ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಿ

Team Udayavani, Aug 3, 2022, 4:20 PM IST

9walk

ಕೊಲ್ಹಾರ: ಆ. 15ರಂದು ಭಾರತ ಸ್ವಾತಂತ್ರ್ಯ ಪಡೆದು 75 ವರ್ಷವಾಗುತ್ತದೆ. ಈ ಸಂದರ್ಭದಲ್ಲಿ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷಾಚರಣೆ ಹಿನ್ನೆಲೆ ಪಪಂ ಕಾರ್ಯಾಲಯದಲ್ಲಿ ಧ್ವಜ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ದೇಶದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಿ ಎಂದರು. ತದ ನಂತರ ಪಪಂ ಸದಸ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಕ್ಷಮ ಕುಂದುಕೊರತೆಗಳ ಸಮಾಲೋಚನಾ ಸಭೆ ನಡೆಸಿದರು.

ಈ ವೇಳೆ ಸದಸ್ಯರಾದ ಬಾಬು ಬ್ಯಾಲ್ಯಾಳ, ತೌಶಿಪ್‌ ಗಿರಗಾಂವಿ ಪಟ್ಟಣಕ್ಕೆ ಮಂಜೂರಾದ 50 ಕೋಟಿ ಅನುದಾನ ಹಾಗೂ ಆಶ್ರಯ ಯೋಜನೆ ಮನೆಗಳ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ದೂರು ಹೇಳಿದಾಗ, ಪಟ್ಟಣ ಅಭಿವೃದ್ದಿಗಾಗಿ ಸದಸ್ಯರು ರಾಜಕೀಯ ಬೆರಸದೇ ಪಕ್ಷಾತೀತವಾಗಿ ಒಮ್ಮತ ಅಭಿಪ್ರಾಯ ಮೇರೆಗೆ ಸಾಗಬೇಕು ಎಂದರು.

ಪಟ್ಟಣದಲ್ಲಿರುವ ಮನೆಗಳ ಉತಾರಿಗಳ ಹಂಚಿಕೆಯಲ್ಲಿ ವಿಳಂಬವಾಗುತ್ತಿರುವದು ನನ್ನ ಗಮನಕ್ಕೆ ಬಂದಿದೆ. ವಿಶೇಷ ಜಿಲ್ಲಾಧಿಕಾರಿಗಳ ನೇತೃತ್ವದ ತನಿಖಾ ತಂಡ ಕೊಲ್ಹಾರ ಪುನರ್ವಸತಿ ಕೇಂದ್ರದಲ್ಲಿ ಹಂಚಿಕೆಯಾದ ಹಕ್ಕುಪತ್ರಗಳ ಸಮಗ್ರ ಮಾಹಿತಿಯನ್ನು ನಮಗೆ ಒದಗಿಸಿದೆ. ಅದರಂತೆ ಕಾನೂನಾತ್ಮಕವಾಗಿರುವ ನಿವೇಶನಗಳ ಉತಾರ ಹಂಚಿಕೆ ಮಾಡಲು ಈಗಾಗಲೇ ಪಪಂ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದರು.

ಪಟ್ಟಣದ ಅಭಿವೃದ್ದಿಗಾಗಿ ವಿಶೇಷ ಅನುದಾನ ಮಂಜೂರು ಮಾಡಬೇಕು, ಸಿಬ್ಬಂದಿಯ ಕೊರತೆಯನ್ನು ನೀಗಿಸಬೇಕು. ಹೊಸ ಪಪಂ ಕಾರ್ಯಾಲಯದ ಕಟ್ಟಡಕ್ಕಾಗಿ ಮಂಜೂರಾತಿ ದೊರಕಿಸಿಕೊಡಬೇಕು. ಸ್ಥಳೀಯ ಪುನರ್ವಸತಿ ಕೇಂದ್ರದಲ್ಲಿರುವ ಸರ್ಕಾರಿ ಜಾಗೆಗಳನ್ನು ಪಪಂಗೆ ಹಸ್ತಾಂತರಗೊಳಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ವಾರ್ಡ್‌ಗಳಲ್ಲೂ 24×7 ನೀರು ಸರಬರಾಜು ವ್ಯವಸ್ಥೆಯಾಗಬೇಕು ಮತ್ತು ನೀರಿನ ಸರಬರಾಜು ಬಿಲ್ಲನ್ನು ರದ್ದುಪಡಿಸಬೇಕು. ತಾಲೂಕು ಕೇಂದ್ರವಾಗಿರುವ ಪಟ್ಟಣದಲ್ಲಿ ತಾಲೂಕಾಡಳಿತದ ಎಲ್ಲ ಕಚೇರಿ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ಅದರಂತೆ ಸ್ಥಳೀಯ ಬಿಎಸ್‌ ಎನ್‌ಎಲ್‌ ಜಾಗೆಯನ್ನು ಸ್ಥಳಾಂತರ ಮಾಡಿ ಮಿನಿ ವಿಧಾನಸೌಧ ಕಟ್ಟಡ ಮಾಡಬೇಕು ಎಂದು ಹಲವಾರು ಸಮಸ್ಯೆಗಳನ್ನು ಜನರು ಡಿಸಿ ಗಮನಕ್ಕೆ ತಂದಾಗ ಸೂಕ್ತವಾಗಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ತಹಶೀಲ್ದಾರ್‌ ಪಿ.ಜಿ. ಪವಾರ, ಮುಖ್ಯಾ ಧಿಕಾರಿ ವೀರೇಶ ಹಟ್ಟಿ, ಸದಸ್ಯರಾದ ಚನಮಲ್ಲಪ್ಪ ಗಿಡ್ಡಪ್ಪಗೋಳ, ಅಪ್ಪಸಿ ಮಟ್ಯಾಳ, ಬಾಬು ಭಜಂತ್ರಿ, ದಸ್ತಗಿರ್‌ ಕಲಾದಗಿ, ಶ್ರೀಶೈಲ್‌ ಅಥಣಿ, ನಿಂಗಪ್ಪ ಗಣಿ, ವಿಜಯಮಹಾಂತೇಶ ಗಿಡ್ಡಪ್ಪಗೋಳ, ತೌಶಿಪ್‌ ಗಿರಗಾಂವಿ, ಶಿವಪ್ಪ ವಾಲೀಕಾರ, ಶ್ರೀಶೈಲ್‌ ಮುಳವಾಡ, ಪ್ರಮುಖರಾದ ಮಲ್ಲು ಹೆರಕಲ್‌, ಅಶೋಕ ಜಿಡ್ಡಿಬಾಗಿಲ, ಎಂ.ಆರ್‌. ಕಲಾದಗಿ, ದಶರಥ ಈಟಿ, ಇಕ್ಬಾಲ್‌ ನದಾಫ್‌, ಅನ್ವರ್‌ ಕಂಕರಪೀರ ಇದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.