ಅಭಿವೃದ್ಧಿ ಬಗ್ಗೆ ಯೋಚಿಸದ ಬಿಜೆಪಿ

Team Udayavani, Apr 9, 2019, 3:00 AM IST

abhivruddi

ಚಾಮರಾಜನಗರ: ಬಿಜೆಪಿಗೆ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತನೆ ಇಲ್ಲ. ಜನರ ಭಾವನೆಗಳನ್ನು ಕೆರಳಿಸುವ ವಿಚಾರಗಳನ್ನು ಹರಡುತ್ತಾ ಚುನಾವಣೆ ಎದುರಿಸುತ್ತಿದೆ ಎಂದು ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಐವಾನ್‌ ಡಿಸೋಜ ಟೀಕಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ದೇಶದಲ್ಲಿ ಶೇ. 17ರಷ್ಟು ಅಲ್ಪಸಂಖ್ಯಾತರಿದ್ದು ಅವರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದರು.

ಬಿಜೆಪಿಯಿಂದ ತಾರತಮ್ಯ: ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ 2280 ಕೋಟಿ ನೀಡಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಆಡಳಿತದಲ್ಲಿ ಕೇವಲ 200 ಕೋಟಿ ನೀಡಿದ್ದರು. ಬಿಜೆಪಿಯ ತಾರತಮ್ಯ ನೀತಿ ಇದರಲ್ಲೇ ಅರ್ಥವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಎಂಬು ವಿಭಜನೆ ಮಾಡುತ್ತಿದ್ದಾರೆ.

ಪ್ರಧಾನಿಯೊಬ್ಬರು ಈ ರೀತಿಯಾಗಿ ತಮ್ಮ ದೇಶದ ನಾಗರಿಕರನ್ನು ಪ್ರತ್ಯೇಕಿಸಿ ಮಾತನಾಡುವುದು ಅವರಿಗೆ ಶೋಭೆ ತರುವಂಥದ್ದಲ್ಲ. ದೇಶವನ್ನು ವಿಭಜನೆ ಮಾಡಬೇಡಿ. ದೇಶದ ಸಂವಿಧಾನದ ಬಗ್ಗೆ ನಿಮಗೆ ನಂಬಿಕೆಯಿಲ್ಲ ಎಂದು ಅವರು ಆರೋಪಿಸಿದರು.

ಧ್ರುವ ಬಗ್ಗೆ ಉತ್ತಮ ಅಭಿಪ್ರಾಯ: ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಕೂಟದ ಅಭ್ಯರ್ಥಿಗಳು ರಾಜ್ಯದಲ್ಲಿ 22 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ. ಚಾ.ನಗರ ಅಭ್ಯರ್ಥಿ ಧ್ರುವನಾರಾಯಣ ಜನರ ಮಧ್ಯೆ ಇರುವ ರಾಜ್ಯದ ನಂ.1 ಸಂಸದ. ಸಚಿವರಾಗಿದ್ದ ದಿ.ಅನಂತಕುಮಾರ್‌ ಅವರೇ ಅವರನ್ನು ಉತ್ತಮ ಸಂಸದ ಎಂದು ಶ್ಲಾ ಸಿದ್ದರು. ಬಿಜೆಪಿಯವರೇ ಹೀಗೆ ಹೇಳುವಾಗ, ಜನ ಸಾಮಾನ್ಯರಿಗೆ ಧ್ರುವ ಅವರ ಕೆಲಸದ ಬಗ್ಗೆ ಉತ್ತಮ ಅಭಿಪ್ರಾಯವಿದೆ ಎಂದರು.

ಜನರ ಒಲವು ಮೃತ್ರಿ ಪಕ್ಷದತ್ತ: ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, ಜನರ ಒಲವು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿಕೂಟದ ಪರವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಹುಮತದಿಂದ ಅಧಿಕಾರಕ್ಕೆ ತರಬೇಕಿತ್ತು ಎಂಬುದು ಜನರ ಮನಸ್ಸಿನಲ್ಲಿದೆ. ಕಾಂಗ್ರೆಸ್‌ ಸೋಲಿಸಿದ್ದ ನೋವು ಜನರ ಮನಸ್ಸಿನಲ್ಲಿ ಕಾಣುತ್ತಿದೆ. ಈ ಬಾರಿ ಲೋಕಸಭೆಯಲ್ಲಿ ಕಾಂಗ್ರೆಸ್‌ ಪರ ಮತ ಹಾಕಬೇಕು ಎಂದು ಮತದಾರರು ಮನಸ್ಸು ಮಾಡಿದ್ದಾರೆ ಎಂದರು.

ಪೋಳ್ಳು ಭರವಸೆ ನೀಡುವ ಮೋದಿ: ಬಿಜೆಪಿ ಅಧಿಕಾರದಲ್ಲಿದ್ದಾಗ ಐದು ವರ್ಷ ಕೆಲಸ ಮಾಡಲಿಲ್ಲ. ಜನರಿಗೆ ನೀಡಿದ್ದ ಆಶ್ವಾಸನೆ ಈಡೇರಿಸಲಿಲ್ಲ. ಬಿಜೆಪಿ ಮತ ಕೇಳಲು ಯಾವುದೇ ಬಂಡವಾಳ ಇಲ್ಲದೇ ಚುನಾವಣೆ ಎದುರಿಸುವಂತಾಗಿದೆ. ಜನರ ಮುಂದೆ ಬಿಜೆಪಿ ಕೆಲಸದ ಮೇಲೆ ಚರ್ಚೆಗೆ ಬರಲು ಸಿದ್ದವಿಲ್ಲ. ಭಯೋತ್ಪಾದಕರ ಮತ್ತು ಸೈನಿಕರ ನಡುವೆ ನಡೆದ ಸರ್ಜಿಕಲ್‌ ಸ್ಟ್ರೈಕ್‌ ಅನ್ನು ಬಿಜೆಪಿ ಬಂಡವಾಳ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಬಿಜೆಪಿ ರಾಜ್ಯದಲ್ಲಿ 22 ಸ್ಥಾನ ಗೆಲ್ಲುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ದೇಶದ ಚೌಕಿದಾರ್‌ ಎಂದು ಹೇಳುತ್ತಿದ್ದಾರೆ. ಜನರ ಭರವಸೆ ಈಡೇರಿಸದೇ ವಿವಿಧ ಬಣ್ಣಗಳಲ್ಲಿ ಜನರ ಬಳಿಗೆ ಬರುತ್ತಿದ್ದಾರೆ. ಇದು ಜನರಿಗೆ ತಿಳಿದಿದ್ದು, ಬಿಜೆಪಿ ವಿರುದ್ದ ಮತ ಚಲಾಯಿಸಲಿದ್ದಾರೆ ಎಂದು ಡಿಸೋಜ ಹೇಳಿದರು. ತಾಪಂ ಮಾಜಿ ಸದಸ್ಯ ರಾಜು, ಮುಖಂಡರಾದ ಸೈಯದ್‌, ಪಿಯೂಷ್‌, ಪತ್ರಿಕಾ ಕಾರ್ಯದರ್ಶಿ ಅರುಣ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.