ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ’

Team Udayavani, Jun 28, 2019, 5:20 AM IST

ವಿಜಯಪುರ: ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದೆ. ಹೀಗಾಗಿ, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಅನುಭವಿ ಯತ್ನಾಳ ಅವರು ಕೇಳಿರುವುದರಲ್ಲಿ ತಪ್ಪಿಲ್ಲ ಎಂದು ಬಿಜೆಪಿ ನಾಯಕ ಬಿ.ಶ್ರೀರಾಮುಲು ಹೇಳಿದರು.

ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಅಮಿತ್‌ ಶಾ ಹಾಗೂ ಬಿ.ಎಸ್‌. ಯಡಿ ಯೂರಪ್ಪ ಅವರಿಗೆ ಬಿಟ್ಟಿದ್ದು. ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿ ಇರಬೇಕಾಗುತ್ತದೆ. ‘ಪಕ್ಷ ನನಗೆ ಈಗಾಗಲೇ ಎಲ್ಲವನ್ನೂ ನೀಡಿದೆ. ಹೀಗಾಗಿ, ಈ ವಿಷಯದಲ್ಲಿ ನಾನು ಸಂತ್ರಪ್ತ’ ಎಂದರು.

ಲೋಕಸಭೆ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಮಗ ಇಬ್ಬರೂ ಸೋತಿರುವ ಕಾರಣ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ಅಲ್ಲಿನ ಸೋಲಿನ ಸಿಟ್ಟನ್ನು ಉತ್ತರ ಕರ್ನಾಟಕದ ಜನರ ಮೇಲೆ ತೋರಿಸಲು
ಮುಂದಾಗಿದ್ದಾರೆ.
– ಬಿ.ಶ್ರೀರಾಮುಲು, ಬಿಜೆಪಿ ಶಾಸಕ

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