ನೀರಿನ ಸಮಸ್ಯೆ ಪರಿಹಾರಕ್ಕೆ ಎಚ್ಚರ ವಹಿಸಿ

Team Udayavani, Jan 17, 2020, 11:53 AM IST

cn-tdy-1

ಚಾಮರಾಜನಗರ: ಬೇಸಿಗೆ ಸನ್ನಿಹಿತವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿದರು.

ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಕುಡಿಯುವ ನೀರಿನ ಪೂರೈಕೆ ಬಗೆಗೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದ ಅವರು, ಬೇಸಿಗೆಯಲ್ಲಿ ಉಂಟಾಗಬಹುದಾದ ನೀರಿನ ಸಮಸ್ಯೆಯನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು. ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನುತ್ವರಿತವಾಗಿ ಪೂರ್ಣಗೊಳಿಸಬೇಕು. ಜತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ (ಆರ್‌ಓ ಪ್ಲ್ಯಾಂಟ್‌) ವ್ಯರ್ಥವಾಗುವ ನೀರನ್ನು ಬಳಕೆ ಮಾಡುವ ವಿಧಾನಗಳ ಬಗ್ಗೆ ಕಾರ್ಯಯೋಜನೆ ರೂಪಿಸಿ, ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಸಮನ್ವಯದಿಂದ ಕಾರ್ಯನಿರ್ವಹಿಸಿ: ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿಪ್ರಗತಿ ಪರಾಮರ್ಶಿಸಿದ ಉಸ್ತುವಾರಿ ಕಾರ್ಯದರ್ಶಿಯವರು, ನಿಗದಿತ ಅವಧಿಯೊಳಗೆ ಯೋಜನೆ ಕೆಲಸಗಳು ಪೂರ್ಣವಾಗಬೇಕು. ಸಮನ್ವಯದಿಂದ ಇಲಾಖೆಗಳು ಕಾರ್ಯನಿರ್ವಹಿಸಿ, ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.

ಸಮರ್ಪಕವಾಗಿ ಅನುದಾನ ಬಳಸಿಕೊಳ್ಳಿ: ವಿವಿಧ ಇಲಾಖೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ಅನುಕೂಲ ಕಲ್ಪಿಸಬೇಕು. ಪ್ರತಿ ತಿಂಗಳು ಯೋಜನೆಯ ಕುರಿತು ಪ್ರಗತಿ ಪರಿಶೀಲಿಸಬೇಕು. ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅನುದಾನದಡಿ ವೆಚ್ಚ ಮಾಡಲಾದ ಖರ್ಚು- ವೆಚ್ಚಗಳ ಮಾಹಿತಿಯನ್ನು ಪ್ರತಿ ಮಾಹೆ ಕಡ್ಡಾಯವಾಗಿ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇ-ಆಫೀಸ್‌ ನಿರ್ವಹಣೆಗೆ ಸಜ್ಜಾಗಿ: ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್‌ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದ ಅವರು, ಇ-ಆಫೀಸ್‌ ಮೊದಲ ಹಂತದಲ್ಲಿ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ, ಪೊಲೀಸ್‌ ವರಿಷ್ಠಾಧಿಕಾರಿಯವರ ಕಚೇರಿ ಹಾಗೂ ಅರಣ್ಯ ಇಲಾಖೆಗಳಲ್ಲಿ ಆರಂಭವಾಗಿದೆ. ಉಳಿದ ಇಲಾಖೆಗಳು ಸಹ ಇ-ಆಫೀಸ್‌ ನಿರ್ವಹಣೆಗೆ ಸಜ್ಜಾಗಬೇಕು. ಸಕಾಲದಡಿ ಎಲ್ಲಾ ಇಲಾಖೆಗಳು ಅರ್ಜಿ ಸ್ವೀಕರಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ರಸಗೊಬ್ಬರಗಳ ದಾಸ್ತಾನು, ಮಳೆ- ಬೆಳೆ, ಮೇವು ಲಭ್ಯತೆ, ಬೆಳೆ ಸಮೀಕ್ಷೆ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಚ್‌. ನಾರಾಯಣರಾವ್‌, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ, ಕೊಳ್ಳೇಗಾಲ ಉಪವಿಭಾಗಾಧಿಕಾರಿ ನಿಖೀತಾ ಚಿನ್ನಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.