ಮಾದಪ್ಪನಿಗೆ ಅಮಾವಾಸ್ಯೆ ವಿಶೇಷ ಪೂಜೆ


Team Udayavani, Feb 5, 2019, 7:10 AM IST

madappa.jpg

ಮಲೆ ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ದೇವಾಲಯದಲ್ಲಿ ಸೋಮವಾರ ಅಮಾವಾಸ್ಯೆಯ ಪ್ರಯುಕ್ತವಾಗಿ ಸಹಸ್ರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯವಲ್ಲದೇ ನೆರೆಯ ತಮಿಳುನಾಡಿ ನಿಂದಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಅಮಾವಾಸ್ಯೆಯ ಪ್ರಯುಕ್ತ ಮಲೆ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬಳಿಕ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದಿದ್ದ ರಿಂದ ಧರ್ಮ ದರ್ಶನವಲ್ಲದೇ 300, 100, 50 ರೂ. ಶುಲ್ಕಗಳ ವಿಶೇಷ ಸರತಿ ಸಾಲುಗಳನ್ನು ತೆರೆಯಲಾಗಿತ್ತು. ಪ್ರಾಧಿಕಾರದ ವತಿಯಿಂದ ಭಕ್ತರಿಗೆ ನಿರಂತರ ಅನ್ನದಾಸೋಹದ ವ್ಯವಸ್ಯೆ ಕಲ್ಪಿಸಲಾಗಿತ್ತು. ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಬಂದಿದ್ದ ಭಕ್ತರು ಉರುಳು ಸೇವೆ, ಪಂಜಿನಸೇವೆ, ರಥೋತ್ಸವದ ಉತ್ಸವ ಮುಂತಾದ ಹರಕೆಗಳನ್ನು ತೀರಿಸಿ, ಕಾಣಿಕೆಗಳನ್ನು ನೀಡುವುದರ ಮೂಲಕ ದೇವರ ಕೃಪೆಗೆ ಪಾತ್ರರಾದರು.

ವಿದ್ಯುತ್‌ ಕಡಿತಕ್ಕೆ ನೀರಿಗೆ ಪರದಾಟ: ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ 12 ಗಂಟೆಯ ತನಕ ವಿದ್ಯುತ್‌ ಕಡಿತಗೊಂಡಿದ್ದರಿಂದ ದೇವಾಲಯದ ಆವರಣದಲ್ಲಿ ನೀರು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದರಿಂದ ಕುಡಿಯುವ ನೀರು ಹಾಗೂ ಶೌಚಾಲಯಕ್ಕೆ ತೆರಳಲು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಬಾಟಲಿ ನೀರನ್ನು ಕೊಂಡು ಬಹಿರ್ದೆಸೆಗೆ ಹೊಗುವಂತಹ ಸ್ಥಿತಿ ಎದುರಾಗಿತ್ತು.

ಕೋಟಿ ಕೋಟಿ ಆದಾಯವಿದ್ದರೂ ಸೌಲಭ್ಯವಿಲ್ಲ: ಮಲೆ ಮಹದೇಶ್ವರ ಬೆಟ್ಟ ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ತರುವಂತಹ ಎರಡನೇ ದೇವಾಲಯವಾಗಿದೆ. ಪ್ರತಿ ತಿಂಗಳು ಹುಂಡಿಯಲ್ಲಿ 1 ರಿಂದ 1.50 ಕೋಟಿ ರೂ. ಸಂಗ್ರಹವಾಗುತ್ತದೆ. ಜೊತೆಗೆ ಉತ್ಸವ ಕೌಂಟರ್‌, ಲಾಡು ಮಾರಾಟ, ಚಿನ್ನದ ರಥೋತ್ಸವ, ಅತಿಥಿ ಗೃಹ, ಗುತ್ತಿಗೆ ವಿಭಾಗ ಮತ್ತಿತರ ಮೂಲಗಳಿಂದ ದೇವಾಲಯಕ್ಕೆ ಕೋಟ್ಯಂತರ ರೂ. ಆದಾಯವಿದ್ದರೂ ದೇವಾಲಯಕ್ಕೆ ಬರುವಂತಹ ಭಕ್ತರಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನು ಪ್ರಾಧಿಕಾರ ಒದಗಿಸಿ ಕೊಡುತ್ತಿಲ್ಲ.

ಮಾಹಿತಿ ಫ‌ಲಕ ಅಳವಡಿಸಿ: ದೇವಾಲಯದ ಬಳಿ ಶಾಶ್ವತ ನೆರಳಿನ ವ್ಯವಸ್ಥೆ, ಮಕ್ಕಳ ಹಾಲುಣಿಸುವ ಕೊಠಡಿ, ದೇವಾಲಯದ ಆಸು ಪಾಸಿನಲ್ಲಿ ಶೌಚಾಲಯ ವ್ಯವಸ್ಥೆ, ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸೌಲಭ್ಯಗಳ ಕುರಿತು ನಾಮಫ‌ಲಕಗಳನ್ನು ಅಳವಡಿಸಿ ಭಕ್ತಾದಿಗಳಿಗೆ ಸಮರ್ಪಕ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ವಹಿಸಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.