ಎಪಿಎಂಸಿ ಚುನಾವಣೆ: ನಾಳೆ ಮತದಾನ


Team Udayavani, Apr 16, 2022, 3:38 PM IST

Untitled-1

ಚಾಮರಾಜನಗರ: 2022ನೇ ಸಾಲಿನಲ್ಲಿ ಅವಧಿ ಮುಕ್ತಾಯವಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ಸಂಬಂಧ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯಲ್ಲಿ ಬರುವ 11 ಕೃಷಿಕ ಕ್ಷೇತ್ರ ಮತ್ತು 01 ವರ್ತಕರ ಕ್ಷೇತ್ರಗಳಿಗೆ ಏ. 17 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ 28 ಅಭ್ಯರ್ಥಿಗಳು ಹಾಗೂ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದ 24 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಚಾಮರಾಜನಗರ ಮತ್ತು ಯಳಂದೂರು ತಾಲೂಕುಗಳು ಒಳಪಡಲಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 135 ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ. ಒಟ್ಟು 1,49,665 ಮತದಾರರಿದ್ದು, ಈ ಪೈಕಿ 1,11,636 ಪುರುಷರು ಮತ್ತು 38,029 ಮಹಿಳಾ ಮತದಾರರಿರುತ್ತಾರೆ.

ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ, 61 ಮೂಲ ಹಾಗೂ 4 ಆಕ್ಸಿಲರಿ ಮತಗಟ್ಟೆಗಳನ್ನೊಳಗೊಂಡಂತೆ ಒಟ್ಟು 65 ಮತಗಟ್ಟೆ ಗಳನ್ನು ಸ್ಥಾಪಿಸಲಾಗಿರುತ್ತದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 72,840 ಮತದಾರರಿದ್ದು, ಈ ಪೈಕಿ 54,321 ಪುರುಷರು ಮತ್ತು 18,519 ಮಹಿಳಾ ಮತದಾರರಿರುತ್ತಾರೆ.

ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ, ಯೂನಿವರ್ಸಲ್‌ ಸ್ಕೂಲ್‌, ಸತ್ತಿರಸ್ತೆ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ, ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿಪೂರ್ವ ಕಾಲೇಜು, ಗುಂಡ್ಲುಪೇಟೆ ಇಲ್ಲಿ ಮಸ್ಟರಿಂಗ್‌, ಡೀಮಸ್ಟರಿಂಗ್‌ ಮತ್ತು ಎಣಿಕೆ ಕಾರ್ಯವನ್ನು ನಡೆಸಲಾಗುತ್ತದೆ.

ಮತಗಟ್ಟೆಗಳಿಗೆ ತಲಾ ಒಬ್ಬ ಅಧ್ಯಕ್ಷಾಧಿಕಾರಿ ಮತ್ತು 3 ಜನ ಪೋಲಿಂಗ್‌ ಅಧಿಕಾರಿಗಳನ್ನೊಳಗೊಂಡಂತೆ ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 600 ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 280 ಮತದಾನಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ.

ನೇಮಕ ಮಾಡಿರುವ ಮತಗಟ್ಟೆ ಅಧಿಕಾರಿಗಳಿಗೆ ಈಗಾಗಲೇ ಮತದಾನ ನಡೆಸುವ ಕುರಿತು ತಾಲೂಕು ಮಟ್ಟದ ನುರಿತ ಮಾಸ್ಟರ್‌ ಟ್ರೆçನರ್ಗಳ ಮೂಲಕ ತರಬೇತಿಯನ್ನು ನೀಡಲಾಗಿರುತ್ತದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಯನ್ನು ಮತಪೆಟ್ಟಿಗೆ ಬಳಸಿ ನಡೆಸಲಾಗುತ್ತಿರುವುದರಿಂದ, ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 270 ಹಾಗೂ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 130 ರಾಜ್ಯ ಚುನಾವಣಾ ಆಯೋಗದ ಮತಪೆಟ್ಟಿಗೆಗಳನ್ನು ಮತದಾನಕ್ಕೆ ಬಳಸಿಕೊಳ್ಳಲಾಗುತ್ತಿದೆ.

