ಕಾಲುವೆಗೆ ನೀರು ಹರಿಸಲು ಆಗ್ರಹ


Team Udayavani, Aug 3, 2017, 9:56 AM IST

03-BJP-4.jpg

ಆಲಮಟ್ಟಿ: ಮುಳವಾಡ ಪೂರ್ವ ಮತ್ತು ಪಶ್ಚಿಮ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಲು ಮಸೂತಿ ಜಾಕ್‌ವೆಲ್‌ನಿಂದ ನೀರು ಹರಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರು ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು. 

ಕೃಷ್ಣಾ ಭಾಗ್ಯ ಜಲ ನಿಗಮದ ಮುಳವಾಡ ಏತ ನೀರಾವರಿ ಯೋಜನೆಯ ವಿಭಾಗ 1 ಮಟ್ಟಿಹಾಳ ಕಚೇರಿಗೆ ರೈತರೊಂದಿಗೆ ತೆರಳಿ ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಮಾತನಾಡಿ, ಪ್ರಸಕ್ತ ವರ್ಷದ ಬಿತ್ತನೆ ಸಮಯದಲ್ಲಿ ಸ್ವಲ್ಪ ಮಳೆಯಾಗಿದ್ದರಿಂದ ಮುಳುಗಡೆ ಪ್ರದೇಶದ ನೀರಾವರಿ ಕ್ಷೇತ್ರದ ರೈತರು ವಿವಿಧ ಬೆಳೆಗಳಾದ ಗೋವಿನ ಜೋಳ, ತೊಗರಿ, ಸಜ್ಜೆ, ಅಲಸಂದಿ  ಬೆಳೆಗಳನ್ನು ಬಿತ್ತಿದ್ದಾರೆ. ರೈತರ ಹಿತ ಕಾಪಾಡಲು ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು ಎಂದರು.

ರೈತರ ಜಮೀನಿಗೆ ನೀರೊದಗಿಸಲು ಹೆಚ್ಚಿನ ಪ್ರಮಾಣದಲ್ಲಿ ನೀರೆತ್ತುವ ಯಂತ್ರಗಳನ್ನು ಆರಂಭಿಸದಿದ್ದರೆ ಇದೇ ಆ. 5ರಿಂದ ಕಾರ್ಯ ನಿರ್ವಾಹಕ ಅಭಿಯಂತರ ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರಸ್ತುತ ನಿರೀಕ್ಷಿತ ಪ್ರಮಾಣದ ಮುಂಗಾರು ಮಳೆಯಾಗದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ನೀರು ಹರಿಸಲು ಪ್ರಸ್ತುತ ಇರುವ ಎರಡು ಪಂಪ್‌ಗ್ಳಿಂದ ಕಾಲುವೆಗಳಿಗೆ ನಿರೀಕ್ಷಿಸಿದಷ್ಟು ನೀರು ಪೂರೈಕೆಯಾಗುತ್ತಿಲ್ಲ. ಪ್ರಸಕ್ತ ವರ್ಷ ಆಲಮಟ್ಟಿ ಜಲಾಶಯ ಪೂರ್ಣ ಪ್ರಮಾಣದಲ್ಲಿ ತುಂಬಿದೆ. ಈ ಭಾಗದ ರೈತರ ಅನುಕೂಲಕ್ಕಾಗಿಯೇ ಈಗಾಗಲೆ ಮಸೂತಿ ಜಾಕ್‌ವೆಲ್‌ನಿಂದ ನೀರೆತ್ತಲು ನೂತನ ಯಂತ್ರಗಳನ್ನು ಅಳವಡಿಸಲಾಗಿದೆ. 

ಪ್ರಸ್ತುತ ರೈತರ ಬೇಡಿಕೆಗೆ ಅನುಗುಣವಾಗಿ ಒಂದೆರಡು ಪಂಪ್‌ಗ್ಳನ್ನು ಶೀಘ್ರದಲ್ಲೆ ಪ್ರಾರಂಭಿಸಿ ಮೂರನೇ ಹಂತದ ಮುಳವಾಡ ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ ಸಾಕಾಗುವಷ್ಟು ನೀರನ್ನು ಹರಿಸಬೇಕು. ಜಲಾಶಯಕ್ಕಾಗಿ ಮನೆ ಮಠ ಕಳೆದುಕೊಂಡ ಮುಳುಗಡೆ ಸಂತ್ರಸ್ತ ರೈತರಿಗೆ
ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು. ದುಂಡಪ್ಪ ಮನಗೂಳಿ, ಸಿದ್ದು ಕುಂಬಾರ, ಶಿವು ಪೂಜಾರಿ, ಹನುಮಂತ ಕುಂಬಾರ, ರಾಮಣ್ಣ ಕಮದಾರ, ಬಸಪ್ಪ ಬೆಲ್ಲದ ಸೇರಿದಂತೆ ನೂರಾರು ರೈತರು ಇದ್ದರು.

ಟಾಪ್ ನ್ಯೂಸ್

katapadi news

ಕಟಪಾಡಿ : ಏಣಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯ ನಿಧಿ ಕುಂಭ ಯೋಗನಾಳದಲ್ಲಿ ತೀರ್ಥೋದ್ಭವ!

siddaramaiah

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bengalore news

ಚೇತರಿಕೆಯತ್ತ ಪ್ರವಾಸೋದ್ಯಮ; ಆನಂದ್ ಸಿಂಗ್

shirva news

ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ

bangalore news

ಸುಧೀರ್ ಘಾಟೆ ಅವರ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muddebihala news

ಚನ್ನವೀರ ದೇವರು ಅವರಿಗೆ ಗೌರವ ಡಾಕ್ಟರೇಟ್

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

ವಿಜಯಪುರ: ನೀರು ಕೊಟ್ಟ ಶಾಸಕರಿಗೆ ಹಣ್ಣು ಕೊಟ್ಟ ರೈತ

incident held at vijayapura news

ಪತಿಯ ಹತ್ಯೆಗೆ 8 ಲಕ್ಷ ರೂ. ಸುಪಾರಿ ನೀಡಿದ ಪತ್ನಿ

23

ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ

21

ಶರಣರು, ಸಂತರು, ಮಹಾತ್ಮರ ನುಡಿಗಳಲ್ಲಿರಲಿ ವಿಶ್ವಾಸ: ಪಾಟೀಲ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

katapadi news

ಕಟಪಾಡಿ : ಏಣಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯ ನಿಧಿ ಕುಂಭ ಯೋಗನಾಳದಲ್ಲಿ ತೀರ್ಥೋದ್ಭವ!

siddaramaiah

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bengalore news

ಚೇತರಿಕೆಯತ್ತ ಪ್ರವಾಸೋದ್ಯಮ; ಆನಂದ್ ಸಿಂಗ್

1-22

ಜನತಾ ಬಜಾರ್‌ ಜಾಗದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಕೃಷಿ ವಿಭಾಗದ ಕಟ್ಟಡ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.