ಪ್ರವಾಸಿಗರತ್ತ ಕೈ ಬೀಸುತ್ತಿರುವ ಭರಚುಕ್ಕಿ


Team Udayavani, Jul 25, 2019, 3:00 AM IST

pravasigara

ಕೊಳ್ಳೇಗಾಲ: ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಪುಷ್ಯ ಮಳೆ ಅಬ್ಬರಕ್ಕೆ ಕೃಷ್ಣರಾಜಸಾಗರ ಮತ್ತು ಕಬಿನಿ ಡ್ಯಾಂಗಳಿಗೆ ನೀರು ಹರಿದು ಬಂದ ಪರಿಣಾಮ ಇಷ್ಟು ದಿನ ನೀರಿಲ್ಲದೆ ಬಣಗುಡುತ್ತಿದ್ದ ತಾಲೂಕಿನ ಭರಚುಕ್ಕಿ ಜಲಪಾತ ಧುಮ್ಮಿಕ್ಕಿ ಹರಿದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ತಾಲೂಕಿನ ಭರಚುಕ್ಕಿ ಜಲಪಾತ ಪ್ರವಾಸಿಗರನ್ನು ಆಕರ್ಷಿಸುವ ಹೆಸರಾಂತ ಜಲಪಾತವಾಗಿದೆ. ಶಿವನಸಮುದ್ರದ ಸಮೀಪ ಗಗನಚುಕ್ಕಿ ಜಲಪಾತವಿದೆ. ಭರಚುಕ್ಕಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಗಗನಚುಕ್ಕಿ ಜಲಪಾತವನ್ನು ವೀಕ್ಷಣೆ ಮಾಡಿ ತೆರಳುವುದು ವಾಡಿಕೆಯಾಗಿದೆ.

ಮಳೆಯ ಅಬ್ಬರ: ಮಲೆನಾಡು ಕರಾವಳಿ ಪ್ರದೇಶಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ನದಿಗಳ ಭರ್ತಿಯಿಂದಾಗಿ ನೀರು ಹರಿದು ಕೃಷ್ಣರಾಜಸಾಗರ ಡ್ಯಾಂ ಮತ್ತು ಕಬಿನಿ ಡ್ಯಾಂ ತುಂಬಲಾರಂಭಿಸಿದಂತೆ ಅಧಿಕಾರಿಗಳು ಕೃಷ್ಣರಾಜಸಾಗರ ಡ್ಯಾಂನಿಂದ 5 ಸಾವಿರ ಕ್ಯೂಸೆ ಕ್‌, ಕಬಿನಿಯಿಂದ 3 ಸಾವಿರ ಕ್ಯೂಸೆ ಕ್‌ ನೀರು ಬಿಡಲಾಗುತ್ತಿದೆ. ಜಲಪಾತಕ್ಕೆ ನೀರು ಹರಿದು ಬಂದು ಭರಚುಕ್ಕಿ ಜಲಪಾತ ಹಾಲಿನ ನೊರೆಯಂತೆ ಹರಿಯಲಾರಂಭಿಸಿದೆ.

ಕುಡಿಯುವ ನೀರು ಪೂರೈಕೆಗಾಗಿ: ಕೇಂದ್ರ ಜಲನೀತಿ ಆಯೋಗ ತಮಿಳುನಾಡಿನಲ್ಲಿ ಕುಡಿಯಲು ನೀರಿಲ್ಲದೆ ರೈಲುಗಳ ಮೂಲಕ ಕರ್ನಾಟಕದಿಂದ ತಮಿಳುನಾಡಿಗೆ ಸಾಗಿಸಲಾಗುತ್ತಿದೆ. ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಮಳೆ ಬೀಳುತ್ತಿರುವುದರಿಂದ ತಮಿಳುನಾಡಿಗೆ ಮಾನವೀಯತೆಯ ದೃಷ್ಟಿಯಿಂದ ಕುಡಿಯುವ ನೀರು ಪೂರೈಕೆಗೆ ಕೆಆರ್‌ಎಸ್‌ ಮತ್ತು ಕಬಿನಿ ಡ್ಯಾಂಗಳಿಗೆ 8 ಸಾವಿರ ಕ್ಯೂಸೆ ಕ್‌ ನೀರು ಬಿಡಲಾಗುತ್ತಿದೆ. ನೀರು ಹರಿದು ಬಂದು ಭರಚುಕ್ಕಿ ಜಲಪಾತದ ಮೂಲಕವೇ ಹರಿದು ಹೋಗುವುದರಿಂದ ಜಲಪಾತ ಪ್ರವಾಸಿಗರಿಗೆ ಆಕರ್ಷಣೆಯವಾಗಿ ಗೋಚರವಾಗುತ್ತಿದೆ.

