ಮಾದಪ್ಪನ ಬೆಟ್ಟದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 48 ಜೋಡಿ

1989ರಿಂದ ನಿರಂತರವಾಗಿ ಸಾಮೂಹಿಕ ವಿವಾಕ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಬರಲಾಗುತ್ತಿದೆ.

Team Udayavani, Jun 24, 2022, 5:27 PM IST

ಮಾದಪ್ಪನ ಬೆಟ್ಟದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 48 ಜೋಡಿ

ಹನೂರು: ಮಲೆ ಮಾದಪ್ಪನ ಸನ್ನಿಧಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನೀವೆ ಸೌಭಾಗ್ಯವಂತರು. ಈ ಪುಣ್ಯಕ್ಷೇತ್ರದಲ್ಲಿ ವಿವಾಹವಾದವರೆಲ್ಲ ಯಾವುದೇ ಸಣ್ಣ ಲೋಪದೋಷಗಳೂ ಇಲ್ಲದ ಹಾಗೆ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದಾರೆ ಎಂದು ಶಾಸಕ ಆರ್‌. ನರೇಂದ್ರ ಅಭಿಪ್ರಾಯಪಟ್ಟರು.

ರಾಜ್ಯದ ಪವಿತ್ರ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಮುಜರಾಯಿ ಇಲಾಖೆಯಿಂದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವಧು-ವರರು ಸೇರಿದಂತೆ ನೆರೆಯ ತಮಿಳುನಾಡು ರಾಜ್ಯದಿಂದಲೂ ವಧು-ವರರ ಆಗಮಿಸಿ ನೋಂದಣಿ ಮಾಡಿಸಿ 48 ದಂಪತಿಗಳು ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗಳಿಗೆ ಪ್ರಾಧಿಕಾರದಿಂದ ಮಾಂಗಲ್ಯ, ಕಾಲುಂಗುರ, ಸೀರೆ -ಕುಪ್ಪಸ ಮತ್ತು ಪಂಚೆ-ಶರ್ಟು, ಶಲ್ಯಗಳನ್ನು ನೀಡಲಾಯಿತು.

ಸಾಮೂಹಿಕ ಕಾರ್ಯಕ್ರಮವು ಬೆಳಗ್ಗೆ 8.40ರಲ್ಲಿ ಶುಭ ಕಟಕ ಲಗ್ನದಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿ ಕಾರ್ಜುನಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಜರುಗಿತು. ನಂತರ ಶಾಸಕ ಆರ್‌.ನರೇಂದ್ರ ಮಾತನಾಡಿ, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 1989ರಿಂದ ನಿರಂತರವಾಗಿ ಸಾಮೂಹಿಕ ವಿವಾಕ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಬರಲಾಗುತ್ತಿದೆ.

ಇಲ್ಲಿಯವರೆಗೂ 1700ಕ್ಕೂ ಹೆಚ್ಚು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಲ್ಲಿ ವಿವಾಹವಾದ ಯಾವ ದಂಪತಿಗಳು ಸಾಂಸಾರಿ ಜೀವನದಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆಯಿಲ್ಲದೆ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ವಿವಾಹವಾಗುತ್ತಿರುವ ನೀವೆಲ್ಲಾ ಸೌಭಾಗ್ಯವಂತರು.

ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ದಂಪತಿಗಳು ದುಶ್ಚಟದಿಂದ ದೂರವಿದ್ದು ಉತ್ತಮ ಜೀವನ ಸಾಗಿಸುವಂತೆ ಕಿವಿಮಾತು ಹೇಳಿದರು. ಸಚಿವ ಸೋಮಣ್ಣರ ಪತ್ನಿ ಭಾಗಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ವಸತಿ ಹಾಗೂ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಅವರು ಆಗಮಿಸಬೇಕಿತ್ತು.

ಆದರೆ ಅನ್ಯಕಾರ್ಯ ನಿಮಿತ್ತ ಅವರು ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆ ಅವರ ಪತ್ನಿ ಶೈಲಜಾ ಅವರನ್ನು ಕಳುಹಿಸಿಕೊಟ್ಟಿದ್ದರು. ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸಚಿವರ ಪತ್ನಿ ಮಲೆ ಮಾದಪ್ಪನ ದರ್ಶನ ಪಡೆದು ಸಾಲೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು- ವರರಿಗೆ ವೈಯಕ್ತಿಕವಾಗಿ ನೆನಪಿನ ಕಾಣಿಕೆಗಳನ್ನು ನೀಡಿ, ಹಣದ ಕೊಡುಗೆಯನ್ನು ನೀಡಿದರು.

ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಶ್ರೀಗಳು, ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಉಪಕಾರ್ಯದರ್ಶಿ ಬಸವರಾಜು, ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.