
ಪ್ರಧಾನಿ ಕಚೇರಿ ಅಧಿಕಾರಿ ಎಂದು ಡಿಸಿಗೆ ಕರೆ : ದೂರು ದಾಖಲು!
ಅಪರಿಚಿತ ವ್ಯಕ್ತಿಯ ವಿರುದ್ಧ ಚಾರುಲತಾ ಸೋಮಲ್ ರಿಂದ ಪೊಲೀಸರಿಗೆ ದೂರು
Team Udayavani, Jul 3, 2022, 9:52 PM IST

ಚಾರುಲತಾ ಸೋಮಲ್
ಚಾಮರಾಜನಗರ: ಜಿಲ್ಲಾಧಿಕಾರಿಯವರಿಗೆ ದೂರವಾಣಿ ಕರೆ ಮಾಡಿ, ತಾನು ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿ ಎಂದು ಸುಳ್ಳು ಹೇಳಿ ಬಿಳಿಗಿರಿರಂಗನ ಬೆಟ್ಟ ವೀಕ್ಷಣೆಗೆ ವ್ಯವಸ್ಥೆೆಗೆ ಮಾಡುವಂತೆ ತಿಳಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಜೂ.27 ರಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಕರೆ ಮಾಡಿದ ಅಪರಿಚಿತ, ತಾನು ಗುಜರಾತ್ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ. ಪ್ರಸ್ತುತ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಜಿಲ್ಲೆೆಯ ಬಿಳಿಗಿರಿರಂಗನಬೆಟ್ಟಕ್ಕೆೆ ಭೇಟಿ ನೀಡುತ್ತಿದ್ದು, ದೇವಾಲಯ ಭೇಟಿ, ದೊಡ್ಡಸಂಪಿಗೆ ಮರ ವೀಕ್ಷಣೆ ಮತ್ತು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು. ನಿಮ್ಮ ಹೆಸರು ವಿವರ ನೀಡುವಂತೆ ಜಿಲ್ಲಾಧಿಕಾರಿ ಕೇಳಿದಾಗ ಗೌಪ್ಯತೆಯ ಕಾರಣ ಹೆಸರು ಹೇಳಲಾಗುವುದಿಲ್ಲ ಎಂದು ಆತ ತಿಳಿಸಿದ್ದ.
ಇದರಿಂದ ಅನುಮಾನಗೊಂಡ ಜಿಲ್ಲಾಧಿಕಾರಿಯವರು ಆತನ ಮೊಬೈಲ್ ಸಂಖ್ಯೆೆಯ ಮೂಲಕ ವಿವರಗಳನ್ನು ಕಲೆ ಹಾಕಿದಾಗ ಆತ ನಕಲಿ ಅಧಿಕಾರಿ ಎಂಬುದು ಗೊತ್ತಾಗಿದೆ. ಈತನ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಪಟ್ಟಣ ಠಾಣೆಯಲ್ಲಿ ಈ ಸಂಬಂಧ ವಂಚನೆ ಪ್ರಕರಣ ದಾಖಲಾಗಿದೆ. ಆ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
