ದುಡಿಮೆಯಲ್ಲಿ ದೇವರ ಕಂಡ ಬಸವಣ್ಣ

Team Udayavani, May 8, 2019, 3:00 AM IST

ಚಾಮರಾಜನಗರ: ಕಾಯಕವೇ ಕೈಲಾಸ ಎಂಬ ತತ್ವದ ಮೂಲಕ ದುಡಿಮೆಯಲ್ಲಿ ದೇವರನ್ನು ಕಂಡ ಕಾಯಕ ಯೋಗಿ ಬಸವಣ್ಣನವರು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು.

ನಗರದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಲಾಗಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ: ಕುವೆಂಪು ಅವರು 20ನೇ ಶತಮಾನದಲ್ಲಿ ವಿಶ್ವಮಾನವತೆಯ ಕನಸು ಕಂಡಿದ್ದರು. ಅದನ್ನು ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾರಿ ಮಾಡಿದ್ದರು. ಜನಸಾಮಾನ್ಯರಿಗೆ ಅರ್ಥವಾಗುವ ಸರಳಭಾಷೆ ಕನ್ನಡದಲ್ಲಿ ಸಾಕಷ್ಟು ವಚನಗಳನ್ನು ರಚಿಸಿ ಅರಿವಿನ ಬೆಳಕನ್ನು ತೋರಿ ಸಮ ಸಮಾಜಕ್ಕೆ ನಾಂದಿ ಹಾಡಿದರು. ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದರು ಎಂದರು.

ಜಾತಿ ವ್ಯವಸ್ಥೆ ಧಿಕ್ಕರಿಸಿದ ಬಸವಣ್ಣ: ಬಸವಣ್ಣನವರು ಅನುಭವ ಮಂಟಪದ ಮೂಲಕ ದೇಶದ ಮೊದಲ ಸಂಸತ್ತನ್ನು ಸ್ಥಾಪಿಸಿ ಅಲ್ಲಿ ಸಾಮಾಜಿಕ, ಧಾರ್ಮಿಕ ಚರ್ಚೆಗಳನ್ನು ನಡೆಸುತ್ತಿದ್ದರು. ಅಂದಿನ ಸಮಾಜದಲ್ಲಿದ್ದ ಜಾತಿವ್ಯವಸ್ಥೆ, ವರ್ಣಭೇದ ಲಿಂಗಭೇದವನ್ನು ಧಿಕ್ಕರಿಸಿ ಬಡವರು, ದೀನ ದಲಿತರು, ಮಹಿಳೆಯರನ್ನು ಅನುಭವ ಮಂಟಪದಲ್ಲಿ ಒಂದೆಡೆ ಸೇರಿಸಿ ಕ್ರಾಂತಿಕಾರಿ ವಿಚಾರಗಳನ್ನು ವಚನಗಳ ಮೂಲಕ ಜನರಿಗೆ ತಲುಪಿಸಿದರು ಎಂದು ಅವರು ತಿಳಿಸಿದರು.

ವಚನಗಳು ಇಂದಿಗೂ ಜೀವಂತ: ಜಾತಿ ಭಾಷೆಯ ಭೇದವಿಲ್ಲದೆ ಲಿಂಗಶರಣ ತತ್ವವನ್ನು ಪ್ರತಿಪಾದಿಸಿದ ಬಸವಣ್ಣನವರು ತಳ ಸಮುದಾಯದವರಿಗೆ ದೇವಾಲಯ ಹಾಗೂ ಊರಿನ ಒಳಗಡೆ ಪ್ರವೇಶ, ಕುಡಿಯುವ ನೀರಿನ ಹಕ್ಕು, ಮಹಿಳೆಯರು ಪುರುಷರಷ್ಟೇ ಸಮಾನ ಜೀವನ ನಡೆಸಲು ಕಾರಣರಾಗಿ ಕ್ರಾಂತಿಯೋಗಿ ಬಸವಣ್ಣ ಎನಿಸಿಕೊಂಡರು. ನುಡಿದಂತೆ ನಡೆದ ಬಸವಣ್ಣನವರು ರಚಿಸಿದ ವಚನಗಳು ಇಂದಿಗೂ ಜೀವಂತವಾಗಿವೆ ಎಂದು ಹೇಳಿದರು.

