ಚಾಮರಾಜನಗರ: ಗಾಂಜಾ ಸಾಗಿಸುತ್ತಿದ್ದ ನಾಲ್ವರ ಬಂಧನ
Team Udayavani, Sep 12, 2020, 8:53 PM IST
ಚಾಮರಾಜನಗರ: ರಾಜ್ಯದಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಸಿಸಿಬಿ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿರುವ ಬೆನ್ನಲ್ಲೇ, ಜಿಲ್ಲೆಯಲ್ಲಿ 2 ಕೆಜಿ 30 ಗ್ರಾಂ ಒಣ ಗಾಂಜಾ ಸಾಗಿಸುತ್ತಿದ್ದ ನಾಲ್ವರನ್ನು ಜಿಲ್ಲಾ ಸೈಬರ್ ಅಪರಾಧ, ಆರ್ಥಿಕ ಅಪರಾಧಗಳು ಹಾಗೂ ಮಾದಕ ವಸ್ತು ನಿಯಂತ್ರಣ ವಿಶೇಷ ಠಾಣೆ (ಸಿಇಎನ್ ) ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಪೊಲೀಸರು ನಗರದ ಹೊರವಲಯದ ದೊಡ್ಡರಾಯಪೇಟೆ ಗೇಟ್ ಬಳಿ ನಾಲ್ವರನ್ನು ಬಂಧಿಸಿದ್ದಾರೆ.
ನಗರದ ಗಾಳಿಪುರ ನಿವಾಸಿ ಸಯ್ಯದ್ ರುಮಾನ್ (25), ಮೈಸೂರಿನ ಜನನಗರ ನಿವಾಸಿ ವೆಂಕಟೇಗೌ (25), ಹನೂರು ತಾಲೂಕಿನ ಕುರಟ್ಟಿ ಹೊಸೂರಿನ ಗೋವಿಂದರಾಜು (23), ಗಾಳಿಪುರ ನಿವಾಸಿ ಮಹಮದ್ ಅಲ್ತಾಫ್ (55) ಬಂಧಿತ ಆರೋಪಿಗಳು. ಸಿಇಎನ್ ಇನ್ಸ್ಪೆಕ್ಟರ್ ಮೋಹಿತ್ ಸಹದೇವ್ ನೇತೃತ್ವದ ತಂಡ ಈ ದಾಳಿ ನಡೆಸಿದೆ.
ಬಂಧಿತರು ಹನೂರು ತಾಲೂಕಿನ ಓರ್ವನಿಂದ 2 ಕೆಜಿ 30 ಗ್ರಾಂ ಒಣಗಾಂಜಾವನ್ನು 1 ಲಕ್ಷ ರೂ.ಗೆ ಖರೀದಿಸಿ ಮೈಸೂರಿಗೆ ಸಾಗಿಸುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳನ್ನು ಕೋವಿಡ್ ಟೆಸ್ಟ್ ನಡೆಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