ಬಿಲ್ಕಲೆಕ್ಟರ್‌ನಿಂದ ಪಿಡಿಒ ಮೇಲೆ ಹಲ್ಲೆ

ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸತ್ತೇಗಾಲ ಗ್ರಾಪಂ ಪಿಡಿಒ, ಕಾರ್ಯದರ್ಶಿ

Team Udayavani, Aug 10, 2019, 12:11 PM IST

ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯ ದರ್ಶಿಯ ಮೇಲೆ ಬಿಲ್ಕಲೆಕ್ಟರ್‌ ಕಲ್ಲಿನಿಂದ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು ಹಲ್ಲೆಗೊಳಗಾದ ಇಬ್ಬರು ಅಧಿಕಾರಿಗಳು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿರುವ ಘಟನೆ ನಡೆದಿದೆ.

ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ನಮಿತಾ ತೇಜೇಗೌಡ, ಕಾರ್ಯದರ್ಶಿ ಲೋಕೇಶ್‌ ಬಾಬು ಹಲ್ಲೆಗೊಳಗಾದವರು. ಆರೋಪಿ ಬಿಲ್ಕಲೆಕ್ಟರ್‌ ನಾಗ ಸಂದ್ರು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆಗೆ ಶಾಸಕ ಭೇಟಿ: ಶಾಸಕ ಮಹೇಶ್‌ ಆಸ್ಪತ್ರೆಗೆ ಭೇಟಿ ನೀಡಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯ ದರ್ಶಿ ಯ ಆರೋಗ್ಯ ವಿಚಾರಿಸಿ ಧೈರ್ಯ ವಾಗಿ ರುವಂತೆ ಹೇಳಿ, ಕೂಡಲೇ ಉತ್ತಮ ಚಿಕಿತ್ಸೆ ಪಡೆದು ಕೊಂಡು ಗುಣಮುಖರಾಗಬೇಕೆಂದು ಸಲಹೆ ನೀಡಿದರು.

ಬಿಲ್ ಕಲೆಕ್ಟರ್‌ ಅಮಾನತಿಗೆ ಸೂಚನೆ: ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಯ ಮೇಲೆ ಹಲ್ಲೆ ಮಾಡುವ ಅಧಿಕಾರವನ್ನು ಬಿಲ್ ಕಲೆಕ್ಟರ್‌ಗೆ ನೀಡಿದವರು ಯಾರು ಎಂದು ಪ್ರಶ್ನಿಸಿದ ಅವರು, ಈ ಕೂಡಲೇ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಸ್ಥಳದಲ್ಲೇ ಇದ್ದ ತಾಪಂ ಇಒ ಚಂದ್ರ ಅವರಿಗೆ ಸೂಚಿಸಲಾಗಿದೆ ಎಂದರು.

ಕಾನೂನು ಕ್ರಮ ಕೈಗೊಳ್ಳಿ: ಬಿಲ್ಕಲೆಕ್ಟರ್‌ ಕೇವಲ ತಾತ್ಕಾಲಿಕ ಸೇವೆ ಮಾಡುತ್ತಿರುವನಿಗೆ ಇಷ್ಟೊಂದು ಶಕ್ತಿ ಇದೆಯೇ ಇಂಥವರಿಗೆ ತಕ್ಕ ಕಠಿಣ ಶಿಕ್ಷೆಯಾದ ಸಂದ ರ್ಭದಲ್ಲಿ ಈ ರೀತಿಯ ಘಟನೆಗಳು ಮರುಕುಳಿ ಸುವುದಿಲ್ಲ. ಕೂಡಲೇ ಸಂಬಂಧಿಸಿದ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹೇಳುವುದಾಗಿ ಹೇಳಿದರು.

ಮಹಿಳಾ ಅಧಿಕಾರಿ ಮೇಲೆ ಖಂಡನೀಯ: ತಾಲೂಕಿನ ಸತ್ತೇಗಾಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಯ ಮೇಲೆ ಬಿಲ್ಕಲೆಕ್ಟರ್‌ ಓರ್ವ ಹಲ್ಲೆ ಮಾಡಿರುವುದು ಖಂಡನೀಯ. ಓರ್ವ ಮಹಿಳಾ ಅಧಿಕಾರಿ ಮೇಲೆ ಈ ರೀತಿಯ ಹಲ್ಲೆ ಮಾಡಿರುವುದು ಸರಿಯಲ್ಲ. ಕೂಡಲೇ ಆರೋಪಿಗೆ ಉಗ್ರ ಶಿಕ್ಷೆಗೆ ಗುರಿಪಡಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿರುವುದಾಗಿ ಜಿಪಂ ಸಿಇಒ ಲತಾಕುಮಾರಿ ತಿಳಿಸಿದರು.

ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಅಧಿಕಾರಿಗಳ ಆರೋಗ್ಯ ತಪಾಸಣೆಯನ್ನು 24/7 ವೀಕ್ಷಣೆ ಮಾಡಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸ್ಥಳದಲ್ಲೇ ಇದ್ದ ಜಿಲ್ಲಾ ಆರೋಗ್ಯಾಧಿಕಾರಿ ರವಿ ಅವರಿಗೆ ಸೂಚನೆ ನೀಡಿದರು.

ಆರೋಪಿಗೆ ಕಠಿಣ ಶಿಕ್ಷೆ: ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರಿಗಳ ಮೇಲೆ ಓರ್ವ ಬಿಲ್ಕಲೆಕ್ಟರ್‌ ಹಲ್ಲೆ ನಡೆಸಿರುವುದು ಖಂಡನೀಯ. ಅವನಿಗೆ ಕಾನೂನಿನಡಿಯಲ್ಲಿ ತಕ್ಕ ಶಿಕ್ಷೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗೆ ಕಠಿಣ ಶಿಕ್ಷೆಯಾಗಲಿದೆ ಎಂದರು.

ಆಸ್ಪತ್ರೆಗೆ ಸಾಕಷ್ಟು ಅನುದಾನ: ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಪ್ರಶ್ನಿಸಿದಾಗ ಜಿಲ್ಲಾ ಪಂಚಾಯಿತಿನಲ್ಲಿ ಸಾಕಷ್ಟು ಅನುದಾನ ಇದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಎಲ್ಲಾ ತರಹದ ಔಷಧಿಗಳನ್ನು ಆಸ್ಪತ್ರೆಯಿಂದಲೇ ನೀಡಬೇಕು. ಹೊರಗೆ ಖರೀದಿಸುವಂತೆ ಚೀಟಿ ಬರೆಯಬಾರದು. ಆಸ್ಪತ್ರೆಗೆ ಬೇಕಾಗಿರುವ ಸಾಮಗ್ರಿಗಳು, ಔಷಧಿಗಳ ಬಗ್ಗೆ ಕೂಡಲೇ ಅಂದಾಜು ವೆಚ್ಚವನ್ನು ವೈದ್ಯರು ನೀಡುತ್ತಿದ್ದಂತೆ ಮಂಜೂರು ಮಾಡುವುದಾಗಿ ಹೇಳಿದರು.

ಆಸ್ಪತ್ರೆ ಮುಂದೆ ಮಳಿಗೆ ತೆರೆಯಲು ಸೂಚನೆ: ಆಸ್ಪತ್ರೆಯ ಹಿಂಬದಿಯಲ್ಲಿ ಜನ ಔಷಧಿ ಕೇಂದ್ರ ತೆರೆದಿದ್ದು, ಇದರ ಬಗ್ಗೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಮಳಿಗೆಯ ಬಗ್ಗೆ ಗೊತ್ತಾಗುವುದಿಲ್ಲ. ಕೂಡಲೇ ಔಷಧಿ ಮಳಿಗೆಯನ್ನು ಆಸ್ಪತ್ರೆಯ ಮುಂಭಾಗ ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಪ್ರಶ್ನಿಸಿದಾಗ ವೀಕ್ಷಿಸಿ ಸಿಇಒ ಆಸ್ಪತ್ರೆಯ ಮುಂಭಾಗದಲ್ಲಿ ಮಳಿಗೆ ತೆರೆಯುವಂತೆ ಸೂಚನೆ ನೀಡುವುದಾಗಿ ಹೇಳಿದರು.

ಜಿಪಂನ ಮುಖ್ಯ ಅಧಿಕಾರಿಗಳು ಸತ್ತೇಗಾಲ ಗ್ರಾಮ ಪಂಚಾಯಿತಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಬೇಕಾದ ದಾಖಲಾತಿಗಳನ್ನು ತಯಾರು ಮಾಡುತ್ತಿದ್ದ ವೇಳೆ ಏಕಾಏಕಿ ಕಚೇರಿ ಒಳಗೆ ಬಂದ ಬಿಲ್ಕಲೆಕ್ಟರ್‌ ಕಲ್ಲಿನಿಂದ ಹೊಡೆದು ಗಾಯಗೊಳಿಸಿ, ನಂತರ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆವೊಡ್ಡಿದ್ದರು ಎಂದು ಹೇಳಿದರು.

ಸೂಕ್ತ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ಅಶೋಕ್‌ ಅವರಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದರು.

ಆರೋಪಿ ಬಂಧನ: ಇಬ್ಬರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ದೂರನ್ನು ದಾಖಲಿಸಿರುವ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