ಆತ್ಮವಿಶ್ವಾಸ ತುಂಬಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಮಾತನಾಡಿ, ಭಾರತದ ಇತಿಹಾಸದಲ್ಲಿ ಸಾಮಾಜಿಕ ಅಸಮಾನತೆ ವಿರುದ್ಧ ದನಿ ಎತ್ತಿದ ಅನೇಕ ಸಾಧು ಸಂತರು, ಶರಣರಲ್ಲಿ ಬಸವಣ್ಣನವರು ಅಗ್ರಗಣ್ಯರಾಗಿದ್ದಾರೆ. ಸಾಂಪ್ರದಾಯಿಕ ಮೌಡ್ಯಗಳು, ಡಾಂಭಿಕತೆಯನ್ನು ಪ್ರಶ್ನಿಸಿ ವಚನ ಸಾಹಿತ್ಯದ ಮೂಲಕ ಜನಸಾಮಾನ್ಯರಲ್ಲಿ ಆತ್ಮವಿಶ್ವಾಸ ತುಂಬಿ ಸಮಾಜವನ್ನು ಪರಿಷ್ಕರಣೆಗೊಳಪಡಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದರು.

ವಿಶ್ವಮಾನ್ಯರಾದ ಬಸವಣ್ಣ: ಜಗತ್ತಿನ ಎಲ್ಲಾ ಧರ್ಮಗಳ ಸಾರವನ್ನು ಅರಿತಿದ್ದ ಬಸವಣ್ಣನವರು ದಯೆ, ಕರುಣೆ ಇಲ್ಲದ ಧರ್ಮ ಯಾವುದೂ ಇಲ್ಲ. ದಯೆಯೇ ಧರ್ಮದ ಮೂಲವಯ್ಯ ಎಂದು ಸಾರಿ ವಿಶ್ವಮಾನ್ಯರಾದರು. ಅವರ ನಡೆ. ನುಡಿ, ಸದ್ಗುಣ, ವಚನಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಮ ಸಮಾಜ ನಿರ್ಮಾಣ: ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಮಾತನಾಡಿ ಸಮಾಜದ ಎಲ್ಲರನ್ನು ಸಮಾನತೆಯಿಂದ ಕಾಣಬೇಕೆಂದು 12ನೇ ಶತಮಾನದಲ್ಲಿಯೆ ಬಸವಣ್ಣನವರು ತಿಳಿಸಿದ್ದರು. ಅವರ ಉದ್ದೇಶ ಸಮ ಸಮಾಜದ ನಿರ್ಮಾಣವೇ ಆಗಿತ್ತು. ಅದನ್ನು ನಾವೆಲ್ಲರೂ ಪಾಲನೆ ಮಾಡಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌. ಚನ್ನಪ್ಪ ಬಸವ ಜಯಂತಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಕದಳಿ ಮಹಿಳಾ ತಂಡದ ಸದಸ್ಯರು ನಡೆಸಿಕೊಟ್ಟ ಬಸವಣ್ಣನವರ ವಚನಗಳ ಗಾಯನ ಸಂಗೀತ ಗಮನ ಸೆಳೆಯಿತು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಗುಂಡ್ಲುಪೇಟೆ: ಸರ್ವ ಸಮುದಾಯದ ಭಕ್ತ ಶ್ರೇಷ್ಠ ಹಾಗೂ ಸಂತ ಶ್ರೇಷ್ಠ ಕನಕದಾಸರ ಸಾಮಾಜಿಕ ಕಳಕಳಿ ಇಂದಿಗೂ ಪ್ರಸ್ತುತವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ತತ್ವ,...

  • ಕೊಳ್ಳೇಗಾಲ: ಸರ್ವೋಚ್ಚ ನ್ಯಾಯಾಲಯವು ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾನೂನು ಅರಿವು ನೆರವು ನೀಡುತ್ತಿದೆ. ಇದರ ಬಳಕೆಯನ್ನು ಮಾಡಿಕೊಳ್ಳಬೇಕು...

  • ಹನೂರು: ಕಳೆದ 15 ದಿನಗಳಿಂದ ಪೋಡಿನಲ್ಲಿ ಕಾಣಿಸಿಕೊಂಡಿರುವ ಕಾಯಿಲೆಯಿಂದ 30ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಅಲ್ಲದೆ, 50ಕ್ಕೂ ಹೆಚ್ಚು ಮೇಕೆಗಳು ಮೃತಪಟ್ಟಿರುವ...

  • ಚಾಮರಾಜನಗರ: ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾಶಂಕರ್‌ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಮಾತನಾಡಿದ್ದು, ಅವರನ್ನು...

  • ಚಾಮರಾಜನಗರ: ಚಾಮರಾಜನಗರ ಹಾಲು ಉತ್ಪಾದಕರ ಒಕ್ಕೂಟ (ಚಾಮುಲ್‌) ದಲ್ಲಿ ಖಾಲಿಯಿರುವ 72 ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಹಣ ನೀಡಿದ...

ಹೊಸ ಸೇರ್ಪಡೆ