ಮತಗಟ್ಟೆಗಳಿಗೆ ನೇಮಕ ಮಾಡಿರುವ ಮತದಾನಾಧಿಕಾರಿಗಳನ್ನು ಮತದಾನ ಕೇಂದ್ರಕ್ಕೆ ಕರೆದುಕೊಂಡು ಹೋಗಲು ಚಾಮರಾಜನಗರಕ್ಕೆ 19 ಮತ್ತು ಗುಂಡ್ಲು ಪೇಟೆಗೆ 9 ಕೆ.ಎಸ್‌.ಆರ್‌.ಟಿ.ಸಿ. ಬಸ್ಸುಗಳನ್ನು ಹಾಗೂ ಕ್ರಮವಾಗಿ 10 ಮತ್ತು 8 ಜೀಪ್‌ಗ್ಳನ್ನು ಬಳಸಿಕೊಳ್ಳ ಲಾಗುತ್ತಿದೆ. ಏ. 17ರ ಭಾನುವಾರದಂದು ನಡೆಯುವ ಚುನಾವಣೆಯಲ್ಲಿ ಒಬ್ಬ ಮತದಾರರು ಒಂದು ಮತ ಚಲಾಯಿಸಲು ಮಾತ್ರ ಅವಕಾಶವಿರುತ್ತದೆ. ಏ. 20ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯವು ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕು ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಎಣಿಕೆ ಕೇಂದ್ರದಲ್ಲಿ ನಡೆಯಲಿದ್ದು, ಪ್ರತಿ ಕ್ಷೇತ್ರಕ್ಕೆ ತಲಾ ಒಂದು ಟೇಬಲ್‌ನಂತೆ ಒಟ್ಟು 12 ಟೇಬಲ್‌ಗ‌ಳ ವ್ಯವಸ್ಥೆ ಮಾಡಲಾಗುತ್ತದೆ.

ಎಣಿಕೆ ಕಾರ್ಯಕ್ಕಾಗಿ ಪ್ರತಿ ಟೇಬಲ್‌ ಗೆ ಒಬ್ಬರು ಮೇಲ್ವಿಚಾರಕರು ಮತ್ತು ಇಬ್ಬರು ಸಹಾಯಕರನ್ನು ನಿಯೋಜಿಸಿಕೊಂಡು ತರಬೇತಿ ನೀಡಲಾಗುತ್ತದೆ. ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಸಾರ್ವ ಜನಿಕರು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಚುನಾವಣಾ ಧಿಕಾರಿಗಳಾಗಿರುವ ಚಾರುಲತಾ ಸೋಮಲ್‌ ಕೋರಿದ್ದಾರೆ.

ಚುನಾವಣೆ :ಬಸ್‌ ವ್ಯವಸ್ಥೆ : ಚಾಮರಾಜನಗರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ 2022ರ ಸಂಬಂಧ ಏ. 16ರಂದು ನಗರದ ಸತ್ತಿ ರಸೆಯಲ್ಲಿರುವ ಯೂನಿ ವರ್ಸ್‌ ಶಾಲೆಯಲ್ಲಿ ನಡೆಯುವ ಮಸ್ಟರಿಂಗ್‌ ಕೇಂದ್ರಕ್ಕೆ ಮತಗಟ್ಟೆ ಅಧಿಕಾರಿಗಳು ತೆರಳಲು ಚಾಮರಾಜನಗರ ತಾಲೂಕು ಕಚೇರಿಯಿಂದ ಬೆಳಗ್ಗೆ 7ರಿಂದ 10ಗಂಟೆಯವರೆಗೆ ಬಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದು ಚುನಾವಣಾಧಿಕಾರಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ತಹಶೀಲ್ದಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-adadasd

ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ

ಈಶ್ವರಪ್ಪ

ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ

cm

ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ

NIA, Punjab Police crack Ludhiana bomb blast case

ಲೂಧಿಯಾನ ಬಾಂಬ್ ಸ್ಫೋಟ ಪ್ರಕರಣ ಭೇದಿಸಿದ ಎನ್ಐಎ; ಪ್ರಮುಖ ಆರೋಪಿಯ ಬಂಧನ

ಬ್ಯಾಸಗ್ಯಾಗ ಪ್ರವಾಹ ಬಂದೈತಂದ್ರ, ಪೊಲಿಟಿಕ್ಸ್‌ ನ್ಯಾಗೂ ಸೈಕ್ಲೋನ್‌ ಬರತೈತಿ!

