ಕಾವೇರಿ ಕುಡಿಯುವ ನೀರು ಸರಬರಾಜು ಸ್ಥಗಿತ, ಪರದಾಟ

Team Udayavani, May 12, 2019, 3:00 AM IST

kaveri

ಸಂತೆಮರಹಳ್ಳಿ: ಕಳೆದ ಒಂದು ವಾರದಿಂದ ಕಾವೇರಿ ಕುಡಿಯುವ ನೀರಿನ ಪೂರೈಕೆ ಮಾಡುವ ಘಟಕಕ್ಕೆ ಪೂರೈಕೆಯಾಗುವ ಪೈಪ್‌ ಲೈನ್‌ಗಳು ಕೆಲವು ಕಡೆ ಸೋರಿಕೆಯಾಗುತ್ತಿದೆ. ಈ ಕಾರಣ ಪಟ್ಟಣಕ್ಕೆ ನೀರು ಸ್ಥಗಿತಗೊಂಡಿದ್ದು, ಇದರಿಂದ ಕೆಲವು ಬಡಾವಣೆಯ ನಿವಾಸಿಗಳು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣಕ್ಕೆ ಕಾವೇರಿ ನದಿಯ ಮೂಲಕ ಕುಡಿವ ನೀರು ಪೂರೈಕೆಯಾಗದೆ ಕೆಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಕಾವೇರಿ ನದಿಯಿಂದ ಪೈಪ್‌ಲೈನ್‌ ಮೂಲಕ ನೀರನ್ನು ತರಲಾಗುತ್ತದೆ. ಇದಕ್ಕೆ ಉತ್ತಂಬಳ್ಳಿ ಗ್ರಾಮದಲ್ಲಿ ಶುದ್ಧ ನೀರನ್ನು ಪೂರೈಸಲು ಉದ್ದೇಶದಿಂದ 2011 ರಲ್ಲಿ ಕರ್ನಾಟಕ ಜಲ ಮಂಡಲಿ ವತಿಯಿಂದ 3.54 ದಶಲಕ್ಷ ಲೀ. ಸಾಮರ್ಥ್ಯದ ನೀರು ಶುದ್ಧೀಕರಣ ಘಟಕವನ್ನು ಆರಂಭಿಸಲಾಗಿದೆ.

ಇಲ್ಲಿಂದಲೇ ಪಟ್ಟಣಕ್ಕೆ ನೀರು ಪೂರೈಕೆಯಾಗುತ್ತಿದೆ. ಆದರೆ ಕಳೆದ ಒಂದು ವಾರದಿಂದ ಕಾವೇರಿ ನದಿಯ ಮೂಲಕ ಪಟ್ಟಣಕ್ಕೆ ಕುಡಿಯುವ ನೀರಿನ ಪೂರೈಕೆ ಮಾಡುವ ನಿಟ್ಟಿನಲ್ಲಿ ಮುಳ್ಳೂರು ಘಟಕದ ಮೂಲಕ ಉತ್ತಂಬಳ್ಳಿ, ಮಾಂಬಳ್ಳಿ, ಮದ್ದೂರು, ಯರಿಯೂರು ಗ್ರಾಮಗಳಲ್ಲಿ ಹಾದು ಬರುವ ಕುಡಿಯುವ ನೀರಿನ ಪೈಪ್‌ ಲೈನ್‌ ಒಡೆದು ಹೋಗಿದೆ.

ಇದರಿಂದ ಪಟ್ಟಣದಲ್ಲಿ ನೀರಿನ ಸಮಸ್ಯೆ ಅಧಿಕವಾಗಿದೆ. ಇದನ್ನು ರಿಪೇರಿ ಮಾಡಿಸುವ ಗೋಜಿಗೆ ಯಾರೂ ಹೋಗಿಲ್ಲ. ಇದರಿಂದ ಬಡವಾಣೆಗೆ ಪೂರೈಕೆಯಾಗುವ ನೀರು ಮದ್ಯದಲ್ಲಿಯೇ ಪೊಲಾಗುತ್ತಿದೆ. ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬುದು ಬಡಾವಣೆ ನಿವಾಸಿಗಳು ಆರೋಪವಾಗಿದೆ.

ಮೂಲಭೂತ ಸೌಲಭ್ಯ ಕಲ್ಪಿಸಿ: ಘಟಕದ ಸುತ್ತಲೂ ಕಾಂಪೌಂಡ್‌ ವ್ಯವಸ್ಥೆಯಿಲ್ಲ. ಈ ಸ್ಥಳವು ಹಾವು ಚೇಳು, ಕ್ರಿಮಿಕೀಟಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ನೀರು ಸರಬರಾಜಾಗುವ ಸ್ಥಳಗಳಲ್ಲಿ ಪಾಚಿ ಕಟ್ಟಿಕೊಂಡಿದೆ. ಗಿಡಗಂಟಿಗಳು ಬೆಳೆದಿದೆ. ಶುದ್ಧವಾದ ಕುಡಿವ ನೀರಿನ ಘಟಕದಿಂದ ಕೆಲವು ವೇಳೆ ಹುಳ, ಕಸಕಡ್ಡಿ ಸೇರಿದಂತೆ ಇನ್ನಿತರ ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಬೇಕಾಗಿದೆ ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ಕುಡಿಯುವ ನೀರಿಗೆ ಕ್ರಮ: ಪಟ್ಟಣಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಘಟಕದಿಂದ ಹಾದು ಹೋಗಿರುವ ಉತ್ತಂಬಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸ ನಡೆಯುವ ಸ್ಥಳದಲ್ಲಿ ಕಾವೇರಿ ನೀರಿನ ಪೈಪ್‌ ಲೈನ್‌ ಒಡೆದು ಹೋಗಿದೆ. ಇದರಿಂದ ನೀರಿನ ಪೂರೈಕೆಯಲ್ಲಿ ವಿಳಂಬವಾಗಿದೆ. ಮತ್ತೆ ಮಾಂಬಳ್ಳಿ, ಯರಿಯೂರು, ಮದ್ದೂರು ಗ್ರಾಮಗಳಲ್ಲಿ ಹೊಸದಾಗಿ ಪೈಪ್‌ ಲೈನ್‌ ಜೋಡಿಸಲಾಗುತ್ತಿದೆ. ಈ ಕಾಮಗಾರಿಯು 2 ದಿನಗಳಲ್ಲಿ ಮುಗಿಸಿ ಪಟ್ಟಣಕ್ಕೆ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಪ.ಪಂ.ಆರೋಗ್ಯಾಧಿಕಾರಿ ಮಹೇಶ್‌ಕುಮಾರ್‌ ಹೇಳಿದರು.

ಕುಡಿವ ನೀರನ ಸಮಸ್ಯೆ ಉಲ್ಬಣಗೊಳ್ಳಲು ಅಧಿಕಾರಿಗಳು ಬೇಸಿಗೆ ಸಮಯದಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಮುಖ್ಯ ಕಾರಣ. ಈ ಸಂಬಂಧಪಟ್ಟ ಮೇಲಧಿಕಾರಿಗಳು ಕೂಡಲೇ ಕ್ರಮ ವಹಿಸಿ ಕುಡಿಯುವ ನೀರಿನ ಪೂರೈಕೆಯಾಗುವ ನಿಟ್ಟಿನಲ್ಲಿ ಮುಂದಾಗಬೇಕು
-ನಂಜುಂಡ ಬಡಾವಣೆ ನಿವಾಸಿ

* ಫೈರೋಜ್‌ಖಾನ್‌

ಟಾಪ್ ನ್ಯೂಸ್

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.