ವಿಜಯಪುರ: 8 ತಿಂಗಳ ಸಂಬಳಕ್ಕೆ ಆಗ್ರಹಿಸಿ ಟೋಲ್‍ನಾಕಾ ಸಿಬಂದಿ ಪ್ರತಿಭಟನೆ

Team Udayavani, Dec 9, 2022, 9:09 PM IST

1-sadadada

ವಿಜಯಪುರ: ನಗರದ ಬೆಂಗಳೂರು ರಸ್ತೆಯ ಹೊರವಲಯದಲ್ಲಿರುವ ಟೋಲ್‍ನಾಕಾ ಸಿಬಂದಿ 8 ತಿಂಗಳಿಂದ ಪಾವತಿಯಾಗದ ವೇತನ ನೀಡಲು ಆಗ್ರಹಿಸಿ ಶುಕ್ರವಾರ ಟೋಲ್ ನಾಕಾ ಆಡಳಿತ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಸದ್ಭವ ಗ್ರೂಪ್ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಕಾಮಗಾರಿ ಗುತ್ತಿಗೆ ಪಡೆದಿದ್ದು, ದೇಶದಾದ್ಯಂತ ಸದರಿ ಸಂಸ್ಥೆಯಲ್ಲಿ ಸಾವಿರಾರು ಕಾರ್ಮಿಕರು ಟೋಲ್‍ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಸದರಿ ಸಂಸ್ಥೆ ತನ್ನ ಸಿಬದಿಗೆ ಕಳೆದ 8 ತಿಂಗಳಿಂದ ವೇತನ ನೀಡಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಟೋಲ್ ನಾಕಾ ನೌಕರ ಮನೋಜ, ವಿಜಯಪುರ ನಗರದ ಬೆಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ-50 ರಲ್ಲಿರುವ ಟೋಲ್‍ಗೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ 8 ತಿಂಗಳಿಂದ ವೇತನ ಪಾವತಿಸಿಲ್ಲ. ಗುತ್ತಿಗೆ ಆಧಾರದ ಮೇಲೆ ಸದ್ಭವ ಗ್ರೂಪ್ ಆಡಳಿತ ವ್ಯವಸ್ಥೆ ಕಾರ್ಮಿಕರಿಗೆ ವೇತನ ನೀಡದೇ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಸದ್ಯ ಈ ಟೋಲ್ ಗೆ ಸಂಬಂಧಿಸಿದಂತೆ 1500 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಳೆದ 8 ತಿಂಗಳಿಂದ ಸಂಸ್ಥೆಯ ಯಾವೊಬ್ಬ ಸಿಬ್ಬಂದಿಗೂ ವೇತನ ಪಾವತಿಯಾಗಿಲ್ಲ. ವೇತನ ಕೇಳಿದರೆ ಸದ್ಭವ ಗ್ರೂಪ್ ನವರು ಸರ್ಕಾರದಿಂದ ಇನ್ನೂ ಹಣ ಬಿಡುಗಡೆಯಾಗಿಲ್ಲ. ತಾವು ಸಹ ವೇತನ ಪಡೆದಿಲ್ಲ ಎನ್ನುವ ಮೂಲಕ ಸಬೂಬು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ನಾವು ದುಡಿಯುವ ಮಾಸಿಕ ವೇತನದಲ್ಲೇ ನಮ್ಮ ಕುಟುಂಬಳ ನಿರ್ವಹಣೆ ಆಧಾರವಾಗಿದ್ದು, ವೇತನ ಬಿಡುಗಡೆ ಆಗದ ಕಾರಣ ನಮ್ಮ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕೂಡಲೇ ವೇತನ ಬಿಡುಗಡೆ ಮಾಡಿ ನಮ್ಮನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಿ ಎಂದು ಆಗ್ರಹಿಸಿದರು.

ಒಂದೊಮ್ಮೆ ನಮ್ಮ ವೇತನ ವಿತರಣೆ ಇನ್ನೂ ವಿಳಂಬವಾದಲ್ಲಿ ಟೋಲ್ ನಾಕಾ ಆಡಳಿತ ಮಂಡಳಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.