Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್‌ ಯಂತ್ರಗಳು

Team Udayavani, Dec 3, 2023, 4:20 PM IST

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್‌ ಯಂತ್ರಗಳು

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಜಿಲ್ಲೆಯ ಮೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 14 ಡಯಾಲಿಸಿಸ್‌ ಯಂತ್ರಗಳಿದ್ದು, ಸುಮಾರು 80ಕ್ಕೂ ಹೆಚ್ಚು ಮಂದಿ ರೋಗಿಗಳು ಡಯಾಲಿಸಿಸ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 6, ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ 3, ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ 5 ಡಯಾಲಿಸಿಸ್‌ ಯಂತ್ರಗಳಿವೆ. ಮೂರು ಆಸ್ಪತ್ರೆಗಳಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಡಯಾಲಿಸಿಸ್‌ ಕೇಂದ್ರ ಸ್ಥಾಪಿಸ ಲಾಗಿದೆ. ಇದನ್ನು ಖಾಸಗಿ ಏಜೆನ್ಸಿಗಳು ನಿರ್ವಹಣೆ ಮಾಡುತ್ತಿವೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಸ್ತುತ 54 ಮಂದಿ ರೋಗಿಗಳು ಡಯಾಲಿಸಿಸ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. 25 ಮಂದಿ ವೆಯ್ಟಿಂಗ್‌ ಲಿಸ್ಟ್‌ನಲ್ಲಿದ್ದಾರೆ. ಕೊಳ್ಳೇಗಾಲ ಉಪವಿಭಾಗ ಸರ್ಕಾರಿ ಆಸ್ಪತ್ರೆಯಲ್ಲಿ 16 ಮಂದಿ ಡಯಾಲಿಸಿಸ್‌ ಚಿಕಿತ್ಸೆ ಪಡೆಯುತ್ತಿದ್ದು, 16 ಮಂದಿ ರೋಗಿಗಳು ವೆಯ್ಟಿಂಗ್‌ ಲಿಸ್ಟ್‌ನಲ್ಲಿದ್ದಾರೆ. ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ 18 ಮಂದಿ ರೋಗಿಗಳು ಡಯಾಲಿಸಿಸ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿ ಮೊದಲು 2 ಡಯಾಲಿಸಿಸ್‌ ಯಂತ್ರಗಳಿದ್ದವು. ಇತ್ತೀಚಿಗೆ ಶಾಸಕ ಗಣೇಶಪ್ರಸಾದ್‌ ಅವರು ಇನ್ನೊಂದು ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ.

ಜಿಲ್ಲೆಯ ಹನೂರಿನಲ್ಲಿ ತಾಲೂಕು ಆಸ್ಪತ್ರೆ ಇನ್ನೂ ಆಗಿಲ್ಲ. ಹಾಗಾಗಿ ಇಲ್ಲಿಗೆ ಡಯಾಲಿಸಿಸ್‌ ಕೇಂದ್ರ ಮಂಜೂರಾಗಿಲ್ಲ. ಹನೂರು ತಾಲೂಕಿನಲ್ಲಿ 24 ಮಂದಿ ರೋಗಿಗಳು ಡಯಾಲಿಸಿಸ್‌ ಚಿಕಿತ್ಸೆ ಪಡೆಯಲು ಎನ್‌ರೋಲ್‌ ಮಾಡಿಸಿದ್ದಾರೆ.

