾಸ್ತ್ರಿ ಮಾರುಕಟ್ಟೆ ಸ್ವಯಂ ಪ್ರೇರಿತ ಬಂದ್‌ ಮಾಡಿದ್ದರೆ, ಎಲ್ಲ ಹೋಟೆಲ್‌, ಬಟ್ಟೆ ಅಂಗಡಿಗಳು, ಚಿನ್ನದ ವ್ಯಾಪಾರಿಗಳು ಸೇರಿದಂತೆ ಎಲ್ಲ ವಹಿವಾಟು ಸಂಪೂರ್ಣ ಬಂದ್‌ ಆಗಿದ್ದವು. ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಅಂಗಡಿ, ಪೆಟ್ರೋಲ್‌ ಬಂಕ್‌, ಕಿರಾಣಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದರೂ ಜನರ ಕೊರತೆ ಎದುರಿಸುವಂತಾಯಿತು.

ಟಾಪ್ ನ್ಯೂಸ್

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

15folk

ಜಾನಪದ ಶೈಲಿಯಲಿ ಒಡ್ಡೋಲಗದ ಆಮಂತ್ರಣ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

6dharmasthala

ಧರ್ಮಸ್ಥಳದ ಧರ್ಮಾಧಿಕಾರಿ ಕಾರ್ಯ ಮಾದರಿ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.