ನೆರೆ ಸಂತ್ರಸ್ತರಿಗೆ ಬದುಕು ಕಟ್ಟಿಕೊಡಲು ಯತ್ನ

•ಪ್ರಕೃತಿ ಮುನಿಸಿನಿಂದ ಉತ್ತರ ಕರ್ನಾಟಕದಲ್ಲಿ ಕಂಡು ಕೇಳರಿಯದ ಅವಾಂತರ ಸೃಷ್ಟಿ: ರಘುಮೂರ್ತಿ

Team Udayavani, Aug 22, 2019, 11:52 AM IST

22-Agust-15

ಚಳ್ಳಕೆರೆ: ಬಾದಾಮಿ ವಿಧಾನಸಭಾ ಕ್ಷೇತ್ರದ ತಳಕವಾಡಿಯ ನೆರೆ ಸಂತ್ರಸ್ತರಿಗೆ ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು.

ಚಳ್ಳಕೆರೆ: ಪ್ರಕೃತಿ ಮಾತೆಯ ಮುನಿಸಿಗೆ ಉತ್ತರ ಕರ್ನಾಟಕದ ಸಾವಿರಾರು ಕುಟುಂಬಗಳು ತತ್ತರಿಸಿ ಹೋಗಿವೆ. ನೊಂದ ಜನರಿಗೆ ಸಾಧ್ಯವಾದಷ್ಟು ಮಟ್ಟಿಗೆ ಸಹಾಯ ಮಾಡುತ್ತಿದ್ದೇವೆ. ಸಂತ್ರಸ್ತರು ಆದಷ್ಟು ಬೇಗ ಚೇತರಿಸಿಕೊಳ್ಳುವಂತಾಗಲಿ ಎಂಬುದು ನಮ್ಮ ಹಾರೈಕೆ ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು.

ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ನೆರೆ ಸಂತ್ರಸ್ತರಿಗೆ ಆಹಾರ ಪದಾರ್ಥ, ಬಟ್ಟೆ, ಗೃಹೋಪಯೋಗಿ ವಸ್ತುಗಳನ್ನು ವಿತರಿಸುತ್ತಿರುವ ಅವರು ಬುಧವಾರ ದೂರವಾಣಿಯಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದರು.

ಆ ಭಾಗದ ಶಾಸಕರು, ಚುನಾಯಿತ ಜಿಲ್ಲಾ ಹಾಗೂ ತಾಪಂ ಸದಸ್ಯರು, ಜನಪ್ರತಿನಿಧಿಗಳು, ಸಂಘ-ಸಂಸ್ಥೆ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರ ನೆರವಿನಿಂದ ನಮ್ಮ ತಂಡದ ಎಲ್ಲಾ ಮುಖಂಡರು, ಕಾರ್ಯಕರ್ತರು ಎಡೆಬಿಡದೆ ಈ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಪ್ರತಿನಿತ್ಯ ನೂರು ಜನರ ತಂಡ ಎಂಟು ಭಾಗಗಳಾಗಿ ಪದಾರ್ಥ, ವಸ್ತು ಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ಬಾದಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಳಕವಾಡಿ, ಆಗನೂರು, ಕಲಗಟ್ಟ ಮುಂತಾದ ಗ್ರಾಮಗಳಿಗೆ ತೆರಳಿ ನೆರವು ನೀಡಿದ್ದೇವೆ. ಆ ಭಾಗದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಅಲ್ಲಿನ ಜನರು ಸಂಕಷ್ಟದಲ್ಲಿದ್ದಾರೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಅಂದಾಜು 16,500 ಕುಟುಂಬಗಳಿಗೆ ದವಸ ಧಾನ್ಯ, ಬಟ್ಟೆಗಳನ್ನು ವಿತರಿಸಲಾಯಿತು. ಸಾವಿರಾರು ಮುಗ್ಧ ಜನರು ನಮ್ಮ ಸಹಾಯವನ್ನು ಅತ್ಯಂತ ಕೃತಜ್ಞತಾ ಭಾವನೆಯಿಂದ ಸ್ವೀಕರಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಭಾಗದ ಜನರಿಗೆ ಮೂಲಭೂತವಾಗಿ ಬೇಕಾಗಿರುವ ಬಟ್ಟೆ, ಲುಂಗಿ, ಬೆಡ್‌ಶೀಟ್, ಟವೆಲ್, ಸೀರೆ, ಚಾಪೆ, ಪಾತ್ರೆ, ಕೊಡ, ಪ್ಲಾಸ್ಟಿಕ್‌ ವಸ್ತುಗಳು, ಪೇಸ್ಟ್‌, ಬ್ರಷ್‌, ಸಾಬೂನು, ಬಿಸ್ಕಿಟ್, ಅಕ್ಕಿ, ಅಡುಗೆ ಎಣ್ಣೆ ಮುಂತಾದ ಪದಾರ್ಥಗಳನ್ನು ನೆರೆ ಸಂತ್ರಸ್ತರಿಗೆ ಹಂಚಲಾಗಿದೆ. ನಮ್ಮಿಂದ ವಸ್ತುಗಳನ್ನು ಪಡೆದ ನೂರಾರು ಜನರು ಸಂತಸದಿಂದ ನಮ್ಮ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಂತಹ ದುಸ್ಥಿತಿ ಯಾರಿಗೂ ಬಾರದಿರಲಿ ಎಂದು ದೇವರನ್ನು ಪ್ರಾರ್ಥಿಸುವುದಾಗಿ ಹೇಳಿದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಬಾಬು ರೆಡ್ಡಿ, ನಗರಸಭಾ ಸದಸ್ಯರಾದ ಕೆ. ವೀರಭದ್ರಪ್ಪ, ವೈ. ಪ್ರಕಾಶ್‌, ಟಿ. ಮಲ್ಲಿಕಾರ್ಜುನ, ಮುಖಂಡರಾದ ಜಿ. ವೀರೇಶ್‌, ಆರ್‌. ಪ್ರಸನ್ನಕುಮಾರ್‌, ಕೃಷ್ಣ, ಆರ್‌. ಭರಮಣ್ಣ, ಪಾಲಯ್ಯ, ಎನ್‌. ಮಂಜುನಾಥ, ಪಿ. ತಿಪ್ಪೇಸ್ವಾಮಿ, ಶೇಖರಪ್ಪ, ತಿಪ್ಪೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.