ಬ್ಯಾಸಗ್ಯಾಗ ಪ್ರವಾಹ ಬಂದೈತಂದ್ರ, ಪೊಲಿಟಿಕ್ಸ್‌ ನ್ಯಾಗೂ ಸೈಕ್ಲೋನ್‌ ಬರತೈತಿ!

twenty one hours kannada movie review

‘ಟ್ವೆಂಟಿ ಒನ್‌ ಅವರ್’ ಚಿತ್ರ ವಿಮರ್ಶೆ: ನಿಗೂಢ ಇಪ್ಪತ್ತೂಂದು ಗಂಟೆ

s-r-patl

ಟಿಕೆಟ್ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿಲ್ಲ; ನಾನು ಲಾಬಿ ಮಾಡಲ್ಲ: ಎಸ್.ಆರ್.ಪಾಟೀಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿದ್ಯುತ್ ಸ್ವಿಚ್ ಬೋರ್ಡ್ ಕೈ ಹಾಕಿದ 11 ತಿಂಗಳ ಮಗು ಸಾವು

ವಿದ್ಯುತ್ ಸ್ವಿಚ್ ಬೋರ್ಡ್ ಕೈ ಹಾಕಿದ 11 ತಿಂಗಳ ಮಗು ಸಾವು

ಕಾರು-ಬೈಕ್ ಢಿಕ್ಕಿ: ಓರ್ವ ಸಾವು; ಮತ್ತೋರ್ವನ ಸ್ಥಿತಿ ಗಂಭೀರ

ಕಾರು-ಬೈಕ್ ಢಿಕ್ಕಿ: ಓರ್ವ ಸಾವು; ಮತ್ತೋರ್ವನ ಸ್ಥಿತಿ ಗಂಭೀರ

ಸಕಾಲ ಸೇವೆಯಡಿ ಅರ್ಜಿ ವಿಲೇವಾರಿ ಮಾಡಿ

ಸಕಾಲ ಸೇವೆಯಡಿ ಅರ್ಜಿ ವಿಲೇವಾರಿ ಮಾಡಿ

ಮಳೆಗೆ ಭರಚುಕ್ಕಿ ಜಲಪಾತಕ್ಕೆ ಜೀವ ಕಳೆ

ಮಳೆಗೆ ಭರಚುಕ್ಕಿ ಜಲಪಾತಕ್ಕೆ ಜೀವ ಕಳೆ

ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ಕಗ್ಗೆರೆ ಗ್ರಾಪಂ ಕಾವ್ಯಾ ಅಧ್ಯಕ್ಷೆ: ಅವಿರೋಧ ಆಯ್ಕೆ

ಕಗ್ಗೆರೆ ಗ್ರಾಪಂ ಕಾವ್ಯಾ ಅಧ್ಯಕ್ಷೆ: ಅವಿರೋಧ ಆಯ್ಕೆ

1-adadasd

ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ

7road

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸೂಚನೆ

8

ಹಳ್ಳದಲ್ಲಿ ಕೊಚ್ಚಿ ಹೋದ ರೈತರ ಬದುಕು

ಎಲ್ಲಾ  ಸಮಸ್ಯೆ ಪರಿಹರಿಸುವ ಭರವಸೆ ನೀಡಲಾರೆ

ಎಲ್ಲಾ  ಸಮಸ್ಯೆ ಪರಿಹರಿಸುವ ಭರವಸೆ ನೀಡಲಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.