ಮಹಿಳೆಯರು ಸದಾ ಸಬಲೆಯರು

ಮಹಿಳೆಯರ ಸಾಧನೆಗೆ ಪುರುಷರ ಪ್ರೋತ್ಸಾಹ ಸ್ಮರಣಾರ್ಹಹೋರಾಟದಿಂದ ಮಹಿಳೆಗೆ ದಕ್ಕಿವೆ ಅವಕಾಶ

Team Udayavani, Mar 9, 2020, 5:20 PM IST

9-March-24

ವಿಜಯಪುರ: ಪ್ರಸ್ತುತ ಸಂದರ್ಭದಲ್ಲಿ ಪ್ರತಿಯೊಂದು ಸ್ಥರದಲ್ಲಿ ಮಹಿಳೆ ಮುನ್ನಡೆ ಸಾಧಿಸಿದ್ದಾಳೆ. ಮಹಿಳೆಯ ಈ ಸಾಧನೆ ಹಿಂದೆ ಆಯಾ ಕುಟುಂಬಗಳ ಪುರುಷರ ಸಹಕಾರವೂ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಪಂ ಕೃಷಿ-ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರತಿಭಾ ಪಾಟೀಲ ಅಭಿಪ್ರಾಯಪಟ್ಟರು.

ಹಿಟ್ನಳ್ಳಿ ಕೃಷಿ ಫಾರ್ಮ್ನಲ್ಲಿ ವಿಜಯಪುರ ಕೃಷಿ ವಿಜ್ಞಾನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರಿಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ಈಗಾಗಲೇ ಜಗತ್ತಿಗೆ ತೋರಿಸಿಕೊಟ್ಟಿದ್ದಾಳೆ. ಈ ಹಿಂದೆ ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ ಎಂದು ಭಾವಿಸುತ್ತಿದ್ದ ಕಾಲವಿತ್ತು. ವರದಕ್ಷಿಣೆ ಪಿಡುಗು ಈ ರೀತಿ ಮಾತಿಗೆ ಕಾರಣವಾಗಿತ್ತು. ಪರಿಣಾಮ ವಿಜ್ಞಾನ ಬೆಳೆದಂತೆ ಲಿಂಗಪತ್ತೆ, ಹೆಣ್ಣು ಭ್ರೂಣ ಹತ್ಯೆ, ಲಿಂಗ ತಾರತಮ್ಯ ಇತ್ಯಾದಿ ಸಮಸ್ಯೆಗೆ ಕಾರಣವಾಯಿತು. ಆದರೆ ಬದಲಾಗುತ್ತಿರುವ ಸನ್ನಿವೇಶದಲ್ಲಿ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ದೀರ್ಘ‌ ಕಾಲದಿಂದ ನಿರಂತರ ಹೋರಾಟದ ಫಲವಾಗಿ ಇಂದಿನ ಮಹಿಳೆಗೆ ಹಲವು ಅವಕಾಶಗಳು ದಕ್ಕಿವೆ ಎಂದರು.

ಭಾರತೀಯರ ಮಟ್ಟಿಗೆ ಮಹಿಳೆಯರಿಗೆ ಸಂವಿಧಾನ ಬದ್ಧವಾದ ವಿಶೇಷ ಮೀಸಲಾತಿ ಸಿಕ್ಕಿದ್ದು, ಎಲ್ಲ ರಂಗಗಳಲ್ಲಿ ಮಹಿಳೆ ತನ್ನಲ್ಲಿರುವ ಪ್ರತಿಭೆ ಪ್ರದರ್ಶಿಸಲು ಸಹಕಾರಿ ಆಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕವಾಗಿ ಬಲಿಷ್ಟತೆ ಪಡೆಯುವಲ್ಲಿ ಸಹಕಾರಿ ಆಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ| ಪ್ರೇಮಾ ಪಾಟೀಲ ಮಾತನಾಡಿ, 1977ರಲ್ಲಿ ವಿಶ್ವಾದ್ಯಂತ ಮಾ. 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲು ನಿರ್ಧರಿಸಲಾಯಿತು. ಮಹಿಳೆಯರನ್ನು ಎಲ್ಲ ಕ್ಷೇತ್ರಗಳಲ್ಲೂ ಮೇಲೆತ್ತಬೇಕು. ಪುರುಷರಷ್ಟೇ ಸಮಾನ ಅವಕಾಶ ನೀಡಿ, ಮಹಿಳೆ ಸಾಧನೆಯನ್ನೂ ಸಮಾಜ ಗುರುತಿಸಬೇಕು ಎಂಬ ಕಾರಣಕ್ಕೆ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಗುತ್ತದೆ. ಈ ಆಚರಣೆ ಹಿಂದೆ ದೊಡ್ಡ ಹೋರಾಟವೇ ಇದೆ ಎಂದು ವಿವರಿಸಿದರು.