ಯಳಂದೂರು ತಾಲೂಕು ಆಸ್ಪತ್ರೆಯಲ್ಲೂ ಡಯಾಲಿಸಿಸ್‌ ಕೇಂದ್ರ ಇಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್‌ ಚಿಕಿತ್ಸೆ ದೊರಕುವುದರಿಂದ ಬಡ ಮತ್ತು ಕೆಳ ಮಧ್ಯಮ ವರ್ಗದ ರೋಗಿಗಳು ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಜಿಲ್ಲೆಯಲ್ಲಿ ಸುಮಾರು 50 ಮಂದಿ ರೋಗಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್‌ರೋಲ್‌ ಮಾಡಿಸಿ, ಯಂತ್ರಗಳ ಕೊರತೆ ಕಾರಣ ಕಾಯುವಿಕೆ ಪಟ್ಟಿಯಲ್ಲಿದ್ದಾರೆ. ಈಗ ಅವರು ಅನಿವಾರ್ಯವಾಗಿ ಖಾಸಗಿ ಡಯಾಲಿಸಿಸ್‌ ಕೇಂದ್ರಗಳಿಗೆ ಹೋಗಬೇಕಾಗಿದೆ.

ನೆಫ್ರಾಜಲಿಸ್ಟ್‌ ಇಲ್ಲ: ಜಿಲ್ಲಾ ಆಸ್ಪತ್ರೆಯಲ್ಲಿ 6 ಯಂತ್ರಗಳಿದ್ದು, ಒಂದು ದಿನಕ್ಕೆ ಮೂರು ಬ್ಯಾಚ್‌ಗಳಲ್ಲಿ ಡಯಾಲಿಸಿಸ್‌ ಮಾಡಲಾಗುತ್ತಿದೆ. ಈಗ ನಡೆಸುತ್ತಿರುವ ಖಾಸಗಿ ಏಜೆನ್ಸಿ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಯಂತ್ರಗಳು ಹಳೆಯದಾಗಿವೆ. ಪದೇ ಪದೆ ಕೆಡುತ್ತಿವೆ. ಇಲ್ಲಿ ಕೆಲಸ ನಿರ್ವಹಿಸುವ ತಂತ್ರಜ್ಞರಿಗೆ ವವೇತನ ಸಮರ್ಪಕವಾಗಿ ನೀಡಿರಲಿಲ್ಲ. ಹೀಗಾಗಿ ಅವರು ಹಿಂದೆ ಮುಷ್ಕರ ಸಹ ನಡೆಸಿದ್ದರು. ಡಯಾಲಿಸಿಸ್‌ ಕೇಂದ್ರದಲ್ಲಿ ಒಬ್ಬ ನೆಫ್ರಾಜಲಿಸ್ಟ್‌ ಇರಬೇಕು. ಆದರೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನೆಫ್ರಾಲಜಿಸ್ಟ್‌ ಇಲ್ಲ. ಪ್ರಸ್ತುತ ರೋಗಿಗಳು ಖಾಸಗಿ ನೆಫ್ರಾಜಲಿಸ್ಟ್‌ ಬಳಿ ತಪಾಸಣೆ, ಸಲಹೆ ಪಡೆಯಬೇಕು. ಅವರಿಗೆ 300 ರೂ. ಸಲಹಾ ವೆಚ್ಚ ನೀಡಬೇಕಾಗಿದೆ. ಸರ್ಕಾರಿ ನೆಫ್ರಾಜಲಿಸ್ಟ್‌ ನೇಮಿಸಬೇಕು ಎಂದು ರೋಗಿಗಳು ಒತ್ತಾಯಿಸಿದ್ದಾರೆ.

ಈಗ ಡಯಾಲಿಸಿಸ್‌ ಕೇಂದ್ರ ನಡೆಸುತ್ತಿರುವ ಖಾಸಗಿ ಏಜೆನ್ಸಿ ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬ ದೂರುಗಳಿವೆ. ಸದ್ಯದಲ್ಲೇ ಏಜೆನ್ಸಿ ಬದಲಾಗಲಿದೆ. ನೂತನ ಯಂತ್ರಗಳು ಸಹ ಬರಲಿವೆ. ಈಗ ಇರುವ ಸಮಸ್ಯೆಗಳು ಸದ್ಯದಲ್ಲೇ ನಿವಾರಣೆಯಾಗಲಿವೆ. ● ಡಾ.ಚಿದಂಬರ, ಡಿಎಚ್‌ಒ, ಚಾಮರಾಜನಗರ

– ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.