ಬಂಡೀಪುರ ಅರಣ್ಯದಲ್ಲಿ 18 ಹುಲಿ, 224 ಆನೆಗಳು ಪತ್ತೆ

Team Udayavani, Jan 15, 2018, 2:23 PM IST

TigerfromKabini4Blog1.jpg

ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯ ಅರಣ್ಯದಲ್ಲಿ ಕಳೆದ ಒಂದು ವಾರದಿಂದ ನಡೆದ ಹುಲಿ ಗಣತಿ ಪೂರ್ಣಗೊಂಡಿದೆ. ಯೋಜನೆಯ ಎಲ್ಲಾ 13 ವಲಯಗಳ 111 ಬೀಟ್‌ನಲ್ಲಿ ಸುಮಾರು 60 ಸ್ವಯಂ ಸೇವಕರು ಹಾಗೂ 250ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಗಣತಿಯನ್ನು ಯಶಸ್ವಿಯಾಗಿ ಪೂರೈಸಿದರು. ಪ್ರತಿ ದಿನವೂ ಮುಂಜಾನೆ 6ರಿಂದ 10 ಗಂಟೆಯವರೆಗೆ ನಡೆದ ಗಣತಿಯಲ್ಲಿ ಒಂದೊಂದು ತಂಡವು ಕಾಲುನಡಿಗೆಯಲ್ಲಿ ತಮ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಗಣತಿ ನಡೆಸಿದವು.

ಈ ಸಂದರ್ಭದಲ್ಲಿ ಹುಲಿಯ ಹೆಜ್ಜೆ ಗುರುತಿನ ಜಾಡು ಹಿಡಿದು ಅವುಗಳ ಆವಾಸ ಸ್ಥಾನದ ವ್ಯಾಪ್ತಿ ಪತ್ತೆ ಮಾಡಲಾಯಿತು.
ಹೆಜ್ಜೆಯ ಉದ್ದ-ಅಗಲವನ್ನು ಅಳತೆ ಮಾಡಲಾಯಿತು. ಹುಲಿ ಗಣತಿಯೊಂದಿಗೆ ಕಾಡಿನ ಇತರೆ ಪ್ರಾಣಿಗಳಾದ ಆನೆ, ಚಿರತೆ, ಕಾಡಮ್ಮೆ, ಜಿಂಕೆ ಮುಂತಾದ ಪ್ರಾಣಿಗಳು ಗಣತಿದಾರರಿಗೆ ದರ್ಶನ ಕೊಟ್ಟವು. 

ಈ ಒಂದು ವಾರದ ಗಣತಿಕಾರ್ಯದಲ್ಲಿ ಒಟ್ಟಾರೆಯಾಗಿ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ 18 ಹುಲಿಗಳು, 8 ಚಿರತೆಗಳು, 5 ಕರಡಿಗಳು, 63 ಕಾಡುನಾಯಿಗಳು, 224 ಆನೆಗಳು, 56 ಕಾಡೆಮ್ಮೆಗಳು, 19 ಕಾಡುಕುರಿ ಹಾಗೂ 15 ಗುಂಪಿನಲ್ಲಿ ಜಿಂಕೆಗಳು ಗಣತಿದಾರರ ಕಣ್ಣಿಗೆ ಬಿದ್ದಿವೆ. ಹುಲಿ ಗಣತಿ ವೇಳೆ ಸ್ವಯಂ ಸೇವಕರು
ಬಹಳ ಪ್ರೀತಿ ಪೂರಕವಾಗಿ, ಬದ್ಧತೆಯಿಂದ ಕಾಡಿನ ನಿಯಮಕ್ಕೆ ಯಾವುದೇ ತೊಂದರೆ ನೀಡದೆ ಗಣತಿ ನಡೆಸಿದರು. ಅವರಿಗೆ ತುಂಬಾ ಅಭಾರಿ ಯಾಗಿದ್ದೇವೆ ಎಂದು ಹುಲಿಯೋಜನೆ ನಿರ್ದೇಶಕ ಅಂಬಾಡಿ ಮಾಧವ್‌ ತಿಳಿಸಿದ್ದಾರೆ.

ತಾಯಿ, ಮರಿ ಹುಲಿಗಳ ಹೆಜ್ಜೆ ಗುರುತು ಪತ್ತೆ: 2014ರಲ್ಲಿ ನಡೆಸಿದ್ದ ಹುಲಿ ಗಣತಿಯಲ್ಲಿ ಬಂಡೀಪುರದಲ್ಲಿ 139 ಹುಲಿಗಳು ಇರುವುದು ಖಚಿತವಾಗಿತ್ತು. ಆದರೆ,ಪ್ರತಿನಿತ್ಯವೂ ಸಫಾರಿಗೆ ಹೊರಟವರಿಗೆ ಒಂದಲ್ಲಾ ಒಂದುಕಡೆ ಹುಲಿಗಳು ದರ್ಶನ ನೀಡುತ್ತಿವೆ. 

ಅಲ್ಲದೆ ಬಹುತೇಕ ವಲಯಗಳಲ್ಲಿಯೂ ಗಣತಿದಾರರಿಗೂ ನೇರ ದರ್ಶನ ಕೊಟ್ಟಿರುವ ಜೊತೆಗೆ ತಾಯಿ ಮತ್ತು ಮರಿ ಹುಲಿಗಳ ಹೆಜ್ಜೆಯ ಗುರುತುಗಳು ಕಂಡುಬಂದಿವೆ. ಈ ಹುಲಿ ಗಣತಿಯಲ್ಲಿ ಹುಲಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುವುದು ಕಂಡು ಬರುತ್ತಿದೆ. ಬಂಡೀಪುರಕ್ಕೆ ಮತ್ತೂಮ್ಮೆ ಮೊದಲಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.