ಜಮೀನಿಗೆ ನೀರು, ಕೆರೆ ಭರ್ತಿಗೆ ಒತ್ತಾಯ


Team Udayavani, Nov 10, 2018, 12:08 PM IST

vij-2.jpg

ಮುದ್ದೇಬಿಹಾಳ: ನೀರಾವರಿ ಯೋಜನೆಗಳಿಗೆ ಲಕ್ಷಾಂತರ ಎಕರೆ ಫಲತ್ತಾದ ಜಮಿನು ಕಳೆದುಕೊಂಡ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಸಾವಿರಾರು ರೈತರಿಗೆ ಈ ಸರ್ಕಾರ ಅನ್ಯಾಯ ಮಾಡಿದೆ. ಸಂತ್ರಸ್ತ ರೈತರ ಜಮೀನುಗಳಿಗೆ ಕನಿಷ್ಠ ಒಂದು ಬೆಳೆಗಾದರೂ ನೀರು ಹರಿಸದೆ ತಾರತಮ್ಯ ಅನುಸರಿಸಿದೆ. ನವೆಂಬರ್‌ 14ರಂದು ಕಾಲುವೆಯಲ್ಲಿ ನೀರು ಹರಿಸುವುದನ್ನು ಬಂದ್‌ ಮಾಡುವ ತೀರ್ಮಾನ ಕೈಬಿಟ್ಟು ಮಾರ್ಚ್‌ 31ರವರೆಗೂ ಆಲಮಟ್ಟಿ ಜಲಾಶಯ ವ್ಯಾಪ್ತಿಯ ಎಲ್ಲ ಜಮೀನುಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನ ಪ್ರಕಟಿಸಬೇಕು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಒತ್ತಾಯಿಸಿದ್ದಾರೆ.

ಮುದ್ದೇಬಿಹಾಳ ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾಲುವೆಗಳಿಗೆ ನೀರು ಹರಿಸಬೇಕು ಮತ್ತು ಎಲ್ಲ ಕೆರೆ ತುಂಬಿಸಬೇಕು ಎಂದು ಆಗ್ರಹಸಿ ರೈತರೊಂದಿಗೆ ಮುದ್ದೇಬಿಹಾಳದಿಂದ ಆಲಮಟ್ಟಿವರೆಗೆ ಪಾದಯಾತ್ರೆಗೆ ಶುಕ್ರವಾರ ಚಾಲನೆ ನೀಡಿ, ನಂತರ ಬಸವೇಶ್ವರ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕೃಷ್ಣಾ ಕೊಳ್ಳದ ನೀರಾವರಿ ಯೋಜನೆಗಳನ್ನು ಈ ಸರ್ಕಾರ ಮರೆತಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಉಕ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಬೇಕು. ಈ ಪಾದಯಾತ್ರೆ ಸರ್ಕಾರಕ್ಕೆ ಒಂದು ಎಚ್ಚರಿಕೆ ಗಂಟೆಯಾಗಿದೆ. ಒಂದು ವೇಳೆ ಮೊದಲಿನ ನಿರ್ಲಕ್ಷ್ಯ ಮುಂದುವರಿದಲ್ಲಿ ಇಡಿ ಉತ್ತರ ಕರ್ನಾಟಕದ ರೈತರನ್ನು ಒಟ್ಟುಗೂಡಿಸಿ ಬೆಳಗಾವಿ ಅಧಿವೇಶನಕ್ಕೂ ಮುನ್ನ ಬೃಹತ್‌ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈಗಾಗಲೇ ಪೂರ್ಣಗೊಂಡಿರುವ ಕಾಲುವೆ ಜಾಲಗಳ ಮೂಲಕ ನೀರು ಹರಿಸಬೇಕು ಮತ್ತು ಎಲ್ಲ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು. ಶನಿವಾರ ಆಲಮಟ್ಟಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಸಚಿವ ಶಿವಾನಂದ ಪಾಟೀಲ ಉಸ್ತುವಾರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಬೇಡಿಕೆಗಳ ಬಗ್ಗೆ ತೀರ್ಮಾನ ಪ್ರಕಟಿಸಬೇಕು. ಬೆಳಗಾವಿ ಅಧಿವೇಶನ ಪ್ರಾರಂಭಗೊಳ್ಳುವುದರ ಒಳಗಾಗಿ ಕೃಷ್ಣಾ ಕೊಳ್ಳದ ನೀರಾವರಿ ಯೋಜನೆ ಪೂರ್ಣಗೊಳಿಸುವ ಬದ್ಧತೆ ಪ್ರದರ್ಶಿಸಬೇಕು. ಇಲ್ಲವಾದಲ್ಲಿ ಈ ಜಿಲ್ಲೆಯ 2-3 ಸಾವಿರ ರೈತರು ನನ್ನ ಜೊತೆ ನಡೆಯಲು ಗಟ್ಟಿಗರಾದಲ್ಲಿ ಇಡಿ ಉತ್ತರ
ಕರ್ನಾಟಕದ ಅಭಿವೃದ್ಧಿ ವಿಷಯ ಮುಂದಿಟ್ಟುಕೊಂಡು ಮತ್ತೋಮ್ಮೆ ಹೋರಾಟಕ್ಕೆ ಧುಮುಕುತ್ತೇನೆ ಎಂದು ಶಾಸಕರು ಘೋಷಿಸಿದರು.

