ಸ್ವಾತಂತ್ರ್ಯ, ಸಮಾನತೆ ದೇಶದ ಅಭಿವೃದ್ಧಿಯ ದಿಕ್ಸೂಚಿ


Team Udayavani, Apr 16, 2022, 1:28 PM IST

Untitled-1

ಚಾಮರಾಜನಗರ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಎಲ್ಲರಿಗೂ ಅಡಕಗೊಳಿಸಿ ರುವ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಅಂಶಗಳು ದೇಶದ ಅಭಿವೃದ್ಧಿಯ ದಿಕ್ಸೂಚಿಯಾಗಿದೆ ಎಂದು ಬೆಂಗಳೂರು ಕ್ರೈಸ್ಟ್‌ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಹ. ರಾ.ಮಹೇಶ್‌ ಅಭಿಪ್ರಾಯಪಟ್ಟರು.

ನಗರದ ಪೇಟೆ ಪ್ರçಮರಿ ಶಾಲೆಯ ಅವರಣದಲ್ಲಿ, ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ 131ನೇ ಜನ್ಮ ದಿನಾಚರಣೆ ವೇದಿಕೆ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿ ಮಾತನಾಡಿದರು.

ಸಂವಿಧಾನಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ಕೇವಲ ದಲಿತರ ಹಕ್ಕು, ಅವಕಾಶಗಳಿಗಾಗಿ ಮಾತ್ರ ಹೋರಾಟ ಮಾಡಿದವರಲ್ಲ. ತಮ್ಮ ವೈಯಕ್ತಿಕ ಬದುಕನ್ನು ಬದಿಗಿಟ್ಟು, ಶೋಷಿತರು, ಹಿಂದುಳಿದ ವರ್ಗಗಳು, ಮಹಿಳೆಯರು ಸೇರಿದಂತೆ ದೇಶದ ಎಲ್ಲಾ ಸಮುದಾಯಗಳ ಸರ್ವಾಂಗೀಣ ಪ್ರಗತಿಗಾಗಿ ಹೋರಾಡಿದರು. ಅಂಬೇಡ್ಕರ್‌ ಅವರು ಜ್ಞಾನ, ವ್ಯಕ್ತಿತ್ವ, ರಾಜೀಯಾಗದ ಹೋರಾಟದ ಮೂಲಕ ಭಾರತಕ್ಕೆ ನೀಡಿದ ಸಂವಿಧಾನ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ ಎಂದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನ ರಚಿಸುವ ಪೂರ್ವದಲ್ಲಿ ಬಸವಣ್ಣ, ಕನಕದಾಸರು, ಸೇರಿದಂತೆ ಮಹಾನ್‌ ಸಾಧಕರ ಸಿದ್ಧಾಂತಗಳನ್ನು ಅಳವಡಿಸಿಕೊಂಡು ದೇಶದ ಇಡೀ ಸಮಾಜ, ಸಮುದಾಯವನ್ನು ಮುಂಚೂಣಿಯಲ್ಲಿ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅಂಬೇ ಡ್ಕರ್‌ ಅವರ ಆದರ್ಶ ಸಿದ್ಧಾಂತಗಳು ಇಂದಿಗೂ ಎಲ್ಲರಿಗೂ ಅನುಕರಣೀಯವಾಗಿವೆ ಎಂದರು.

ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ಇಡೀ ವಿಶ್ವವೇ ಸಂವಿಧಾನಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಜನ್ಮದಿನವನ್ನು ಆಚರಿಸಿ ಗೌರವ ನೀಡುತ್ತಿದೆ. ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್‌ ಅವರ ಧ್ಯೇಯವಾಗಿತ್ತು. ದೇಶದಲ್ಲಿ ಶೋಷಿತರು ಸೇರಿದಂತೆ ಎಲ್ಲ ಹಿಂದುಳಿದವರು ಆಡಳಿತ ಚುಕ್ಕಾಣಿ ಹಿಡಿಯುವ ಆಶಯಗಳ ಈಡೇರಿಕೆಗಾಗಿ ಶಿಲ್ಪಿ ವಿಗ್ರಹ ಕೆತ್ತುವ ಮಾದರಿಯಲ್ಲಿ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಟಿ. ನರಸೀಪುರ ನಳಂದ ಬುದ್ಧವಿಹಾರದ ಪೂಜ್ಯ ಬೋಧಿರತ್ನ ಬಂತೇಜಿಯವರು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಡಾ. ಬಿ.ಆರ್‌. ಅಂಬೇಡ್ಕರ್‌ ಜಯಂತಿ ಸಂದರ್ಭಕ್ಕೆ ನೀಡಿದ ಸಂದೇಶವನ್ನು ವಾಚಿಸಲಾಯಿತು.

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಹಾಗೂ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು.

ನಗರಸಭೆ ಅಧ್ಯಕ್ಷೆ ಆಶಾನಟರಾಜು, ಚುಡಾ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿ.ಪಂ. ಸಿಇಒ ಗಾಯತ್ರಿ, ಎಡಿಸಿ ಎಸ್‌. ಕಾತ್ಯಾಯಿನಿದೇವಿ, ಎಎಸ್‌ಪಿ ಕೆ.ಎಸ್‌. ಸುಂದರರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಎಚ್‌.ಸಿ. ಭಾಗೀರಥಿ, ಜಿ.ಪಂ. ಮಾಜಿ ಸದಸ್ಯರಾದ ಕೆರೆಹಳ್ಳಿ ನವೀನ್‌, ಎ.ಆರ್‌. ಬಾಲರಾಜು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.