ಮಾನವ ಸರಪಳಿ ನಿರ್ಮಿಸಿ ಮತದಾನ ಜಾಗೃತಿ

Team Udayavani, Mar 29, 2019, 4:31 PM IST

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರ ತಪ್ಪದೇ ಮತದಾನ ಮಾಡುವಂತೆ ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಮನವಿ ಮಾಡಿದರು. ನಗರದ ಮಹತ್ಮಾ ಗಾಂಧೀಜಿ  ವೃತ್ತದಲ್ಲಿ ಎಸ್‌.ಎಸ್‌. ಕಾಲೇಜ್‌ನ ವಿದ್ಯಾರ್ಥಿಗಳು, ದರಬಾರ್‌ ಪದವಿ ಕಾಲೇಜ್‌, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್‌ ಹಾಗೂ ಅಂಜುಮನ್‌ ಕಾಲೇಜ್‌ ವಿದ್ಯಾರ್ಥಿಗಳು ಮತದಾನ ಜಾಗೃತಿ ಅಂಗವಾಗಿ ರೂಪಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ
ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿ, ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ತಕ್ಷಣ ಖಾತ್ರಿ ಪಡಿಸಿಕೊಳ್ಳಬೇಕು. ತಮ್ಮ ಕುಟುಂಬ, ನೆರೆ-ಹೊರೆಯವರಲ್ಲಿಯೂ ಈ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಅಂತರ್ಜಾಲ, ಆಯಾ ತಾಲೂಕು ತಹಶೀಲ್ದಾರ್‌ ಕಚೇರಿಗಳಲ್ಲಿ, ಬಿಎಲ್‌ಒಗಳಿಗೆ ಸಂಪರ್ಕಿಸಿ ಹಾಗೂ 1950 ಸಹಾಯವಾಣಿಗೆ ಸಂಪರ್ಕಿಸಿಯೂ ಸಹ ತಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಮುಂಬರುವ ಚುನಾವಣೆಯಲ್ಲಿ ಶೇಕಡಾ ನೂರರಷ್ಟು ಮತದಾನಕ್ಕೆ ನೆರವಾಗುವಂತೆ ಕರೆ ನೀಡಿದರು. ಮಹಾನಗರ ಪಾಲಿಕೆ ಆಯುಕ್ತ ಔದ್ರಾಮ, ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಡಯಟ್‌ ಉಪನ್ಯಾಸಕ ಕೊಣ್ಣೂರ, ಎಸ್‌.ಜಿ. ಲೋಣಿ, ಸುಲೇಮಾನ ನದಾಫ್‌, ಮೋಹನಕುಮಾರಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