ತಂಬಾಕು ನಿಯಂತ್ರಣ ಕಾಯ್ದೆ ಬಗ್ಗೆ ಅರಿವು ಮೂಡಿಸಿ

Team Udayavani, Aug 20, 2019, 3:00 AM IST

tambaku

ಚಾಮರಾಜನಗರ: ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಸಲಹೆ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೂಚನಾ ಫ‌ಲಕ ಅಳವಡಿಸಿ: ತಂಬಾಕು ಮಾರಾಟಮಾಡುವ ಅಂಗಡಿಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯ ಸೂಚನಾ ಫ‌ಲಕಗಳನ್ನು ಅಳವಡಿಸುವಂತೆ ಸೂಚನೆ ನೀಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆ ನಡೆಸುವಾಗ ಸೆಕ್ಷನ್‌4 ಮತ್ತು 6(ಬಿ) ಕುರಿತು ವ್ಯಾಪಕ ಪ್ರಚಾರ ಮಾಡಬೇಕು ಎಂದು ತಿಳಿಸಿದರು.

ಅರಿವು ಮೂಡಿಸಿ: ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಕಾರ್ಯಕ್ರಮ ನೆರವೇರಿಸುವ ಮುನ್ನ ಮಕ್ಕಳಿಗೆ ತಂಬಾಕು ನಿಯಂತ್ರಣದ ಮಾಹಿತಿ ಫ‌ಲಕಗಳನ್ನು ಪ್ರದರ್ಶನ ಮಾಡುವ ಮೂಲಕ ಅರಿವು ಮೂಡಿಸಬೇಕು. ಶಾಲೆಯ ಸುತ್ತು ಗೋಡೆಗಳಲ್ಲಿ ತಂಬಾಕು ನಿಯಂತ್ರಣದ ಮಾಹಿತಿ ಚಿತ್ರ ಬಿಡಿಸಿ ಜಾಗೃತಿ ಮೂಡುವಂತೆ ಕಾರ್ಯೋನ್ಮಖರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಂಬಾಕಿನಿಂದ ಕಾಯಿಲೆ: ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ನಾಗರಾಜು ಮಾತನಾಡಿ, ತಂಬಾಕು ಸೇವನೆಯಿಂದಾಗಿ ದೇಶದಲ್ಲಿ ವರ್ಷಕ್ಕೆ 70 ಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ. ಮದ್ಯಪಾನ, ಗುಟ್ಕಾ, ತಂಬಾಕು ಸೇವನೆಯಿಂದ ಹೃದಯ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ವರದಿ ಸಲ್ಲಿಸಬೇಕು: ತಂಬಾಕು ನಿಯಂತ್ರಣ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಅಧಿಕಾರಿಗಳು ದಂಡ ವಿಧಿಸಬೇಕು. ಪ್ರತಿ ತಿಂಗಳು ತಂಬಾಕು ನಿಯಂತ್ರಣ ಕಾಯ್ದೆ ಕಾರ್ಯಕ್ರಮದ ಮಾಸಿಕ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಾಗರಾಜು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಸಿ. ರವಿ, ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಪ್ರಶಾಂತ್‌, ಸಮಾಜ ಕಾರ್ಯಕರ್ತ ವೀರಣ್ಣ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.