ಕೈ ಬೀಸಿ ಕರೆಯುವ ಜಲಪಾತ: ಭರಚುಕ್ಕಿ ಜಲಪಾತ ಬಣಗುಡುತ್ತಿದ್ದು, ಪ್ರವಾಸಿಗರು ವೀಕ್ಷಣೆ ಮಾಡಿ ಬರಿದಾದ ಜಲಪಾತವನ್ನು ಕಂಡು ಅಸಮಾಧಾನದಿಂದ ತೆರಳುತ್ತಿದ್ದ ಹೊತ್ತಿನಲ್ಲೇ ಕೆಆರ್‌ಎಸ್‌ ಮತ್ತು ಕಬಿನಿ ನಾಲೆಯಿಂದ ನೀರು ಬಿಡುತ್ತಿದ್ದಂತೆ ಜಲಪಾತದಲ್ಲಿ ಹರಿದು ಜನರನ್ನು ಕೈಬೀಸಿ ಕರೆಯುವಂತೆ ಧುಮ್ಮಿಕ್ಕುತ್ತಿದೆ.

ಬಾರಿ ಸಂಖ್ಯೆಯಲ್ಲಿ ಜನರು: ಕಳೆದ ವರ್ಷ ಕಾವೇರಿ ಮತ್ತು ಕಬಿನಿ ಡ್ಯಾಂಗಳಿಂದ ಅತಿಯಾದ ಹೊರಹರಿವು ನೀರಿನಿಂದಾಗಿ ಕಾವೇರಿ ನದಿಯಲ್ಲಿ ಪ್ರವಾಹ ಉಕ್ಕಿ ವಿವಿಧ ಗ್ರಾಮಗಳು ಜಲಾವೃತಗೊಂಡಿತ್ತು. ನಂತರ ನದಿಯ ನೀರು ಭರಚುಕ್ಕಿಯಲ್ಲಿ ಮತ್ತಷ್ಟು ರಮಣೀಯವಾಗಿ ಬೀಳುತ್ತಿದ್ದಂತೆ ಪ್ರವಾಸಿಗರ ದಂಡು ಬಾರಿ ಸಂಖ್ಯೆಯಲ್ಲಿ ಆಗಮಿಸಿ ಜಲಪಾತ ವೀಕ್ಷಣೆ ಮಾಡಿ ಕಣ್ತುಂಬಿಕೊಂಡಿದ್ದರು.

ಸಿಸಿ ಕ್ಯಾಮೆರಾ ಅಳವಡಿಕೆ: ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುವುದನ್ನು ವೀಕ್ಷಣೆ ಮಾಡುವ ಸಲುವಾಗಿ ಪ್ರವಾಸಿಗರ ದಂಡೇ ಆಗಮಿಸುತ್ತಿದ್ದಂತೆ ಎಚ್ಚೆತ್ತ ತಾಲೂಕು ಆಡಳಿತ ಮುಂಜಾಗ್ರತಾ ಕ್ರಮವಾಗಿ ಅಪಘಾತ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಮತ್ತು ತಿಳಿವಳಿಕೆಯ ಫ‌ಲಕ ಹಾಗೂ ಬ್ಯಾನರ್‌ಗಳನ್ನು ಅಳವಡಿಸಿ ಜಲಪಾತದಲ್ಲಿ ಯಾವುದೆ ತರಹದ ಸಾವು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ.

ಸೆಲ್ಫೀಗಾಗಿ ಬರುವವರೇ ಹೆಚ್ಚು: ಜಲಪಾತವನ್ನು ವೀಕ್ಷಣೆ ಮಾಡಲು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಪ್ರವಾಸಿಗರು ಜಲಪಾತ ವೀಕ್ಷಣೆ ಮಾಡಿ ನಂತರ ಜಲಪಾತದೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡು ತೀವ್ರ ಅಸಮಾಧಾನದಿಂಲೇ ಇಷ್ಟು ಬೇಗ ಹೋಗ ಬೇಕೆ ಎಂದು ಕೊಂಡು ತೆರಳಿದರು. ನೀರು ಧುಮ್ಮಿಕ್ಕಿ ಹರಿಯುವುದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಪೊಲೀಸ್‌ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜಲಪಾತದಲ್ಲಿ ನೀರು ಹರಿಯುತ್ತಿದ್ದಂತೆ ಪ್ರವಾಸಿಗರು ಆಗಮಿಸುವ ಮುನ್ಸೂಚನೆ ಇದ್ದು, ನೀರಿನ ತಳಭಾಗಕ್ಕೆ ತೆರಳದಂತೆ ಮತ್ತು ಜಲಪಾತವನ್ನು ಮೇಲ್ಭಾಗದಿಂದಲೇ ವೀಕ್ಷಣೆ ಮಾಡಿ ತೆರಳುವಂತೆ ಸಂಬಂಧಿಸಿದ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಜಲಪಾತದಲ್ಲಿ ಯಾವುದೇ ತರಹದ ಘಟನೆಗಳು ಸಂಭವಿಸಿದಂತೆ ಕ್ರಮ ಕೈಗೊಳ್ಳಲಾಗಿದೆ.
-ಏಡುಕೊಂಡಲು, ಡಿಎಫ್ಒ

* ಡಿ.ನಟರಾಜು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.