ಜಿಪಂ ಸದಸ್ಯೆ ಕವಿತಾ ರಾಠೊಡ ಮಾತನಾಡಿ, ಮಹಿಳೆ ತನಗೆ ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ದೇಶದ ಪ್ರಧಾನಿ, ರಾಷ್ಟ್ರಪತಿ, ರಕ್ಷಣಾಮಂತ್ರಿ ಹಾಗೂ ಹಣಕಾಸಿನ ಮಂತ್ರಿಯಂಥ ಉನ್ನತ ಹುದ್ದೆಗಳ ಮೂಲಕ ದೇಶದ ಆಡಳಿತ ಚುಕ್ಕಾಣಿ ಹಿಡಿದು, ಯಶಸ್ವಿಯಾಗಿ ನಡೆಸಿದ್ದಾರೆ. ಮತ್ತೂಂದೆಡೆ ಮಹಿಳೆಯರು ಎಲ್ಲ ರಂಗದಲ್ಲೂ ಸಾಧನೆ ಮಾಡುತ್ತಿದ್ದು ಪುರುಷರ ಪ್ರೋತ್ಸಾಹ ಕೂಡ ಸ್ಮರಣಾರ್ಹ ಎಂದರು. ಅಧ್ಯಕ್ಷತೆ ವಹಿಸಿದ್ದ ಸಹ ವಿಸ್ತರಣಾ ನಿರ್ದೇಶಕ ಡಾ| ಆರ್‌.ಬಿ. ಬೆಳ್ಳಿ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಮಹಿಳೆ ಎಲ್ಲ ರಂಗಳಗಳಂತೆ ಕೃಷಿ ರಂಗದಲ್ಲೂ ಅಪಾರ ಸಾಧನೆ ಮಾಡಿದ್ದಾಳೆ. ಕೃಷಿಯಲ್ಲಿ ಭೂಮಿ ಹದಗೊಳಿಸುವದರಿಂದ ಹಿಡಿದು, ಉಳುವುದು, ಬಿತ್ತುವ, ಕಳೆ ತೆಗೆಯುವ, ರಾಶಿ ಮಾಡುವ ಹಂತದವರೆಗೆ ಕೃಷಿಯಲ್ಲಿ ಪುರುಷರಿಗಿಂತ ಹೆಚ್ಚಿನ ಪರಿಶ್ರಮದ ಕೆಲಸ ಮಾಡುವುದೇ ಮಹಿಳೆ. ಇದನ್ನು ಗಮನಿಸಿ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ, ಯುವ ಕೃಷಿ ಮಹಿಳಾ ಪ್ರಶಸ್ತಿ ನೀಡಿ ಗೌರವಿಸಲಾತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ವಿಜೇತ ತಾಜಪುರ ಗ್ರಾಮದ ಹಸೀನಾ ಬೇಗಂ ಗೌಸಫೀರ್‌ ಮೊಕಾಶಿ, ಯುವ ಕೃಷಿ ಮಹಿಳೆ ಭಾರತಿ ಶಿವಾನಂದ ವಿಜಯಪುರ, ಬಸವನಬಾಗೇವಾಡಿ ತಾಲೂಕಿನ ಯುವ ಕೃಷಿ ಮಹಿಳೆ ಲಕ್ಷ್ಮೀ ಅರವಿಂದ ಪಾಟೀಲ ಅವರನ್ನು  ಸನ್ಮಾನಿಸಲಾಯಿತು.

ಕೃಷಿ ಅ ಧಿಕಾರಿ ಬಸವರಾಜ ಬಿರಾದಾರ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶ್ರೀದೇವಿ ಪೂಜಾರಿ, ಅನಿತಾ ಬಿರಾದಾರ, ಕೃಷಿ ವಿಜ್ಞಾನ ಕೇಂದ್ರದ ಡಾ| ಬಿ.ಸಿ.ಕೊಲ್ಹಾರ, ಮಲ್ಲಪ್ಪ, ಶ್ರೀಶೈಲ್‌ ರಾಠೊಡ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಎಸ್‌.ಎ. ಬಿರಾದಾರ ಸ್ವಾಗತಿಸಿದರು. ಡಾ| ಸಂಗೀತಾ ಜಾಧವ ನಿರೂಪಿಸಿದರು. ಡಾ| ಶಿವಲಿಂಗಪ್ಪ ಹೊಟಕರ ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.