ಆಲಮಟ್ಟಿ ಡ್ಯಾಂನಲ್ಲಿ 123 ಟಿಎಂಸಿ, ನಾರಾಯಣಪುರದಲ್ಲಿ 30 ಟಿಎಂಸಿ ನೀರು ಇದೆ. 20 ವರ್ಷಗಳಲ್ಲಿ ನಮ್ಮ ತಾಲೂಕಿಗೆ ಹರಿಬಿಟ್ಟದ್ದು ಕೇವಲ 3-4 ಟಿಎಂಸಿ ಮಾತ್ರ. ಇದು ನಮ್ಮ ದುರಂತ. ನಮ್ಮ ರೈತರ ದುರ್ದೈವದ ಸಂಗತಿಯಾಗಿದೆ. ಆಲಮಟ್ಟಿಯಿಂದ ನಾರಾಯಣಪುರದವರೆಗೆ ಅತಿ ಹೆಚ್ಚು ಭೂಮಿ ಕಳಕೊಂಡವರು ಈ ತಾಲೂಕಿನ ಜನರು. ಈ ಜನರಿಗೆ ಹೊಳೆದಂಡೆಯಲ್ಲಿದ್ದರೂ ಕುಡಯುವ ನೀರು ಇಲ್ಲದ ಧಾರುಣ ಸ್ಥಿತಿ ಇದೆ. ಈ ಸ್ಥಿತಿ ಹೋಗಲಾಡಿಸಲು ಸರ್ಕಾರ ಮುಂದಾಗಬೇಕು. ಈ ಭಾಗದ ಸಂಪೂರ್ಣ ನೀರಾವರಿಗೆ ಆದ್ಯತೆ ಮೇರೆಗೆ ನೀರು ಕೊಡಬೇಕು. 

ಈಗಿನ ಹೋರಾಟ ಆರಂಭ ಮಾತ್ರ ಎಂದರು. ಸಾನ್ನಿಧ್ಯ ವಹಿಸಿದ್ದ ಯರಝರಿ ಯಲ್ಲಾಲಿಂಗ ಮಠದ ಮಲ್ಲಾರಲಿಂಗ ಮಹಾಸ್ವಾಮಿಗಳು, ಬಿಜೆಪಿ ಧುರೀಣ ಶಿವಶಂಕರಗೌಡ ಹಿರೇಗೌಡರ ಮಾತನಾಡಿದರು. ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಸವರಾಜ ಕುಂಬಾರ, ಜಿಪಂ  ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಪುರಸಭೆ ಸದಸ್ಯರಾದ ಚನ್ನಪ್ಪ ಕಂಠಿ ಮತ್ತು ಬಸವರಾಜ ಮುರಾಳ, ಪ್ರಮುಖರಾದ ಹೇಮರಡ್ಡಿ ಮೇಟಿ, ಮಲಕೇಂದ್ರಗೌಡ ಪಾಟೀಲ, ಬಿ.ಪಿ. ಕುಲಕರ್ಣಿ, ಪ್ರಭು ಕಡಿ, ಬಾಬುಲಾಲ್‌ ಓಸ್ವಾಲ್‌, ಬಸವರಾಜ ನಂದಿಕೇಶ್ವರಮಠ, ರಾಜಶೇಖರ ಹೊಳಿ, ರಾಜು ಬಳ್ಳೊಳ್ಳಿ, ಬಸವರಾಜ ಗುಳಬಾಳ, ವಾಣಿ ಗೌಡರ, ಮನೋಹರ ತುಪ್ಪದ, ಬಿ.ಜಿ. ಜಗ್ಗಲ್‌ ಇದ್ದರು. 

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.