ವಿವೇಕಾನಂದರ ಆದರ್ಶ ಯುವಜನರಿಗೆ ಸ್ಫೂರ್ತಿ; ಎಚ್.ಕೆ. ಉಮೇಶ
ಯುವಶಕ್ತಿ ಮೇಲೆ ಅಪಾರವಾದ ನಂಬಿಕೆ ಇತ್ತು. ಯುವಶಕ್ತಿಗಿಂತ ಮಿಗಿಲಾದುದ್ದು ಯಾವುದು ಇಲ್ಲ.
Team Udayavani, Jan 16, 2021, 4:38 PM IST
ಸಿಂದಗಿ: ಸ್ವಾಮಿ ವಿವೇಕಾನಂದರ ಹೆಸರು ಕೇಳಿದರೆ ಮೈ ರೋಮಾಂಚನ ಗೊಳ್ಳುತ್ತದೆ. ಕಣಕಣದಲ್ಲೂ ದೇಶ ಭಕ್ತಿಯನ್ನು ತುಂಬಿಕೊಂಡಿದ್ದ ಮಹಾನ್ ಚೇತನ ಭಾರತದ ವೈಶಿಷ್ಟ್ಯವನ್ನು ವಿಶ್ವಕ್ಕೆ ಪರಿಚಯಿಸಿದವರು. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ ಎಂದು ನ್ಯಾಯಾಧೀಶ ಎಚ್.ಕೆ. ಉಮೇಶ ಹೇಳಿದರು.
ಶುಕ್ರವಾರ ಪಟ್ಟಣದ ತಾಲೂಕು ಶಿಕ್ಷಣ ಪ್ರಸರಕ ಮಂಡಳಿಯ ಸಿ.ಎಂ. ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಭಾಭವನದಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿ, ಮಹಾವಿದ್ಯಾಲಯದ ಐಕ್ಯೂಎಎಸ್, ಎನ್‌ಸಿಸಿ, ಎನ್ನೆಸ್ಸೆಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯಯುವ ದಿನ, ಭಾರತ ಸಂವಿಧಾನ ದಿನ ಹಾಗೂ ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿವೇಕಾನಂದರಿಗೆ ಯುವಶಕ್ತಿ ಮೇಲೆ ಅಪಾರವಾದ ನಂಬಿಕೆ ಇತ್ತು. ಯುವಶಕ್ತಿಗಿಂತ ಮಿಗಿಲಾದುದ್ದು ಯಾವುದು ಇಲ್ಲ. ನನಗೆ 100 ಜನ ಗಟ್ಟಿ ಮುಟ್ಟಾದ ಯುವಕರನ್ನು ಕೊಡಿ, ನಾವು ನವಭಾರತವನ್ನು ನಿರ್ಮಾಣ ಮಾಡುತ್ತೇನೆ ಎನ್ನುತ್ತಿದ್ದರು ಎಂದು ಹೇಳಿದರು. ಹೆಚ್ಚುವರಿ ನ್ಯಾಯಾಧೀಶ ರಾಮಲಿಂಗಪ್ಪ ಮಾತನಾಡಿ, ಸ್ವಾಮಿ ವಿವೇಕಾನಂದರ ತತ್ವಜ್ಞಾನ ಮತ್ತು ಅವರು ಬದುಕಿ ಬೋಧಿಸಿದ ಆದರ್ಶಗಳು ಭಾರತದ ಯುವಜನತೆಯ ದೊಡ್ಡ ಸಂಪನ್ಮೂಲ ಹಾಗೂ
ಸ್ಫೂರ್ತಿ ಮೂಲವಾಗಿವೆ.
ಅವುಗಳನ್ನು ಯುವಕರು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಧ್ಯಾಪಕ ಎಂ.ಎಸ್. ಹೊಸಮನಿ, ಐಕ್ಯೂಎಎಸ್ ಸಂಯೋಜಕ ಪ್ರೊ| ಜಿ.ಜಿ. ಕಾಂಬಳೆ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಬಿ. ದೊಡಮನಿ, ಸಹಾಯಕ ಸರಕಾರಿ ಅಭಿಯೋಜಕ ಆನಂದ ರಾಠೊಡ, ಸಹಾಯಕ ಸರಕಾರಿ ಅಭಿಯೋಜಕ ವಿ.ಬಿ. ಪಾಟೀಲ ವೇದಿಕೆಯಲ್ಲಿದ್ದರು.
ಸಂಸ್ಥೆ ನಿರ್ದೇಶಕ ಶಿವಪ್ಪಗೌಡ ಬಿರಾದಾರ, ಪ್ರಾಧ್ಯಾಪಕರಾದ ಬಿ.ಜಿ. ಮಠ, ಬಿ.ಡಿ.ಮಾಸ್ತಿ, ಪಿ.ಆರ್. ಸೌಂಶಿಕರ, ಎಸ್.ಎಂ. ಬಿರಾದಾರ, ಎಸ್.ಎಸ್. ಪಾಟೀಲ,
ಡಾ| ಬಿ.ಜಿ. ಪಾಟೀಲ, ಎಸ್.ಕೆ. ಹೂಗಾರ, ಗ್ರಂಥಪಾಲಕ ಆರ್.ಪಿ. ಬಿರಾದಾರ, ವಿ.ಬಿ. ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು. ಪ್ರೊ| ಎಸ್.ಎಸ್. ಪಾಟೀಲ ಸ್ವಾಗತಿಸಿದರು. ಪ್ರೊ| ಎಸ್.ಎ. ಕೆರುಟಗಿ ನಿರೂಪಿಸಿದರು. ಪ್ರೊ| ಜಿ.ಜಿ. ಕಾಂಬಳೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಪೊಲೀಸ್ ಠಾಣೆ ಬಳಿ ತುಕ್ಕು ಹಿಡಿಯುತ್ತಿವೆ ವಾಹನಗಳು
ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ
ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿ : ಬಂಟ್ವಾಳ ಪುರಸಭೆಯಿಂದ ಮಾರಾಟಕ್ಕೆ ಸಿದ್ಧತೆ
ಬೈರಿಕಟ್ಟೆ-ಕಲ್ಲಜೇರ-ನೆಕ್ಕಿತ್ತಪುಣಿ ರಸ್ತೆ ವಿಸ್ತರಣೆಗೆ ಆಗ್ರಹ
“ರಥ ಚಲಿಸುವ ಧರ್ಮ ಸಭಾ ಮಂಟಪ’ : ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