ಯಂತ್ರ ಬಳಸದೆ ಕೂಲಿಕಾರರಿಗೆ ಕೆಲಸ ನೀಡಿ


Team Udayavani, Jul 9, 2021, 8:55 PM IST

styuytryhhhhh

ಮುದ್ದೇಬಿಹಾಳ: ಮಹಾತ್ಮಾ ಗಾಂ ಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿ ಹೆಚ್ಚು ಕೆಲಸ ಸೃಷ್ಟಿಸಿ ಗುಳೆ ಹೋಗುವ ಕೃಷಿ ಕೂಲಿ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಲು ಗ್ರಾಪಂಗಳ ಪಿಡಿಒಗಳು ಆಡಳಿತ ಮಂಡಳಿ ಸಹಕಾರದೊಂದಿಗೆ ಯೋಜನೆ ರೂಪಿಸಬೇಕು ಎಂದು ತಾಪಂನ ನರೇಗಾ ಸಹಾಯಕ ನಿರ್ದೇಶಕ ಬಸವರಾಜ ತಾಳಿಕೋಟಿ ಸಲಹೆ ನೀಡಿದರು.

ಕೋಳೂರು ಗ್ರಾಮದ ಗ್ರಾಪಂ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ರೋಜಗಾರ ದಿವಸ್‌ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಗಾದಡಿ ನಡೆಯುವ ಕಾಮಗಾರಿಗಳಲ್ಲಿ ಯಂತ್ರಗಳ ಬಳಕೆಗೆ ಅವಕಾಶ ನೀಡದೆ ನೇರವಾಗಿ ಕೂಲಿಕಾರರಿಗೆ ಕೆಲಸ ನೀಡಬೇಕು. ಇದು ಆರ್ಥಿಕ ಪ್ರಗತಿಗೆ ಅಗತ್ಯವಾಗಿದೆ ಎಂದರು. ಈಗಾಗಲೇ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ, ಬದು ನಿರ್ಮಾಣ, ಕೃಷಿ ಹೊಂಡ ಸೇರಿ ಹಲವು ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕೂಲಿಕಾರರು ಸ್ವಯಂ ಪ್ರೇರಿತರಾಗಿ ದುಡಿಯಲು ಮುಂದೆ ಬರುತ್ತಿದ್ದಾರೆ. ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಯೋಜನೆ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು.

ಬಡ ಕುಟುಂಬಗಳಿಗೆ ಸ್ಥಳೀಯವಾಗಿ ಕೆಲಸ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ನರೇಗಾ ಅಡಿ ದುಡಿಯುವ ಕೂಲಿ ಕಾರ್ಮಿಕರಿಗೆ ಕುಟುಂಬಕ್ಕೆ ಪಡಿತರ ಚೀಟಿ ಎಷ್ಟು ಅಗತ್ಯವೊ ಹಾಗೇ ಉದ್ಯೋಗ ಚೀಟಿಯೂ ಅಗತ್ಯವಾಗಿರುತ್ತದೆ. ಪ್ರತಿ ಕುಟುಂಬವು ಕಡ್ಡಾಯವಾಗಿ ಜಾಬ್‌ ಕಾರ್ಡ್‌ ಪಡೆಯಬೇಕು. ದನದ ದೊಡ್ಡಿ, ಕುರಿದೊಡ್ಡಿ, ಬಚ್ಚಲು ಗುಂಡಿ, ಕೃಷಿ ಹೊಂಡ, ಬದು ನಿರ್ಮಾಣ ಕಾಮಗಾರಿಗಳನ್ನು ಮಾಡಿಕೊಂಡು ನಿಮ್ಮ ಆಸ್ತಿಗಳನ್ನು ಸೃಜನೆ ಮಾಡಿ ಎಂದರು. ನರೇಗಾ ತಾಲೂಕು ಐಇಸಿ ಸಂಯೋಜಕ ಪರಮೇಶ ಹೊಸಮನಿ ಮಾತನಾಡಿ, ಯೋಜನೆಯಡಿ ಪ್ರತಿ ಕುಟುಂಬಕ್ಕೆ 100 ದಿನ ಕೆಲಸ ಕೊಡುವುದು ಕಡ್ಡಾಯವಾಗಿದೆ. ಪ್ರತಿ ಕುಟುಂಬ ಪಂಚಾಯತಿಯಲ್ಲಿ ಉದ್ಯೋಗ ಚೀಟಿ ಪಡೆದು ಕೆಲಸಕ್ಕೆ ಅರ್ಜಿ ಸಲ್ಲಿಸಬೇಕು. 15 ದಿನದೊಳಗೆ ನಿಮಗೆ ಕೆಲಸ ಒದಗಿಸುವ ವ್ಯವಸ್ಥೆ ಚಾಲ್ತಿಯಲ್ಲಿದೆ.

ಕೂಲಿಕಾರರ ದುಡಿಮೆಯ ಹಣವನ್ನು ಅವರವರ ಬ್ಯಾಂಕ್‌ ಖಾತೆಗೆ ನೇರವಾಗಿ ಜಮಾ ಮಾಡುವುದರಿಂದ ಈ ಯೋಜನೆ ಅನುಕೂಲಕರವಾಗಿದೆ. ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ಗ್ರಾಮೀಣ ಮಹಿಳೆಯರು ಯೋಜನೆ ಬಗ್ಗೆ ಗ್ರಾಮೀಣರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ಕಾಯಕಬಂಧುಗಳಾಗಿ ಮಹಿಳೆಯರಿಗೆ ಹೆಚ್ಚು ಕೆಲಸ ಕೊಡಿಸಿ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದರು. ಪಿಡಿಒ ಆನಂದ ಹಿರೇಮಠ, ತಾಲೂಕು ತಾಂತ್ರಿಕ ಸಂಯೋಜಕ ಶಂಕರಗೌಡ, ಗ್ರಾಪಂ ಕಾರ್ಯದರ್ಶಿ ರಂಗರಾಜು ಬಿ.ಆರ್‌., ಗ್ರಾಪಂ ಸದಸ್ಯರಾದ ರಮೇಶ ಇಂಗಳಗಿ, ಪ್ರಶಾಂತ ತಾರನಾಳ, ಗ್ರಾಮಸ್ಥರಾದ ಲಕ್ಷ್ಮಣ ಬಿಜೂjರ, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.